spot_img
Wednesday, April 1, 2026
spot_img

ಶಬರಿಮಲೆ ಯಾತ್ರೆಯಲ್ಲಿ ಜಯರಾಮ ಶೆಟ್ಟರು ಸುವರ್ಣಮಹೋತ್ಸವ ಆಚರಿಸಲಿ-ಕೃಷ್ಣಮೂರ್ತಿ ಮಂಜರು

ಮಾರಣಕಟ್ಟೆ: (ಜನಪ್ರತಿನಿಧಿ ವಾರ್ತೆ) ವಂಡಬಳ್ಳಿ ಜಯರಾಮ ಶೆಟ್ಟರು ಸತತವಾಗಿ 40ನೇ ಬಾರಿ ಶಬರಿಮಲೆಯಾತ್ರೆ ಮಾಡುತ್ತಿದ್ದಾರೆ. ಸಾಕಷ್ಟು ಶಿಷ್ಯವೃಂದವನ್ನು ರೂಪಿಸಿದ್ದಾರೆ. ಅವರು ಶಬರಿಮಲೆ ಯಾತ್ರೆಯ ಸುವರ್ಣ ಮಹೋತ್ಸವ ಆಚರಿಸಲಿ ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಹೇಳಿದರು.

ಅಯ್ಯಪ್ಪ ಸ್ವಾಮಿ ಭಕ್ತವೃಂದ ಶ್ರೀ ಕ್ಷೇತ್ರ ಮಾರಣಕಟ್ಟೆ ಇಲ್ಲಿ ಗುರುಸ್ವಾಮಿ ವಂಡಬಳ್ಳಿ ಜಯರಾಮ ಶೆಟ್ಟಿ ಅವರ 40ನೇ ವರ್ಷದ ಶಬರಿಮಲೆ ಯಾತ್ರೆಯ ಸಂಭ್ರಮದಲ್ಲಿ ಅಯ್ಯಪ್ಪ ಸ್ವಾಮಿಗೆ ರಜತ ಕವಚ ಸಮರ್ಪಣೆ, ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಬೈಂದೂರು ಕ್ಷೇತ್ರದ ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ದೀಪ ಪ್ರಜ್ವಲನೆಗೊಳಿಸಿ ಮಾತನಾಡಿ ವಂಡಬಳ್ಳಿ ಜಯರಾಮ ಶೆಟ್ಟಿಯವರು ಕಟ್ಟುನಿಟ್ಟಿನ ವ್ರತಧಾರಿ. ಅವರು ಒಂದು ಮಂಡಲ ಪರ್ಯಂತ ಶಬರಿಮಲೆ ಯಾತ್ರೆ ಮಾಡಬೇಕು ಎಂದರು.

ಶ್ರೀಕ್ಷೇತ್ರ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಸದಾಶಿವ ಶೆಟ್ಟಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಮಾಜಿ ಧರ್ಮದರ್ಶಿ ಡಾ.ಅತುಲ್ ಕುಮಾರ್ ಶೆಟ್ಟಿ, ಮಾರಣಕಟ್ಟೆ ದೇವಸ್ಥಾನದ ಮಾಜಿ ಮೊಕ್ತೇಸರ ಚಿತ್ತೂರು ಮಂಜಯ್ಯ ಶೆಟ್ಟಿ, ದೇವಸ್ಥಾನ ಅಕೌಟೆಂಟ್ ಕೆ.ನಾರಾಯಣ ಶೆಟ್ಟಿ ಉಪಸ್ಥಿತರಿದ್ದರು.

40ನೇ ಬಾರಿಗೆ ಶಬರಿಮಲೆ ಯಾತ್ರೆ ಮಾಡುತ್ತಿರುವ ವಂಡಬಳ್ಳಿ ಜಯರಾಮ ಶೆಟ್ಟಿ 40 ಸಂವತ್ಸರಗಳ ಯಾತ್ರಾನುಭವಗಳನ್ನು ಹಂಚಿಕೊಂಡರು. ಶಿಷ್ಯವೃಂದದಿಂದ ಗುರುವಂದನೆ ಸಲ್ಲಿಸಲಾಯಿತು.

ರಮೇಶ ಶೆಟ್ಟಿ ನಂದ್ರೋಳ್ಳಿ ಸ್ವಾಗತಿಸಿದರು. ದಿವಾಕರ ಆಚಾರ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರದೀಪ ಶೆಟ್ಟಿ ವಂದಿಸಿದರು. ಶಿಕ್ಷಕ ಗುರುರಾಜ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು.

ಅಯ್ಯಪ್ಪ ಸ್ವಾಮಿ ಭಕ್ತವೃಂದದ ವತಿಯಿಂದ ಮಧ್ಯಾಹ್ನ ಶ್ರೀಕ್ಷೇತ್ರ ಮಾರಣಕಟ್ಟೆಯಲ್ಲಿ ಅನ್ನಸಂತರ್ಪಣೆ, ಸಂಜೆ ೪ ಗಂಟೆಯಿಂದ ಮಾರಣಕಟ್ಟೆಯಿಂದ ಆಲೂರು ಕ್ರಾಸ್ ವರೆಗೆ ಭವ್ಯ ಮೆರವಣಿಗೆ ನಡೆಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!