spot_img
Thursday, April 2, 2026
spot_img

ಹೆಸರು ಕಾಳು ಖರೀದಿ ಅವಧಿ ವಿಸ್ತರಣೆ : ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಮಾಹಿತಿ.

ಜನಪ್ರತಿನಿಧಿ (ಬೆಂಗಳೂರು) : ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21ರ ವರೆಗೆ ನಿಗದಿಪಡಿಸಲಾಗಿತ್ತು. ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಡಿಸೆಂಬರ್ 18ರವರೆಗೆ ಖರೀದಿ ಮಾಡಲು ಅನುಮತಿ ನೀಡಿದೆ. ಪ್ರತಿ ಕ್ವಿಂಟಾಲ್‌ಗೆ 8,682 ರೂ. ನಿಗದಿಪಡಿಸಲಾಗಿದ್ದು, ಇದುವರೆಗೆ 20,450 ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ.

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!