spot_img
Wednesday, April 1, 2026
spot_img

ಮಂದಾರ್ತಿಯಲ್ಲಿ ದುರ್ಗಾ ಗಾರ್ಡನ್ ಉದ್ಘಾಟನೆ

 

ಮಂದಾರ್ತಿ: (ಜನಪ್ರತಿನಿಧಿ ವಾರ್ತೆ) ಯುವಜನತೆಗಿಂದು ತಮ್ಮ ಹುಟ್ಟೂರುಗಳಲ್ಲೆ ಉದ್ಯೋಗವಕಾಶಗಳು ಸಿಗುವಂತಾಗಬೇಕು. ಗ್ರಾಮೀಣ ಪ್ರದೇಶದಲ್ಲಿ ಆಧುನಿಕ ಸೌಲಭ್ಯ ಕಲ್ಪಿಸುವುದರಿಂದ ದೇಶದ ಅಭಿವೃದ್ಧಿಯಾಗುತ್ತದೆ. ಹಳ್ಳಿಗಳು ಅಭಿವೃದ್ಧಿ ಹೊಂದಿದಾಗ ದೇಶದ ಅಭಿವೃದ್ಧಿ ಸುಲಭವಾಗುತ್ತದೆ. ಸ್ವ ಉದ್ಯೋಗದತ್ತ ಯುವಜನತೆ ಒಲವು ತೋರುವುದು ಇವತ್ತಿನ ಅಗತ್ಯವಾಗಿದೆ ಎಂದು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ.ಎಚ್.ಎಸ್ ಶೆಟ್ಟಿ ಹೇಳಿದರು.

ಮಂದಾರ್ತಿ ಶೇಡಿಕೊಡ್ಲುವಿನಲ್ಲಿ ಅತ್ಯಾಧುನಿಕ ವಿನ್ಯಾಸದೊಂದಿಗೆ ನಿರ್ಮಾಣಗೊಂಡ ತೆರೆದ ಸಭಾಂಗಣ ದುರ್ಗಾ ಗಾರ್ಡನ್ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಮೂಲಭೂತ ಸೌಕರ್ಯಗಳಿಂದ ಊರಿನ ಹೆಸರು ಬರುತ್ತದೆ. ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಪೂರಕವಾಗುತ್ತದೆ. ಭಾವನಾತ್ಮಕವಾಗಿ ಬೆಳೆವಣಿಗೆ ಹೊಂದಲು ಕೂಡಾ ಸಹಕಾರಿಯಾಗುತ್ತದೆ. ಇಂಥಹ ಆಧುನಿಕ ಶೈಲಿಯ ಸಭಾಂಗಣಗಳು ಇವತ್ತಿನ ಅವಶ್ಯಕತೆ ಎಂದರು.
ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಎಚ್.ಧನಂಜಯ ಶೆಟ್ಟಿ, ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದ ಅಧ್ಯಕ್ಷರಾದ ಆನಂದ ಸಿ.ಕುಂದರ್, ಪಟ್ಲ ಫೌಂಡೇಶನ್ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಬ್ರಹ್ಮಾವರ ಘಟಕ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ತೋಟಗಾರಿಕೆ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಎಚ್.ಜಯಶೀಲ ಶೆಟ್ಟಿ, ಹೆಗ್ಗುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ, ಹಿರಿಯರಾದ ಎಚ್.ಕೃಷ್ಣ ಶೆಟ್ಟಿ ಶೆಡಿಕೊಡ್ಲು ಉಪಸ್ಥಿತರಿದ್ದರು.

ದುರ್ಗಾ ಗಾರ್ಡನ್ ಮುಖ್ಯಸ್ಥರಾದ ಎಚ್.ವಿಠಲ ಶೆಟ್ಟಿ ಶೇಡಿಕೊಡ್ಲು ಸ್ವಾಗತಿಸಿ, ನಿವೃತ್ತ ಪ್ರಾಂಶುಪಾಲರಾದ ಎಚ್.ಬಾಲಕೃಷ್ಣ ಶೆಟ್ಟಿ ಮೊಳಹಳ್ಳಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಸುದರ್ಶನ ಶೆಟ್ಟಿ ಮಂದಾರ್ತಿ ವಂದಿಸಿದರು. ಶಶಿಧರ ಶೆಟ್ಟಿ ನಂಚಾರು ಕಾರ್ಯಕ್ರಮ ನಿರ್ವಹಿಸಿದರು.

ಬಳಿಕ ಪಟ್ಲ ಫೌಂಡೇಶನ್ ಬ್ರಹ್ಮಾವರ ಘಟಕದ ದ್ವಿತೀಯ ವಾರ್ಷಿಕೋತ್ಸವ ಪ್ರಯುಕ್ತ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಪಾವಂಜೆ ಮೇಳದವರಿಂದ ಭಾರತ ವರ್ಷಿಣಿ ಯಕ್ಷಗಾನ ಪ್ರದರ್ಶನಗೊಂಡಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!