spot_img
Wednesday, April 1, 2026
spot_img

ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಎನ್‌ಪಿಟಿ‌ಎಲ್ ಸ್ವಯಂ ಕೋರ್ಸಿನ ಮಾಹಿತಿ ಕಾರ್ಯಾಗಾರ

ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನ.13ರಂದು ಎನ್‌ಪಿಟಿ‌ಎಲ್ ಸ್ವಯಂ ಕೋರ್ಸಿನ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ವಹಿಸಿಕೊಂಡಿದ್ದರು.
ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳಿಗೆ ಎನ್‌ಪಿಟಿ‌ಎಲ್ ಸ್ವಯಂ ಕೋರ್ಸುಗಳ ಉದ್ದೇಶ ಮತ್ತು ಅದರ ಮೂಲಕ ಕಲಿಕೆಗೆ ಹೇಗೆ ಸಹಾಯವಾಗಬಹುದು ಎಂಬುದರ ಕುರಿತು ವಿವರಿಸಲಾಯಿತು. ಕೋರ್ಸಿಗೆ ನೋಂದಣಿ ಮಾಡಿಕೊಂಡು ಇದರ ಪ್ರಯೋಜನಗಳನ್ನು ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಯಿತು.

ವಿಭಾಗದ ಪ್ರಾಧ್ಯಾಪಕರುಗಳಾದ ಗಿರಿರಾಜ್ ಭಟ್ ಸ್ವಾಗತಿಸಿ, ಕಾರ್ಯಕ್ರಮದ ಸಂಯೋಜಕರಾದ ಶ್ರೀಕಾಂತ್ ವಂದಿಸಿ, ಮತ್ತು ಪ್ರಣಾಮ್ ಆರ್. ಕಾರ್ಯಕ್ರಮವನ್ನು ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!