spot_img
Monday, June 15, 2026
spot_img

ನಮ್ಮ ಮೆಟ್ರೋಗೆ ಗ್ರೀನ್‌ ಚಾಂಪಿಯನ್‌ ಪ್ರಶಸ್ತಿಯ ಗೌರವ !

ಜನಪ್ರತಿನಿಧಿ (ಬೆಂಗಳೂರು) : ಹಸಿರು ಆಂದೋಲನವನ್ನು ಮುನ್ನಡೆಸುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಗ್ರೀನ್ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಭಾರತದಲ್ಲಿ ಹಸಿರು (ಎಂಆರ್‌ಟಿಎಸ್) ಚಳುವಳಿಯನ್ನು ಮುನ್ನಡೆಸುತ್ತಿರುವ ಮೆಟ್ರೋ ರೈಲು ಪ್ರಾಧಿಕಾರದ ವರ್ಗದ ಅಡಿಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಗ್ರೀನ್ ಬಿಲ್ಡಿಂಗ್ ಕಾಂಗ್ರೆಸ್-2024 ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶುಕ್ರವಾರ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಗ್ರೀನ್ ಚಾಂಪಿಯನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಎಂ. ಮಹೇಶ್ವರ ರಾವ್‌, ನಿರ್ದೇಶಕ (ಯೋಜನೆ ಮತ್ತು ಪರಿಯೋಜನೆ) ಡಿ.ಆರ್‌.ಕೆ. ರೆಡ್ಡಿ, ಹಿರಿಯ ಅಧಿಕಾರಿಗಳು ಪ್ರಶಸ್ತಿ ಸ್ವೀಕರಿಸಿದ್ದಾರೆ. ಈ ಪ್ರಶಸ್ತಿಯು ಭಾರತೀಯ ಹಸಿರು ಕಟ್ಟಡ ಮಂಡಳಿ ನೀಡಿದ ಅತ್ಯುನ್ನತ ಗೌರವಗಳಲ್ಲಿ ಒಂದಾಗಿದೆ.

ನಮ್ಮ ಮೆಟ್ರೊ ವಿನ್ಯಾಸ, ನಿರ್ಮಾಣ, ಕಾರ್ಯಾಚರಣೆ, ನಿರ್ವಹಣೆ ಕ್ಷೇತ್ರಗಳಲ್ಲಿ ಹಸಿರು ಉತ್ತೇಜಿಸುವ ಮತ್ತು ಅನುಷ್ಠಾನಗೊಳಿಸುವ ಪ್ರಯತ್ನಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!