spot_img
Tuesday, March 17, 2026
spot_img

ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ಉತ್ತಮ ಕೃಷಿಪತ್ತಿನ ಸಹಕಾರ ಸಂಘ ಪ್ರಶಸ್ತಿ

ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘವು ಪ್ರಾರಂಭಗೊಂಡು ೬೬ ವರ್ಷಗಳ ಸಾರ್ಥಕ ಸೇವೆಯನ್ನು ನೀಡಿ, ೬೭ನೇ ವರ್ಷದಲ್ಲಿ ಯಶಪ್ರದವಾಗಿ ಮುನ್ನೆಡೆಯುತ್ತಿರುವ ಸಂದರ್ಭ ಸಂಘವು ೨೫೧ ಕೋಟಿ ಠೇವಣಾತಿ ಹೊಂದಿ, ೨೦೨ ಕೋಟಿ ಸಾಲ ನೀಡಿದ್ದು, ೨೯೦ ಕೋಟಿ ದುಡಿಯುವ ಬಂಡವಾಳದೊಂದಿಗೆ ಸತತ ೧೫ ವರ್ಷಗಳಿಂದ ಅ ತರಗತಿ ಆಡಿಟ್ ವರ್ಗೀಕರಣ ಹೊಂದಿರುತ್ತದೆ. ೨೦೨೩-೨೪ನೇ ಸಾಲಿನಲ್ಲಿ ಶೇ.೯೯.೨೦ರಷ್ಟು ಸಾಲ ವಸೂಲಾತಿಯೊಂದಿಗೆ ೫.೬೬ ಕೋಟಿ ಲಾಭವನ್ನು ಗಳಿಸಿ ಇನ್ನಿತರ ಸಹಕಾರಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಲ್ಲಿs ಸಂಘವು ಮುಂಚೂಣಿಯಲ್ಲಿದೆ. ಸಂಘವು ಕೇಂದ್ರ ಸರಕಾರದ ಯೋಜನೆಯಾದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ರಾಜ್ಯದಲ್ಲೇ ಪ್ರಪ್ರಥಮವಾಗಿ ಸಹಕಾರಿ ಸಂಸ್ಥೆಯಾಗಿ ಅನುಷ್ಠಾನಕ್ಕೆ ತಂದಿರುತ್ತದೆ ಮತ್ತು ತನ್ನದೇ ವಿಶಿಷ್ಟ ಯೋಜನೆಯಾದ ರೈತ ಸಂಜೀವಿನಿ ಕ್ರೆಡಿಟ್ ಕಾರ್ಡ್ ವಿತರಿಸಿರುತ್ತದೆ ಹಾಗೂ ಸಕಲ ಮಾರಾಟ ಮಳಿಗೆಯ ಮೂಲಕ ಕೃಷಿ ಉಪಕರಣ ಮತ್ತು ದಿನಬಳಕೆಯ ವಸ್ತುಗಳನ್ನು ಕೈಗೆಟುಕುವ ದರದಲ್ಲಿ ವಿತರಿಸಿ ಯಶಸ್ವಿಯಾಗಿದೆ.

ಸಂಘವು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಮತ್ತು ಸಾಧನೆಯನ್ನು ಪರಿಗಣಿಸಿ ೭೧ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ನೀಡುವ ಉತ್ತಮ ಕೃಷಿ ಪತ್ತಿನ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ. ಈ ಹಿನ್ನಲೆಯಲ್ಲಿ ದಿನಾಂಕ ೧೬.೧೧.೨೦೨೪ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಜರಗಿದ ೭೧ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರಾಜ್ಯದ ಸಹಕಾರ ಸಚಿವರಾದ ಕೆ. ಎನ್. ರಾಜಣ್ಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ ಗುಂಡುರಾವ್, ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ರಾಜ್ಯ ಸಹಕಾರ ಮಹಾಮಂಡಳ ಮತ್ತು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಹಾಗೂ ಇತರ ಗಣ್ಯರ ಸಮಕ್ಷಮ ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷರಾದ ಡಾ| ಕೃಷ್ಣ ಕಾಂಚನ್ ಇವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಜಿ. ರಾಜೀವ ದೇವಾಡಿಗ, ಸಂಘದ ನಿರ್ದೇಶಕರಾದ ಟಿ. ಮಂಜುನಾಥ, ಜಿ. ತಿಮ್ಮ ಪೂಜಾರಿ, ಕೆ. ಉದಯಕುಮಾರ್ ಶೆಟ್ಟಿ, ಮಹೇಶ ಶೆಟ್ಟಿ, ಎಚ್. ನಾಗರಾಜ ಹಂದೆ, ರವೀಂದ್ರ ಕಾಮತ್, ರಾಜೇಶ ಉಪಾಧ್ಯ, ರಂಜಿತ್ ಕುಮಾರ್, ಭಾಸ್ಕರ ಶೆಟ್ಟಿ, ಅಚ್ಯುತ ಪೂಜಾರಿ, ಗೀತಾ ಶಂಭು ಪೂಜಾರಿ, ಪ್ರೇಮಾ ಎಸ್. ಪೂಜಾರಿ, ರಶ್ಮಿತಾ, ಕೆ. ಶ್ರೀಕಾಂತ ಶೆಣೈ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ ಕುಮಾರ್ ಶೆಟ್ಟಿ ಮತ್ತು ಸಂಘದ ಎಲ್ಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!