spot_img
Wednesday, April 1, 2026
spot_img

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 9ನೇ ಬಾರಿಗೆ ರಾಜ್ಯಮಟ್ಟದ ‘ಉತ್ತಮ ಸಹಕಾರ ಸಂಘ’ ಪ್ರಶಸ್ತಿ

ಮಂಗಳೂರು: ಮಂಗಳೂರಿನಲ್ಲಿ ಜರಗಿದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಸಾಧನೆಗಾಗಿ ರಾಜ್ಯ ಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಯನ್ನು ಪಡೆದಿರುತ್ತದೆ. ಸಂಘದ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರು ಗಣ್ಯರ ಸಮಕ್ಷಮ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಸಚಿವರಾದ ಕೆ.ಎನ್ ರಾಜಣ್ಣ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರಾದ ದಿನೇಶ್ ಗುಂಡೂರಾವ್, ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಜಿ ಟಿ ದೇವೇಗೌಡ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್, ಶಾಸಕರಾದ ವೈ ಭರತ್ ಶೆಟ್ಟಿ, ಯಶ್‌ಪಾಲ್ ಸುವರ್ಣ, ದ.ಕ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಕೆ.ಎಂ.ಎಫ್ ಅಧ್ಯಕ್ಷರಾದ ಕೆ.ಪಿ ಸುಚರಿತ ಶೆಟ್ಟಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!