spot_img
Wednesday, January 22, 2025
spot_img

ಬಿ. ಬಿ. ಹೆಗ್ಡೆ ಕಾಲೇಜು ‘ಉಗಮ-2024’ : ಮದರ್ ತೆರೇಸಾ ಕಾಲೇಜು ಶಂಕರನಾರಾಯಣ ಸಮಗ್ರ ಪ್ರಶಸ್ತಿ

ಕುಂದಾಪುರ: ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ದೊರೆತಾಗ ಮಾತ್ರ ಸಮತೋಲನವಾದ ಕಲಿಕೆ ಸಾಧ್ಯ. ಆ ಮೂಲಕ ಅಂಕಕ್ಕಿಂತ ಮುಖ್ಯವಾದ ಬದುಕಿಗೆ ಅಗತ್ಯವಾದ ಶಿಕ್ಷಣವನ್ನು ವಿದ್ಯಾರ್ಥಿಗಳು ಪಡೆಯುವಂತಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹೇಳಿದರು.

ಇವರು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ ಸಾಹಿತ್ಯಿಕ & ಸಾಂಸ್ಕೃತಿಕ ಸ್ಪರ್ಧೆ ‘ಉಗಮ-2024’ರ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ  ರಕ್ಷಿತ್ ರಾವ್ ಗುಜ್ಜಾಡಿ ವಂದಿಸಿ, ಶ್ರೀಮತಿ ರೇಷ್ಮಾ ಶೆಟ್ಟಿ ಸ್ವಾಗತಿಸಿದರು.

ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಅನಿಸಿಕೆ ಹಂಚಿಕೊಂಡರು. ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಶ್ರಿ ಗಿರಿರಾಜ್ ಭಟ್ ಬಹುಮಾನಿತರ ಪಟ್ಟಿ ವಾಚಿಸಿ, ಪ್ರಣಮ್ ಆರ್. ನಿರೂಪಿಸಿದರು.

ಮದರ್ ತೆರೇಸಾ ಕಾಲೇಜು ಶಂಕರನಾರಾಯಣ ಸಮಗ್ರ ಪ್ರಶಸ್ತಿ ಪಡೆದು ಮೊದಲ ಸ್ಥಾನವನ್ನು ಮತ್ತು ಶ್ರೀ ವೆಂಕಟರಮಣ ಕಾಲೇಜು ಕುಂದಾಪುರ ಸಮಗ್ರ ದ್ವಿತೀಯ ಸ್ಥಾನ ಪಡೆಯಿತು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!