spot_img
Thursday, April 2, 2026
spot_img

ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ಲಾಘನೀಯ ಕಾರ್ಯ-ಶಾಸಕ ಕಿರಣ್ ಕೊಡ್ಗಿ

ಕುಂದಾಪುರ: ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಚಿತ ಆರೋಗ್ಯ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು. ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರ ಶ್ಲಾಘನೀಯ ಕಾರ್ಯ ಎಂದು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಕೆ.ಎಂ.ಸಿ. ಆಸ್ಪತ್ರೆ ಮಣಿಪಾಲ, ಅಂತರಾಳ ಫೌಂಡೇಶನ್ ಕುಂದಾಪುರ, ಶ್ರೀ ರಾಮ ಭಜನಾ ಮಂಡಳಿ ಬೀಜಾಡಿ, ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರ, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು, ರೈಲ್ವೆ ಹಿತರಕ್ಷಣಾ ಸಮಿತಿ ಕುಂದಾಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಕುಂಭಾಶಿ ಇವರ ಸಹಯೋಗದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕುಂಭಾಶಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶೋಭಾ ಆರೋಗ್ಯದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಬೀಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಬೀಜಾಡಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಆನಂದ್ ಕುಂದರ್, ಶ್ರೀ ರಾಮ ಭಜನಾ ಮಂಡಳಿ, ಬೀಜಾಡಿ ಗೋಪಾಡಿ ಅಧ್ಯಕ್ಷ ಸತೀಶ್, ಅಂತರಾಳ ಫೌಂಡೇಶನ್ ಅಧ್ಯಕ್ಷೆ ಲೀನಾ ನಾಯಕ್, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಮುಖ್ಯಸ್ಥ ರಂಜನ್, ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರೈಲ್ವೆ ಪ್ರಯಾಣಿಕರ ಹಿತರಕ್ಷಣ ಸಮಿತಿ ಕುಂದಾಪುರ ಅಧ್ಯಕ್ಷರಾದ ಗಣೇಶ್ ಪುತ್ರನ್ ಪ್ರಾಸ್ತಾವಿಕ ಮಾತನಾಡಿದರು.
ಸರಸ್ವತಿ ಜಿ. ಪುತ್ರನ್‌ ಸ್ವಾಗತಿಸಿದರು, ಅಂತರಾಳ ಫೌಂಡೇಶನ್ ಪ್ರಧಾನ ಕಾರ್ಯದರ್ಶಿ ವಿವೇಕ್ ಕಾರ್ಯಕ್ರಮವನ್ನು ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!