spot_img
Wednesday, April 1, 2026
spot_img

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್,.ಪ್ರಕಾಶ್ಚಂದ್ರ ಶೆಟ್ಟಿಯವರಿಗೆ ಸಹಕಾರಿ ರತ್ನ ಪ್ರಶಸ್ತಿ

ಕುಂದಾಪುರ: (ಜನಪ್ರತಿನಿಧಿ ವಾರ್ತೆ) ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರು, ದಕ ಹಾಲು ಒಕ್ಕೂಟ ಮಂಗಳೂರು ಇದರ ನಿರ್ದೇಶಕರು ಆಗಿರುವ‌ ಎಸ್,.ಪ್ರಕಾಶ್ಚಂದ್ರ ಶೆಟ್ಟಿಯವರಿಗೆ ಸಹಕಾರಿ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದವರಿಗೆ ರಾಜ್ಯ ಮಟ್ಟದಲ್ಲಿ ನೀಡಲಾಗುವ‌ ಕರ್ನಾಟಕ ಸರಕಾರದ ಪ್ರತಿಷ್ಠಿತ ಸಹಕಾರಿ ರತ್ನ ಪ್ರಶಸ್ತಿ ಲಭಿಸಿದೆ.

ನವಂಬರ್ 17 ರಂದು ಬಾಗಲಕೋಟೆಯಲ್ಲಿ ಜರುಗಲಿರುವ 71ನೇ ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಎಸ್.ಪ್ರಕಾಶ್ಚಂದ್ರ ಶೆಟ್ಟಿಯವರು ಕಳೆದ ೩೫ ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಪ್ರಗತಿಪರ ಕೃಷಿಕರಾಗಿ, ಮಾದರಿ ಹೈನುಗಾರರಾಗಿ ರಾಜ್ಯದಲ್ಲಿ ಗಮನ ಸಳೆದ ಸಾಧನೆ ಮಾಡಿರುವ ಸಹಕಾರಿ ಕ್ಷೇತ್ರದಲ್ಲಿ ಅಗ್ರಮಾನ್ಯ ಸಾಧನೆ ಮಾಡಿದ್ದಾರೆ. ಖಂಬದಕೋಣೆ ರೈತರ ಸೇವ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂಘವನ್ನು ಉತ್ತುಂಗಕ್ಕೇರಿಸಿದ್ದಾರೆ. ಮೆಕೋಡು ಹಾಲು‌ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸ್ವಂತ ಕಟ್ಟಡ ನಿರ್ಮಾಣ, ಹಾಲು ಶೀತಲಿಕರಣ ಘಟಕ ಸ್ಥಾಪನೆಯಲ್ಲಿ ಮುಂಚೂಣಿ ವಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!