spot_img
Saturday, February 14, 2026
spot_img

ಕುಂದಾಪುರ ತಾಲೂಕಲ್ಲಿ ಐದು ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ 248 ಕೋಟಿ ವೆಚ್ಚ| ಅನುಷ್ಠಾನ ಸಮಿತಿ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾಹಿತಿ

ಕುಂದಾಪುರ: ಗ್ಯಾರಂಟಿ ಯೋಜನೆಗಳ ಕುಂದಾಪುರ ತಾಲೂಕು ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 17 ತಿಂಗಳಲ್ಲಿ ಕುಂದಾಪುರ ತಾಲೂಕಿನಲ್ಲಿ ಐದು ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಒಟ್ಟು 248 ಕೋಟಿ ರೂಪಾಯಿ ಸರಕಾರದಿಂದ ಬಿಡುಗಡೆಯಾಗಿರುತ್ತದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಕುಂದಾಪುರ ತಾಲೂಕಿನಲ್ಲಿ 17 ತಿಂಗಳಲ್ಲಿ ಶಕ್ತಿ ಯೋಜನೆಯಡಿ 97,99, 147 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು 33,81,95,617 ರೂಪಾಯಿ ರಿಯಾಯಿತಿ ಪಡೆದಿರುತ್ತಾರೆ. ಗೃಹ ಜ್ಯೋತಿ ಯೋಜನೆಯಡಿ 15 ತಿಂಗಳಲ್ಲಿ ತಿಂಗಳ ಸರಾಸರಿ 63,860 ಫಲಾನುಭವಿಗಳು 41,23,22,559 ರೂಪಾಯಿ ಲಾಭ ಪಡೆದಿರುತ್ತಾರೆ. ಗೃಹಲಕ್ಷ್ಮಿ ಯೋಜನೆಯಡಿ 50485 ಫಲಾನುಭವಿಗಳ ಖಾತೆಗೆ ನೇರವಾಗಿ 131,26,10,000 ರೂಪಾಯಿ ಜಮೆಯಾಗಿರುತ್ತದೆ. ಅನ್ನಭಾಗ್ಯ ಯೋಜನೆಯಡಿ 44,010 ಪಡಿತರ ಚೀಟಿಗಳಿಗೆ 40,89,83,280 ರೂಪಾಯಿ ನೇರವಾಗಿ 13 ತಿಂಗಳಲ್ಲಿ ಫಲಾನುಭವಿಗಳ ಖಾತೆಗೆ ಜಮಾ ಆಗಿರುತ್ತದೆ. ಯುವನಿಧಿ ಯೋಜನೆಯಡಿ 614 ಫಲಾನುಭವಿಗಳಿಗೆ ಒಟ್ಟು 1,09,89,000 ರೂಪಾಯಿ ನೇರವಾಗಿ ಖಾತೆಗೆ ಜಮಾ ಆಗಿರುತ್ತದೆ.

ಸಭೆಯಲ್ಲಿ ಸರ್ಕಾರಿ ಬಸ್ಸುಗಳನ್ನು ನಿಗದಿತ ಸಮಯದಲ್ಲಿ ಪರವಾನಿಗೆ ಇರುವ ರೂಟ್ ಗಳಿಗೆ ಬಸ್ಸನ್ನು ಓಡಿಸಬೇಕು ಮತ್ತು ಚಾಲಕ ನಿರ್ವಾಹಕರು ಮಹಿಳಾ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಸದಸ್ಯರು ಆಗ್ರಹಿಸಿದರು. ಹೊಸದಾಗಿ ನಿರ್ಮಾಣ ಆಗಿರುವ ಫಲಾನುಭವಿಗಳಿಗೆ ಯೋಜನೆಯ ಲಾಭ ದೊರಕಿಸಿಕೊಡಬೇಕೆಂದು ಸದಸ್ಯರು ಆಗ್ರಹಿಸಿದರು. ಗೃಹಲಕ್ಷ್ಮಿ ಯೋಜನೆಯಡಿ NPCI , ಆಧಾರ್ ಸೀಡ್ ಮ್ಯಾಪಿಂಗ್ ಆಗಿರದ 489 ಫಲಾನುಭವಿಗಳನ್ನು ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸಂಪರ್ಕಿಸಿ ಮುಂದಿನ ಸಭೆಯೊಳಗೆ ಅವರಿಗೆ ಯೋಜನೆಯ ಲಾಭ ದೊರಕಿಸಿಕೊಡಬೇಕೆಂದು ಸದಸ್ಯರು ಆಗ್ರಹಿಸಿದರು. ಯುವನಿಧಿ ಯೋಜನೆಯ ನೋಂದಣಿ ಕಡಿಮೆ ಇರುವುದರಿಂದ ಈ ಯೋಜನೆಯ ಬಗ್ಗೆ ಹೆಚ್ಚು ಪ್ರಚಾರ ಮಾಡಬೇಕೆಂದು ಸದಸ್ಯರು ಸೂಚಿಸಿದರು.

ಸಭೆಯಲ್ಲಿ ಸದಸ್ಯರಾದ ವಸುಂಧರ ಹೆಗ್ಡೆ ಹೆಂಗವಳ್ಳಿ, ವಾಣಿ ಆರ್ ಶೆಟ್ಟಿ ಮೊಳಹಳ್ಳಿ , ನಾರಾಯಣ ಆಚಾರ್ ಕೋಣಿ , ಅಭಿಜಿತ್ ಪೂಜಾರಿ ಹೇರಿಕುದ್ರು , ಮಂಜು ಕೊಠಾರಿ ಕೆರಾಡಿ, ಗಣೇಶ್ ಕುಂದಾಪುರ , ಆಶಾ ಕರ್ವೆಲ್ಲೋ ಚರ್ಚ್ ರೋಡ್ ಕುಂದಾಪುರ, ಸವಿತಾ ಪೂಜಾರಿ ಚಿತ್ತೂರು , ಜಹೀರ್ ಅಹಮದ್ ಗಂಗೊಳ್ಳಿ, ಚಂದ್ರ ಕಾಂಚನ್ ಜನ್ನಾಡಿ , ಅರುಣ್ ಹಕ್ಲಾಡಿ , ಮತ್ತು ವಿವಿಧ ಇಲಾಖೆಯ ಮುಖ್ಯಸ್ಥರು ಉಪಸ್ಥಿತರಿದ್ದರು.

ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ರವಿಕುಮಾರ್ ಹುಕ್ಕೇರಿ ಸ್ವಾಗತಿಸಿ , ವ್ಯವಸ್ಥಾಪಕ ರಾಮಚಂದ್ರ ಮಯ್ಯ ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!