spot_img
Friday, April 3, 2026
spot_img

ಉಪ ಚುನಾವಣೆ : ಮತದಾನದ ಮುನ್ನಾದಿನ ಗೃಹಲಕ್ಷ್ಮೀ ಹಣ ಬಿಡುಗಡೆ | ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಕ್ರಮಕ್ಕೆ ಬೊಮ್ಮಾಯಿ ಒತ್ತಾಯ

ಜನಪ್ರತಿನಿಧಿ (ಶಿಗ್ಗಾಂವಿ) : ವಿಧಾನಸಭಾ ಉಪ ಚುನಾವಣೆಯ ಮತದಾನಕ್ಕೂ ಮುನ್ನಾದಿನ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.

ಈ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪ್ರತಿ ಚುನಾವಣೆಗೂ ಮುನ್ನ ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ 2,000 ರೂ. ಜಮಾ ಮಾಡುತ್ತಿರುವುದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಇದನ್ನು ಕೂಡಲೇ ನಿಲ್ಲಿಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಚುನಾವಣೆ ಪಾರದರ್ಶಕವಾಗಿರಬೇಕು. ರಾಜ್ಯ ಸರ್ಕಾರ ಪ್ರತೀ ಬಾರಿಯೂ ಚುನಾವಣೆಗೆ ಮುನ್ನ ಸರ್ಕಾರದ ಹಣದಲ್ಲಿ ತಮ್ಮ ರಾಜಕೀಯ ರೊಟ್ಟಿ ಸುಟ್ಟುಕೊಳ್ಳುವ ಕೆಲಸ ಮಾಡುತ್ತಿದೆ. ಇದು ಅತ್ಯಂತ ಖಂಡನೀಯ. ಚುನಾವಣಾ ಆಯೋಗ ಕಣ್ಣು ಮುಚ್ಚಿ ಕುಳಿತಿದೆ. ಹಾವೇರಿ ಜಿಲ್ಲಾಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ‌. ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ‌.

ಚುನಾವಣೆಗೆ ಸರ್ಕಾರ ಹಣ ಬಳಕೆಯಾಗುತ್ತಿರುವುದು ಸ್ಪಷ್ಟ. ಸಿಎಂ ಸಿದ್ದರಾಮಯ್ಯ ಅವರು ಪ್ರಜಾಪ್ರಭುತ್ವ, ಸಂವಿಧಾನದ ಬಹಳ ಬಗ್ಗೆ ಮಾತನಾಡುತ್ತಾರೆ‌. ಇಡೀ ಸರಕಾರವೇ ಸರಕಾರಿ ದುಡ್ಡಿನಲ್ಲಿ ರಾಜಕೀಯ ಭ್ರಷ್ಟಾಚಾರ ಮಾಡುತ್ತಿದೆ. ಶಿಗ್ಗಾಂವಿ ಸವಣೂರು ಕ್ಷೇತ್ರದ ಜನರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ನಿರಂತರವಾಗಿ ನಡೆಯುತ್ತಿರುವ ಈ ಕ್ಷೇತ್ರದ ಅಭಿವೃದ್ಧಿಯನ್ನು ನೋಡಿ ಎಲ್ಲ ವರ್ಗದ ಜನರು ಈಗಾಗಲೇ ಏನು ತೀರ್ಮಾನ ಮಾಡಿದ್ದಿರಿ, ಅದನ್ನು ಯಾವುದೇ ಕಾರಣಕ್ಕೂ ಬದಲಾಯಿಸದೇ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ‌.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!