spot_img
Friday, April 3, 2026
spot_img

ಬಿಜೆಪಿಯ ಆಪರೇಷನ್‌ ಕಮಲದ ಬಗ್ಗೆ ಮಹಾರಾಷ್ಟ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ !

ಜನಪ್ರತಿನಿಧಿ (ಮಹಾರಾಷ್ಟ್ರ) : ನರೇಂದ್ರ ಮೋದಿಯವರು ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾ “ನಾ ಖಾವೂಂಗಾ, ನಾ ಖಾನೆದೂಂಗಾ” ಎನ್ನುತ್ತಾರೆ. ಹಾಗಾದರೆ ದೇಶಾದ್ಯಂತ ಆಪರೇಷನ್ ಕಮಲ ಮಾಡಲು ಹಣ ಎಲ್ಲಿಂದ ಬಂತು ನರೇಂದ್ರ ಮೋದಿ ಅವರೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಮುಖೇಡ್ ನಲ್ಲಿ ಇಂದು ಆಯೋಜಿಸಿದ್ದ ಪ್ರಚಾರ ಸಭೆಯನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕದಲ್ಲಿ ಬಿಜೆಪಿ ಅವರು 2008 ರಲ್ಲಿ ಎಂಟು ಶಾಸಕರನ್ನು ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಕೊಂಡುಕೊಂಡರು. 2019 ರಲ್ಲಿ 17 ಜನ ಶಾಸಕರನ್ನು ಕೊಂಡರು. ಮಹಾರಾಷ್ಟ್ರದಲ್ಲಿ ಹಿಂದೆ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿದ್ದರು. ಕಾಂಗ್ರೆಸ್, ಎನ್.ಸಿ.ಪಿ, ಶಿವಸೇನೆ ಸೇರಿ ಸರ್ಕಾರ ರಚನೆ ಮಾಡಿದ್ದವು. ಏಕನಾಥ ಶಿಂಧೆಯವರು ಶಿವಸೇನೆಯಲ್ಲಿ ಇದ್ದವರು. ಶಿವಸೇನೆಯನ್ನು ಒಡೆದು ಮತ್ತೊಂದು ಗುಂಪು ಮಾಡಿ ಅದಕ್ಕೆ ಬೆಂಬಲ ಕೊಟ್ಟು ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿದ್ದಾರೆ. ಅನೇಕ ಕಡೆಗಳಲ್ಲಿ ಬಿಜೆಪಿ ಅಧಿಕಾರಕ್ಕಾಗಿ ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿರುವ ನಿದರ್ಶನಗಳಿವೆ ಎಂದು ಬಿಜೆಪಿ ಬಗ್ಗೆ ಮಹಾರಾಷ್ಟ್ರದಲ್ಲಿ ಸಿಎಂ ಗುಡುಗಿದ್ದಾರೆ.

ನರೇಂದ್ರ ಮೋದಿಯವರು ಗ್ಯಾರಂಟಿ ಯೋಜನೆಗಳ ಬಗ್ಗೆ ಲೇವಡಿ ಮಾಡಿ ಮಾತನಾಡುತ್ತಾರೆ. ಗ್ಯಾರಂಟಿ ಯೋಜನೆಗಳನ್ನು ಕರ್ನಾಟಕದಲ್ಲಿ ಘೋಷಣೆ ಮಾಡಿದಾಗ ಒಂದನ್ನೂ ಜಾರಿ ಮಾಡಲಾಗುವುದಿಲ್ಲ. ದೇಶದ ಅಭಿವೃದ್ದಿ ಕುಂಠಿತವಾಗುತ್ತದೆ. ಒಂದು ವೇಳೆ ಜಾರಿಯಾದರೆ ರಾಜ್ಯ ದಿವಾಳಿಯಾಗುತ್ತದೆ ಎಂದಿದ್ದರು. ಮೋದಿ ಅವರು ದೇಶದ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಇದೇ ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್,  ಹರಿಯಾಣದಲ್ಲಿ ಘೋಷಣೆ ಮಾಡಿದರು ಎಂದು ಹೇಳಿದರು.

ಕರ್ನಾಟಕದಲ್ಲಿ ನಾವು 136 ಸ್ಥಾನಗಳನ್ನು ಪಡೆದು ಅಧಿಕಾರಕ್ಕೆ ಬಂದೆವು. 2023 ಮೇ 20 ರಂದು ಅಧಿಕಾರಕ್ಕೆ ಬಂದೆವು. ಆರು ತಿಂಗಳಲ್ಲಿ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದೆವು. ತೆಲಂಗಾಣ ರಾಜ್ಯದಲ್ಲಿ ಚುನಾವಣಾ ಪೂರ್ವದಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಜಾರಿ ಮಾಡಿದರು. ಹಿಮಾಚಲ ಪ್ರದೇಶದಲ್ಲಿಯಾಗಲಿ, ತೆಲಂಗಾಣದಲ್ಲಿ, ಕರ್ನಾಟಕದಲ್ಲಿ ಆರ್ಥಿಕವಾಗಿ ದಿವಾಳಿಯಾಗಿಲ್ಲ ಎಂದು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಮಹಾವಿಕಾಸ ಆಘಾಡಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಉದ್ಧವ್ ಠಾಕ್ರೆ, ಶರದ್ ಪವಾರ್ ಈ ಘೋಷಣೆ ಮಾಡಿದ್ದಾರೆ. ಈ ಮೂರು ಪಕ್ಷಗಳ ಮಹಾ ವಿಕಾಸ ಆಘಾಡಿ ಅಧಿಕಾರಕ್ಕೆ ಬರುವ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಹನುಮಂತ ರಾವ್ ಪಾಟೀಲ್, ರವೀಂದ್ರ ಚೌಹಾನ್ ಲೋಕಸಭೆಗೆ ಗೆದ್ದೆ ಗೆಲ್ಲುತ್ತಾರೆ. ಮಹಾ ವಿಕಾಸ್ ಆಘಾಡಿ ಅಧಿಕಾರಕ್ಕೆ ಬಂದಾಗ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ನಮಗೆ ನ್ಯಾಯಯುತವಾಗಿ ಬರಬೇಕಾದ ತೆರಿಗೆಯಲ್ಲಿ ಮೋಸ ಮಾಡುತ್ತಿರುವುದು ಗ್ಯಾರಂಟಿಗಳಿಗೆ ಹಣ ಸಿಗಬಾರದು ಎಂದು. ಕರ್ನಾಟಕ, ತೆಲಂಗಾಣ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳು ಕೇಂದ್ರದ ಈ ನಿಲುವನ್ನು ವಿರೋಧಿಸುತ್ತ ಬಂದಿವೆ. ಗೃಹ ಲಕ್ಷ್ಮೀ ಯೋಜನೆಗೆ ಹಣವಿಲ್ಲ ಎಂದು ಇಲ್ಲಿ ಜಾಹೀರಾತು ನೀಡಿದ್ದರು. ಬಿಜೆಪಿಗೆ ಸುಳ್ಳೇ ಮನೆದೇವರು. ನಾವು ಯಾವ ರಾಜ್ಯಗಳಲ್ಲಿಯೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಲ್ಲ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!