Thursday, November 21, 2024

ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ | BPL, APL ಕಾರ್ಡ್ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧಾರ : ಸಚಿವ ಮುನಿಯಪ್ಪ

ಜನಪ್ರತಿನಿಧಿ (ಬೆಂಗಳೂರು) : ಪಡಿತರ ಚೀಟಿ ಪರಿಷ್ಕರಣೆ ವಿಚಾರ ರಾಜಕೀಯ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ‘ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ, BPL​, APL​ ಕಾರ್ಡ್​ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆಹೆಚ್ ಮುನಿಯಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುನಿಯಪ್ಪ, ‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಒಟ್ಟು 1,50,59,431 ಕಾರ್ಡ್​ಗಳಿವೆ. ಮುಖ್ಯಮಂತ್ರಿಗಳು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಎಲ್ಲಾ (ಬಿಪಿಎಲ್) ಕಾರ್ಡ್‌ಗಳನ್ನು ಮರುಸ್ಥಾಪಿಸಬೇಕು ಎಂದು ನಿರ್ಧಾರ ಕೈಗೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸದ್ಯ 1,02,509 ಕಾರ್ಡ್​ಗಳನ್ನು​ ಪರಿಷ್ಕರಣೆ ಮಾಡಿದ್ದೇವೆ. ಉಳಿದ ಎಲ್ಲ ಬಿಪಿಎಲ್ (BPL), ಎಪಿಎಲ್ (APL) ಕಾರ್ಡ್​ಗಳನ್ನು ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಅಂತೆಯೇ ‘ಮಾನದಂಡಗಳ ಅನ್ವಯ ಪರಿಶೀಲನೆ ಮಾಡಿ ಪರಿಷ್ಕರಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ನಿಯಮಗಳ ಅನ್ವಯ ಪರಿಷ್ಕರಿಸಲಾಗಿದೆ. ಅನರ್ಹ ಎಂಬ ಕಾರ್ಡ್​ಗಳನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿ ಇಡಲಾಗಿದೆ. ಬಿಪಿಎಲ್​ಗೆ ಅನರ್ಹರು ಎಂದು ಕಂಡು ಬಂದಿರುವ ಕಾರ್ಡ್​ಗಳನ್ನು ಎಪಿಎಲ್​ಗೆ ಸೇರಿಸಲಾಗಿದೆ.

ಬಿಪಿಎಲ್​ಗೆ ಅರ್ಹರಿದ್ದೂ ಕೂಡ ಎಪಿಎಲ್​ಗೆ ಸೇರಿಸಿದ್ದರೇ ಅಂಥವರಿಗೆ ಮರು ಹಂಚಿಕೆ ಮಾಡುತ್ತೇವೆ. ಬಿಪಿಎಲ್​ಗೆ ಅರ್ಹರಿದ್ದವರ ಕಾರ್ಡ್ ರದ್ದಾಗಿದ್ದರೆ ಒಂದು ವಾರ ಕಾಲಾವಕಾಶ ನೀಡಿ, ಮರು ನೋಂದಣಿ ಮಾಡಿಕೊಂಡು ಕಾರ್ಡ್​ ಮರುಹಂಚಿಕೆ ಮಾಡುತ್ತೇವೆ ಎಂದರು.

ಅಧಿಕಾರಿಗಳ ತಪ್ಪಿಲ್ಲ : ಮುನಿಯಪ್ಪ
ಬಿಪಿಎಲ್ ಕಾರ್ಡ್​ದಾರರನ್ನು ಎಪಿಎಲ್​ಗೆ ಸೇರ್ಪಡೆ ಮಾಡಿರುವ ವಿಚಾರವಾಗಿ ಮಾತನಾಡಿದ ಸಚಿವ ಮುನಿಯಪ್ಪ, ‘ಇದರಲ್ಲಿ ಅಧಿಕಾರಿಗಳ ತಪ್ಪಿಲ್ಲ, ಎಲ್ಲ ಗೊಂದಲದ ಹೊಣೆ ನಾನೇ ಹೊರುವೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆ ನೀಡುವೆ. ಯಾವುದೇ ಅರ್ಹ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಿಲ್ಲ. ಮಾನದಂಡಗಳ ಅನ್ವಯ ಪರಿಶೀಲನೆ ಮಾಡಿ ಪರಿಷ್ಕರಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ನಿಯಮಗಳ ಅನ್ವಯ ಪರಿಷ್ಕರಿಸಲಾಗಿದೆ. ಅನರ್ಹ ಎಂಬ ಕಾರ್ಡ್​ಗಳನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿ ಇಡಲಾಗಿದೆ. ಬಿಪಿಎಲ್​ಗೆ ಅನರ್ಹರು ಎಂದು ಕಂಡು ಬಂದಿರುವ ಕಾರ್ಡ್​ಗಳನ್ನು ಎಪಿಎಲ್ ಗೆ ಸೇರಿಸಲಾಗಿದೆ. ಬಿಪಿಎಲ್​ಗೆ ಅರ್ಹರಿದ್ದೂ ಕೂಡ ಎಪಿಎಲ್​ಗೆ ಸೇರಿಸಿದ್ದರೇ ಅಂಥವರಿಗೆ ಮರು ಹಂಚಿಕೆ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಡಿಬಿಟಿ (ನೇರ ಬ್ಯಾಂಕ್ ವರ್ಗಾವಣೆ) ಗಾಗಿ ವಿತರಿಸಲು ನಮಗೆ ಸಾಕಷ್ಟು ಹಣ ಸಿಕ್ಕಿದೆ. ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಇಲ್ಲ, ನಾವು ಇದನ್ನು ಮಾಡುತ್ತಿರುವಾಗ ಒಂದು ಅಥವಾ ಎರಡು ಪ್ರತಿಶತದಷ್ಟು ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್ (ಬಡತನ ರೇಖೆಯ ಮೇಲೆ) ಪರಿವರ್ತಿಸಲಾಗಿದೆ. ಬಿಪಿಎಲ್ ಕಾರ್ಡ್‌ಗಳಲ್ಲಿ ಶೇಕಡ ಒಂದು ಅಥವಾ ಎರಡರಷ್ಟು ಮಾತ್ರ ಬಡತನ ರೇಖೆಗಿಂತ ಮೇಲಿನ (ಎಪಿಎಲ್) ಕಾರ್ಡ್‌ಗಳಾಗಿ ಪರಿವರ್ತನೆಯಾಗಿದೆ ಎಂದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!