spot_img
Sunday, February 15, 2026
spot_img

ಜಾತ್ಯತೀತರಾಗಿ, ವಿಶ್ವ ಮಾನವರಾಗಿ ಬೆಳೆದು ವೈಚಾರಿಕ ಚಿಂತನೆ ಬೆಳೆಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಮೈಸೂರು) : ಹಿಂದೆ ಶೂದ್ರ ಸಮುದಾಯಗಳಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂಬುದು ಸಂತೋಷದ ವಿಚಾರ ಎಂದು ಹೇಳಿದರು.

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಹಾಗೂ ವಿಜ್ಞಾನ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಮಾಡಿ ಸಮಾರಂಭವನ್ನು ಉದ್ದೇಶಿಸಿ ಸಿಎಂ ಮಾತನಾಡಿದರು.

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಮತ್ತು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಕಾರ್ಯಕ್ರಮಗಳನ್ನು, ಗ್ಯಾರಂಟಿಗಳನ್ನು ನಾವು ಜಾರಿಗೆ ತಂದಿದ್ದೇವೆ. ವಿದ್ಯಾರ್ಥಿನಿಯರು ಬಸ್ ಗಳಲ್ಲಿ ಉಚಿತವಾಗಿ ಓಡಾಡುತ್ತಿದ್ದೀರಿ ಅಲ್ವಾ? ಇಲ್ಲಿಯವರೆಗೂ 325 ಕೋಟಿ ಫ್ರೀ ಟಿಕೆಟ್ ಮೂಲಕ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಶಿಕ್ಷಣದಿಂದ ಮಾತ್ರ ಮಹಿಳೆಯರು, ಯುವತಿಯರು ಸ್ವಾಭಿಮಾನಿ ಮತ್ತು ಸ್ವಾವಲಂಬಿಗಳಾಗಲು ಸಾಧ್ಯ ಎಂದವರು ಹೇಳಿದರು.

ಮಹಿಳೆಯರಿಗೆ ಮೊದಲಿಗೆ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದ್ದು ಬಸವಣ್ಣನರಾದರೆ, ಶಿಕ್ಷಣ ಮಹಿಳೆಯರ ಹಕ್ಕಾಗಿಸಿದ್ದು ಡಾ.ಬಿ.ಆರ್.ಅಂಬೇಡ್ಕರ್ ಅವರು. ಆದ್ದರಿಂದ ನೀವೆಲ್ಲಾ ಜಾತ್ಯತೀತರಾಗಿ, ವಿಶ್ವ ಮಾನವರಾಗಿ ಬೆಳೆದು ವೈಚಾರಿಕ ಚಿಂತನೆ ಬೆಳೆಸಿಕೊಳ್ಳಬೇಕು. ಶಿಕ್ಷಣ ಕಲಿತೂ ಜಾತಿವಾದಿಗಳಾದರೆ ಏನು ಪ್ರಯೋಜನ? ಎಂದು ಅವರು ಪ್ರಶ್ನಿಸಿವುದರ ಮೂಲಕ ವಿದ್ಯಾರ್ಥಿನಿಯರಿಗೆ ಸಾಮಾಜಿಕ ಪ್ರಜ್ಞೆಯ ಅಗತ್ಯದ ಬಗ್ಗೆ ಸೂಚ್ಯವಾಗಿ ತಿಳಿಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!