spot_img
Tuesday, March 31, 2026
spot_img

ಮಕ್ಕಳ ಮಾನಸಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಪಾಲಕರ ಪಾತ್ರ ಮಹತ್ವದ್ದು-ಗಿರೀಶ್ ಎಂ.ಎನ್

ಕುಂದಾಪುರ: ಹದಿಹರೆಯದ ಮಕ್ಕಳಲ್ಲಿ ಹಾರ್ಮೋನುಗಳ ಪ್ರಭಾವದಿಂದ ಮಾನಸಿಕ ಸ್ಥಿತಿಯಲ್ಲಿ ಉಂಟಾಗುವ ಬದಲಾವಣೆಯ ಸಂದರ್ಭದಲ್ಲಿ ಪೋಷಕರು ಇದರ ಸೂಕ್ಷ್ಮತೆಯನ್ನು ಅರಿತುಕೊಳ್ಳುವ ಮೂಲಕ ತಮ್ಮ ಮಕ್ಕಳಿಗೆ ಒಳ್ಳೆಯ ಮಾರ್ಗದರ್ಶಕರಾಗಿರಬೇಕೆಂದು ಕೌನ್ಸಿಲಿಂಗ್ ಸೆಂಟರ್, ಅಚ್ಲಾಡಿ-ಉಡುಪಿ ಇಲ್ಲಿನ ಖ್ಯಾತ ಮನಃಶಾಸ್ತ್ರಜ್ಞರಾದ ಗಿರೀಶ್ ಎಂ.ಎನ್. ಸಲಹೆ ನೀಡಿದರು.

ಅವರು ಎಕ್ಸಲೆಂಟ್ ಸುಣ್ಣಾರಿಯ ಆಡಿಟೋರಿಯಂನಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಪಾಲಕ-ಶಿಕ್ಷಕರ ಸಭೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಪ್ರತ್ಯೇಕ ಸಂವಾದ ನಡೆಸಿ ಮಾತನಾಡಿದರು.

ವಿದ್ಯಾರ್ಥಿಗಳು ಹದಿಹರೆಯದಲ್ಲಿ ಎದುರಾಗುವ ಗೊಂದಲಗಳಿಂದ ಹೊರಬರುವ ಮತ್ತು ಓದಿನಲ್ಲಿ ಗಮನ ಕೇಂದ್ರಿಕರಿಸುವ ಮಾರ್ಗಗಳನ್ನು ತಿಳಿಸಿಕೊಟ್ಟರು.

ಹದಿಹರೆಯದ ಮಕ್ಕಳೊಂದಿಗೆ ಸ್ನೇಹಿತರಂತಿದ್ದು, ಅವರ ಮಾತುಗಳಿಗೆ ಕಿವಿಯಾಗಿ, ಸಮಸ್ಯೆಯ ಪರಿಹಾರದ ಭಾಗವಾಗುವಲ್ಲಿ ಪೋಷಕರ ಪಾತ್ರದ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಂ.ಎಂ. ಹೆಗ್ಡೆ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ದೀಪಾ ಎಂ. ಹೆಗ್ಡೆ, ಕಾಲೇಜಿನ ಪ್ರಾಂಶುಪಾಲರಾದ ನಾಗರಾಜಶೆಟ್ಟಿ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಸರೋಜಿನಿ ಪಿ ಆಚಾರ್ಯ ಉಪಸ್ಥಿತರಿದ್ದರು.

ಪ್ರೌಢಶಾಲಾ ಶಿಕ್ಷಕಿ ಜಯಪ್ರಧಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಉಷಾಲತಾ ಸ್ವಾಗತಿಸಿ, ಶಿಲ್ಪಾರಾಣಿ ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!