spot_img
Thursday, December 5, 2024
spot_img

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ : ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್‌ ಆದೇಶ

ಜನಪ್ರತಿನಿಧಿ (ಬೆಂಗಳೂರು) : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು(ಬುಧವಾರ) ವಜಾಗೊಳಿಸಿ ಆದೇಶಿಸಿದೆ. ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ನ್ಯಾಯಪೀಠ ಈ ಆದೇಶ ಹೊರಡಿಸಿದೆ.

ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಕ್ಕೆ ಸಂಬಂಧಿಸಿದಂತೆ ಬ್ಯಾಂಕಿಂಗ್‌ ನಿಯಂತ್ರಣ ಕಾಯಿದೆ ಸೆಕ್ಷನ್‌ 35ಎ ಅಡಿ ವ್ಯಾಖ್ಯಾನವನ್ನು ಒಪ್ಪಲಾಗದು. ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಕೋರಿಕೆಗೆ ಅನುಮತಿಸಿದರೆ ಪ್ರತಿಯೊಂದು ಬ್ಯಾಂಕಿಂಗ್‌ ಸಂಸ್ಥೆಯು ತನಿಖೆಗೆ ಕೋರಬಹುದು. ಹೀಗೆ ಮಾಡಿದರೆ ದೆಹಲಿ ಪೊಲೀಸ್‌ ಸ್ಥಾಪನಾ ಕಾಯಿದೆಯು ಅನುಪಯುಕ್ತವಾಗಲಿದೆ ಎಂದು ನ್ಯಾಯಪೀಠ ರಾಜ್ಯ ಸರ್ಕಾರದ ಪರವಾಗಿ ವಾದಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ ವಿ ಆಚಾರ್ಯ ಅವರು, ಯಾವುದೇ ಪ್ರಕರಣದ ತನಿಖೆ ನಡೆಸುವ ಅಂತರ್ಗತ ಅಧಿಕಾರ ಸಿಬಿಐಗೆ ಇಲ್ಲ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಲಾಗದು. ಪೊಲೀಸ್‌ ಅಧಿಕಾರವು ಶಾಸನಬದ್ಧವಾಗಿದ್ದು, ಅದು ಸಾಂವಿಧಾನಿಕ ನಿಬಂಧನೆಗಳಿಗೆ ಅನುಗುಣವಾಗಿದೆ. ಸಿಬಿಐ ಎಂದರೆ ಕೇಂದ್ರ ಸರ್ಕಾರದ ಪ್ರತಿರೂಪ ಎಂದು ವಾದಿಸಿದರು.

ಯೂನಿಯನ್‌ ಬ್ಯಾಂಕ್‌ ಪ್ರತಿನಿಧಿಸಿದ್ದ ಅಟಾರ್ನಿ ಜನರಲ್‌ ಆರ್‌. ವೆಂಕಟರಮಣಿ ಅವರು ಸಿಬಿಐ ಕೇಂದ್ರ ಸರ್ಕಾರದ ಪ್ರತಿರೂಪ ಎಂಬ ವಾದಕ್ಕೆ ಆಕ್ಷೇಪಿಸಿದರು. ಸಿಬಿಐ ಕೇಂದ್ರ ಸರ್ಕಾರದ ಪ್ರತಿರೂಪ ಎಂಬ ಬಗ್ಗೆ ವಾದಿಸಲು ಇಚ್ಛಿಸುವುದಿಲ್ಲ. ಅದು ಈ ಪ್ರಕರಣಕ್ಕೆ ಹೊಂದುವುದಿಲ್ಲ. ಇಂಥ ಪ್ರಕರಣದಲ್ಲಿ ಸಿಬಿಐ ಒಂದೇ ತನಿಖಾ ಸಂಸ್ಥೆ ಎಂದು ಆರ್‌ಬಿಐ ಹೇಳಿದೆ. ಬ್ಯಾಂಕಿಂಗ್‌ ಕ್ಷೇತ್ರದ ನಿರ್ವಹಣೆಗೆ ವ್ಯವಸ್ಥಿತ ಆಪತ್ತು ಎದುರಾದಾಗ ಬ್ಯಾಂಕಿಂಗ್‌ ನಿಯಂತ್ರಣ ಕಾಯಿದೆ ಸೆಕ್ಷನ್‌ 35ಎ ಅನ್ವಯಿಸುತ್ತದೆ ಎಂದು ವಾದಿಸಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!