spot_img
Wednesday, April 1, 2026
spot_img

ವಂಡ್ಸೆ, ಆತ್ರಾಡಿ ಅಂಗನವಾಡಿ ಕೇಂದ್ರದ ಪುಟಾಣಿಗಳ ಮಕ್ಕಳ ದಿನಾಚರಣೆ

ಕುಂದಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ ವಂಡ್ಸೆ ವಲಯದ ವಂಡ್ಸೆ ಅಂಗನವಾಡಿ ಕೇಂದ್ರದಲ್ಲಿ ಆತ್ರಾಡಿ ಮತ್ತು ವಂಡ್ಸೆ ಅಂಗನವಾಡಿ ಕೇಂದ್ರಗಳ ಪುಟಾಣಿಗಳಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪುಟಾಣಿಗಳಿಂದಲೇ ಕಾರ್ಯಕ್ರಮ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಟಾಣಿ ಸಿರಿ ವಹಿಸಿದ್ದರು. ವಂಡ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವರ್ದನ ಜೋಗಿ, ಬಾಲವಿಕಾಸ ಸಮಿತಿಯ ಮಾಜಿ ಅಧ್ಯಕ್ಷ ವಿ.ಕೆ ಶಿವರಾಮ ಶೆಟ್ಟಿ, ಅಂಗನವಾಡಿ ಮೇಲ್ವಿಚಾರಕಿ ಭಾಗ್ಯವತಿ, ವೈಷ್ಣವಿ ವೆಂಕಟೇಶ, ಜುಲೇಖಾ, ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಸದಾಶಿವ ಉಪಸ್ಥಿತರಿದ್ದರು.
ವಂಡ್ಸೆ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಮೂಕಾಂಬು ಕಾರ್ಯಕ್ರಮ ನಿರ್ವಹಿಸಿದರು. ಆತ್ರಾಡಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಅಕ್ಕಮ್ಮ ಸ್ವಾಗತಿಸಿ, ವಂಡ್ಸೆ ಅಂಗನವಾಡಿ ಕೇಂದ್ರದ ಸಹಾಯಕಿ ರೇಖಾ ವಂದಿಸಿದರು. ಎರಡು ಅಂಗನವಾಡಿ ಕೇಂದ್ರದ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!