spot_img
Wednesday, March 18, 2026
spot_img

ಕೊಲ್ಲೂರಿನಲ್ಲಿ ಪದವಿಪೂರ್ವ ವಿದ್ಯಾರ್ಥಿಗಳ ಬಾಲಕ ಬಾಲಕಿಯರ ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾವಳಿಗೆ ಸಜ್ಜು 

ಕೊಲ್ಲೂರು: ನವಂಬರ್ 22 ಹಾಗೂ 23 ರಂದು ನಡೆಯಲಿರುವ ರಾಜ್ಯ ಮಟ್ಟದ ಪದವಿಪೂರ್ವ ವಿದ್ಯಾರ್ಥಿಗಳ ಹೊನಲು ಬೆಳಕಿನ ನೆಟ್ ಬಾಲ್ ಪಂದ್ಯಾವಳಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಆಡಳಿತ ಮಂಡಳಿಗೆ ಒಳಪಟ್ಟ ಕಾಲೇಜಿನ ಶ್ರೀ ಮೂಕಾಂಬಿಕಾ ಕ್ರೀಡಾಂಗಣ ಸಜ್ಜಾಗಿದೆ.
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಪಂದ್ಯಾವಳಿ ನಡೆಯಲಿದೆ.
ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿಯ ಮಾರ್ಗದರ್ಶನ, ಸಹಕಾರದೊಂದಿಗೆ ಹಳೆ ವಿದ್ಯಾರ್ಥಿಗಳು, ಊರವರು ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಉಡುಪಿ ಜಿಲ್ಲೆ, ಮೂಕಾಂಬಿಕಾ ವಿದ್ಯಾಸಂಸ್ಥೆಯ ಶಿಕ್ಷಕರ ಸಹಕಾರದೊಂದಿಗೆ 2 ದಿನಗಳ ನಡೆಯುವ ಈ ಕ್ರೀಡಾಕೂಟಕ್ಕೆ ರಾಜ್ಯದ ಒಟ್ಟು 25 ಜಿಲ್ಲೆಗಳ 50 ತಂಡಗಳು ಭಾಗವಹಿಸುತ್ತಿದ್ದು ಕ್ರೀಡಾಂಗಣದಲ್ಲಿ 2 ಕೋರ್ಟ್‌ಗಳ ರಚನೆ ಮಾಡಲಾಗಿದೆ. ಕ್ರೀಡಾಳುಗಳಿಗೆ ಅಗತ್ಯವಿರುವ ಊಟ, ವಸತಿ ವ್ಯವಸ್ಥೆ ಮಾಡಲಾಗಿದ್ದು.
ಸೌಪರ್ಣಿಕಾ ನದಿಯ ಸುಂದರ ಪ್ರಕೃತಿ ಸೌಂದರ್ಯದ ನಡುವೆ ರಾರಾಜಿಸುತ್ತಿರುವ ಕ್ರೀಡಾಕೂಟದಲ್ಲಿ ಸುಮಾರು 700 ಕ್ರೀಡಾಳುಗಳು ,60 ತಂಡದ ವ್ಯವಸ್ಥಾಪಕರು ಹಾಗೂ 100 ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಉಡುಪಿ ಜಿಲ್ಲೆಗೆ ನೆಟ್ ಬಾಲ್ ತಂಡವನ್ನು ಪರಿಚಯಿಸಿ ಸುಮಾರು 40 ವಿದ್ಯಾರ್ಥಿಗಳು ರಾಷ್ಟ್ರಮಟ್ಟವನ್ನು ಪ್ರತಿನಿಧಿಸಿರುತ್ತಾರೆ ಮತ್ತು 10 ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿಯನ್ನು ಪಡೆದ ಈ ಸಂಸ್ಥೆ ಆಗಿದ್ದು.
2008 ರಲ್ಲಿ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ನಡೆದಿದ್ದು ನಂತರ 2012ರಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಮತ್ತು ನೆಟ್ ಬಾಲ್ ಪಂದ್ಯಾಟ ನಡೆದಿದ್ದು ,ಅದಾದ ನಂತರ 2018 ರಲ್ಲಿ ರಾಜ್ಯ ಮಟ್ಟದ ನಟ್ ಬಾಲ್ ಪಂದ್ಯಾಟ ಹೆಮ್ಮೆ ಪಡೆದಿತ್ತು. ನಾಲ್ಕನೇ ಬಾರಿಗೆ ರಾಜ್ಯ ಮಟ್ಟದ ಪಂದ್ಯಾಟ ಮೂರನೇ ಬಾರಿಗೆ ನಡೆಯುತ್ತಿರುವ ರಾಜ್ಯ ಮಟ್ಟದ ಹೊನಲು ಬೆಳಕಿನ ನೆಟ್ ಬಾಲ್ ಪಂದ್ಯಾಟ ಇದಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!