spot_img
Wednesday, April 1, 2026
spot_img

ಹೆಮ್ಮಾಡಿ ಪ್ರಾ.ಮೀ. ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್ ಹಟ್ಟಯಂಗಡಿ ಅವರಿಗೆ ‘ಸಹಕಾರಿ ರತ್ನ’ ಪ್ರಶಸ್ತಿ

ಕುಂದಾಪುರ: (ಜನಪ್ರತಿನಿಧಿ ವಾರ್ತೆ) ಹೆಮ್ಮಾಡಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಹಟ್ಟಿಯಂಗಡಿ ಅವರಿಗೆ ಸಹಕಾರಿ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದವರಿಗೆ ರಾಜ್ಯ ಮಟ್ಟದಲ್ಲಿ ನೀಡಲಾಗುವ  ಕರ್ನಾಟಕ ಸರಕಾರದ ಪ್ರತಿಷ್ಠಿತ ಸಹಕಾರಿ ರತ್ನ ಪ್ರಶಸ್ತಿ ಲಭಿಸಿದೆ.
ನವಂಬರ್ 17ರಂದು ಬಾಗಲಕೋಟೆಯಲ್ಲಿ ಜರುಗಲಿರುವ 71ನೇ ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಉದಯ ಕುಮಾರ್ ಹಟ್ಟಿಯಂಗಡಿ ಅವರು ಸಹಕಾರಿ ನೌಕರರಾಗಿ ಸಹಕಾರಿ ಕ್ಷೇತ್ರದಲ್ಲಿ ಕಳೆದ 25ಕ್ಕೂ ಹೆಚ್ಚು ವರ್ಷಗಳಿಂದ ಸಲ್ಲಿಸಿರುವ ಅನನ್ಯ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಹೆಮ್ಮಾಡಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಸ್ಥಾಪನೆ, ಬೆಳವಣಿಗೆಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಾ ಬಂದಿರುವ ಇವರು ಸದಸ್ಯರಿಗೆ ಸರಕಾರದ ಸವಲತ್ತುಗಳನ್ನು ತಲುಪಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಸಂಘ ಈಗ ರಜತ ಮಹೋತ್ಸವದ ಸಂಭ್ರಮದಲ್ಲಿದ್ದು, ಸ್ವಂತ ಪ್ರಧಾನ ಕಛೇರಿ ಕಟ್ಟಡ ಮತ್ಸ್ಯಜ್ಯೋತಿ, ವಾಣಿಜ್ಯ ಸಂರ್ಕೀಣ ಹೊಂದಿದೆ. ವಂಡ್ಸೆ, ಶಂಕರನಾರಾಯಣ, ಕುಂದಾಪುರದಲ್ಲಿ ಶಾಖೆಗಳನ್ನು ಹೊಂದಿ ಲಾಭದಾಯಕವಾಗಿ ನಿರಂತರವಾಗಿ ಮುನ್ನೆಡೆಯುತ್ತಿದೆ.
ಸಹಕಾರ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಬಿಡುವಿಲ್ಲದೆ ದುಡಿಯುತ್ತಿರುವ ಇವರು ಮೊಗವೀರ ಮಹಾಜನಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಯುವಜನ ಸೇವೆಯಲ್ಲಿ ಹಲವಾರು ಯುವಕ ಮಂಡಲ, ಯುವತಿ ಮಂಡಲಗಳ ಸ್ಥಾಪನೆಯಲ್ಲಿ ತೊಡಗಿಸಿಕೊಂಡವರು. ತೀರಾ ಕಷ್ಟದಲ್ಲಿರುವ ವಯೋವೃದ್ಧೆಗೆ ಅಮ್ಮ ಕಾರ್ಯಕ್ರಮದಡಿ ಮನೆ ನಿರ್ಮಾಣ, ವಿಶೇಷಚೇತನರಿಗೆ ಸರಕಾರದಿಂದ ನೆರವು ದೊರಕಿಸಿಕೊಡುವಲ್ಲಿ ಪ್ರಯತ್ನ ಹೀಗೆ ಹಲವಾರು ಮಾನವೀಯ ಕೈಂಕರ್ಯದಲ್ಲೂ ತೊಡಗಿಸಿಕೊಂಡಿದ್ದಾರೆ. ಇವರ ಸೇವೆಗೆ ಇತ್ತೀಚೆಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!