spot_img
Wednesday, January 22, 2025
spot_img

ಪ್ರಧಾನಿ ಮೋದಿಗೆ ಕಾಮನ್‌ವೆಲ್ತ್ ಆಫ್‌ ಡೊಮಿನಿಕಾ ದೇಶದ ‘ದಿ ಡೊಮಿನಿಕಾ ಅವಾರ್ಡ್ ಆಫ್ ಹಾನರ್’

ಜನಪ್ರತಿನಿಧಿ (ನವದೆಹಲಿ) : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಮನ್‌ವೆಲ್ತ್ ಆಫ್‌ ಡೊಮಿನಿಕಾ ದೇಶದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ‘ದಿ ಡೊಮಿನಿಕಾ ಅವಾರ್ಡ್ ಆಫ್ ಹಾನರ್’ (The Dominica Award of Honour) ಘೋಷಣೆಯಾಗಿದೆ.

ಕೋವಿಡ್-19 ಸಾಂಕ್ರಾಮಿಕ ಕಾಲಘಟ್ಟದಲ್ಲಿ ಡೊಮಿನಿಕಾ ದೇಶಕ್ಕೆ ಸಹಾಯಹಸ್ತ ಚಾಚಿದ ಪ್ರಧಾನಿ ಮೋದಿ ಮತ್ತು ಉಭಯ ದೇಶಗಳ ಬಾಂಧವ್ಯ ವೃದ್ಧಿಗೆ ಅವರ ಕೊಡುಗೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇದೇ ನವೆಂಬರ್ 19ರಿಂದ 21ರವರೆಗೆ ಗಯಾನದ ಜಾರ್ಜ್‌ಟೌನ್‌ನಲ್ಲಿ ನಡೆಯಲಿರುವ ಭಾರತ-ಕೆರಿಬಿಯನ್ ಸಮುದಾಯ (ಕ್ಯಾರಿಕೊಮ್) ಶೃಂಗದ ವೇಳೆಯಲ್ಲಿ ಡೊಮಿನಿಕಾ ದೇಶದ ಅಧ್ಯಕ್ಷರು ಪ್ರಧಾನಿ ಮೋದಿಗೆ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

2021 ಫೆಬ್ರುವರಿಯಲ್ಲಿ ಡೊಮಿನಿಕಾಗೆ ಪ್ರಧಾನಿ ಮೋದಿ ಅವರು ಉಚಿತವಾಗಿ 70,000 ಡೋಸ್ ಆಸ್ಟ್ರಾಜೆನೆಕಾ ಕೋವಿಡ್ ಲಸಿಕೆಯನ್ನು ಪೂರೈಸಿದ್ದರು.

ಡೊಮಿನಿಕಾ ದೇಶದಲ್ಲಿ ಆರೋಗ್ಯ, ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಸುಸ್ಥಿರ ಬೆಳವಣಿಗೆ ಉತ್ತೇಜಿಸುವ ನಿಟ್ಟಿನಲ್ಲಿ ಭಾರತದ ಬೆಂಬಲವನ್ನು ಗುರುತಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!