spot_img
Monday, April 6, 2026
spot_img

ಡಾ.ಹೆಚ್.ಎಸ್ ಶೆಟ್ಟಿಯವರ ಬಡವರ ಪರವಾದ ಕಾಳಜಿ ಮಾದರಿ-ಸಚಿವ ಕೆ.ಹೆಚ್.ಮುನಿಯಪ್ಪ

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್: ಕೊರಗ ಕುಟುಂಬಗಳಿಗೆ ನಿರ್ಮಿಸಿದ 14ಮನೆಗಳ ಲೋಕಾರ್ಪಣೆ

ಕುಂದಾಪುರ: ನೊಂದವರ ಕಣ್ಣೀರು ಒರೆಸುವ ಕಾರ್ಯದಲ್ಲಿ ಕೈ ಜೋಡಿಸಿರುವ ಉದ್ಯಮಿ, ಡಾ.ಎಚ್.ಎಸ್ ಶೆಟ್ಟಿಯವರು ಕೊರಗ ಸಮುದಾಯದವರಿಗೆ ಮನೆ ನಿರ್ಮಿಸಿರುವ ಚಿಂತನೆ ಶ್ಲಾಘನೀಯ. ಇವತ್ತು ಶೋಷಿತರ ಪರವಾಗಿ ನಿಲ್ಲುವ ಚಿಂತನೆಯಿಂದ ಮಾತ್ರ ರಾಮರಾಜಗ್ಯದ ಕನಸು ನನಸಾಗುತ್ತದೆ. ಎಂದು ಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ಹೇಳಿದರು.

ಉಡುಪಿ ಜಿಲ್ಲೆಯ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನ್ನಾಡಿ ಮತ್ತು ಮಣಿಗೇರಿ ಕೊರಗರ ಕಾಲೋನಿಯಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ 14 ಸುಂದರ ಮನೆಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಡಾ.ಬಿ.ಆರ್.ಅಂಬೆಡ್ಕರ್ ಆವರ ತತ್ವ ಆದರ್ಶಗಳನ್ನು ಅನುಷ್ಠಾನಗೊಳಿಸಲು, ಬಡವರ ಪರ ನಿಲ್ಲಲು ಇಂಥಹ ದಾನಿಗಳ ಅವಶ್ಯಕತೆ ಇದೆ. ಡಾ.ಎಚ್.ಎಸ್ ಶೆಟ್ಟಿಯವರ ಈ ಕಾರ್ಯ ಮಾದರಿಯಾದುದು. ಬಡ ಸಮುದಾಯಕ್ಕೆ ಆಸರೆಯಾಗಿ ನಿಲ್ಲುವ ಕೆಲಸವನ್ನು ಎಲ್ಲರೂ ಮಾಡುವುದಿಲ್ಲ ಎಂದರು.

ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ಭೂಮಿ ಪೂಜೆ ನಡೆಸಿ ಆಶೀರ್ವಚನ ನೀಡಿದರು.

ಸಂಸದ ಶ್ರೀನಿವಾಸ ಪೂಜಾರಿ ಫಲಾನುಭಿಗಳಿಗೆ ಕೀಲಿಕೈ ಹಸ್ತಾಂತರಿಸಿ ಮಾತನಾಡಿ, ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಕೊರಗ ಸಮುದಾಯದವರಿಗೆ ನೆಮ್ಮದಿಯ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ. ರಾಜ್ಯದಲ್ಲಿಯೇ ಮಾದರಿ ಎನಿಸುವ ಕಾರ್ಯವನ್ನು ಡಾ.ಎಚ್.ಎಸ್ ಶೆಟ್ಟಿಯವರು ಮಾಡಿದ್ದಾರೆ ಎಂದರು.

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಸೊಸೈಟಿ ಅಧ್ಯಕ್ಷರಾದ ಡಾ.ಎಚ್.ಎಸ್ ಶೆಟ್ಟಿ ಮಾತನಾಡಿ ನನ್ನ ಸೇವಾಕಾರ್ಯದಲ್ಲಿ ಕೊರಗ ಸಮುದಾಯದ ಈ 14 ಕುಟುಂಭಗಳಿಗೆ ಮನೆ ನಿರ್ಮಿಸಿಕೊಡುತ್ತಿರುವುದು ಅತ್ಯಂತ ತೃಪ್ತಿ ತಂದಿದೆ. ಈ ನೆಲದ ಮೂಲ ನಿವಾಸಿಗಳಾದ ಕೊರಗ ಸಮುದಾಯ ಅವಿಭಾಜ್ಯ ಅಂಗ. ಅವರ ಸಂಸ್ಕೃತಿ, ಪರಂಪರೆ ಮುಂದುವರಿಯಬೇಕು. ಅವರ ಅವಶ್ಯಕತೆಗಳನ್ನು ಪೂರೈಸಿ, ಅವರು ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವಂತೆ ಮಾಡಬೇಕಾದ್ದು ಎಲ್ಲರ ಕರ್ತವ್ಯ ಎಂದರು.

ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೊರಗಾಭಿವೃದ್ಧಿ ಸಂಸ್ಥೆಗಳು, ಕರ್ನಾಟಕ ಮತ್ತು ಕೇರಳ ರಾಜ್ಯ ಇದರ ಅಧ್ಯಕ್ಷೆ ಸುಶೀಲ ನಾಡ, ಮಾಜಿ ಶಾಸಕ ಬಿ.ಅಪ್ಪಣ್ಣ ಹೆಗ್ಡೆ, ಸಮಾಜ ಸೇವಕರು, ರಾಜಕೀಯ ಮುಖಂಡರಾದ ದಿನೇಶ ಹೆಗ್ಡೆ ಮೊಳಹಳ್ಳಿ, ಹಾರ್ದಳ್ಳಿ ಮಂಡಳ್ಳಿ ಗ್ರಾ.ಪಂ.ಅಧ್ಯಕ್ಷೆ ದೀಪಾ ಶೆಟ್ಟಿ, ಮೊಳಹಳ್ಳಿ ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಹಾಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಉದ್ಯಮಿ ಎಚ್.ಶಂಕರ ಹೆಗ್ಡೆ, ಕೊರಗಾಭಿವೃದ್ಧಿ ಸಂಸ್ಥೆ ಕುಂದಾಪುರ ವಲಯದ ಅಧ್ಯಕ್ಷ ಕುಮಾರ್ ದಾಸ್, ಉದ್ಯಮಿಗಳಾದ ಎಚ್.ಶಂಕರ್ ಹೆಗ್ಡೆ, ಗುರುನಾಥ ದಾನಪ್ಪ, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಹಾಲಾಡಿ ನಾಗರಾಜ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಮುರಳೀದರ ಕಡೆಕಾರು ಸ್ವಾಗತಿಸಿದರು. ಉಪನ್ಯಾಸಕ ಅಕ್ಷಯ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರ್ವಹಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!