spot_img
Wednesday, April 1, 2026
spot_img

ಆಲೂರು: ಜ್ಞಾನವಿಕಾಸ ಕಾರ್ಯಕ್ರಮದಡಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕುಂದಾಪುರ ತಾಲೂಕಿನ ಚಿತ್ತೂರು ವಲಯದ ಆಲೂರು ಒಕ್ಕೂಟದ ಸಿರಿ ಜ್ಞಾನ ವಿಕಾಸ ಕೇಂದ್ರದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮವು ಸರಕಾರಿ ಪ್ರೌಢಶಾಲೆ ಆಲೂರು ಇಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದಯ್ ಕುಮಾರ್ ಶೆಟ್ಟಿ ವಹಿಸಿದ್ದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ರೇಣುಕಾ ಕೋಡಪದವು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಜರಗುವ ಅನೇಕ ಕಾರ್ಯಕ್ರಮಗಳಲ್ಲಿ ಟ್ಯೂಷನ್ ಕ್ಲಾಸ್ ಒಂದಾಗಿದೆ. ಗ್ರಾಮೀಣ ಭಾಗದಲ್ಲಿರುವ ಮಕ್ಕಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಶಿಕ್ಷಣವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಕಲಿಕೆ ಎಂಬುದು ನಿರಂತರ ಪ್ರಕ್ರಿಯೆ ಕಲಿಕೆಯಲ್ಲಿ ಉಂಟಾಗುವ ಏರು ಪೇರು ಗಳನ್ನು ಹೋಗಲಾಡಿಸಲು ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣದ ಮಟ್ಟವನ್ನು ಹೆಚ್ಚು ಮಾಡಲು ಟ್ಯೂಷನ್ ಕ್ಲಾಸ್ ಅತಿ ಅಗತ್ಯವಿದೆ ಎಂದು ಹೇಳಿದರು.

ಶಿಕ್ಷಕರಾದ ಗಣೇಶ ಮಾತನಾಡಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಉತ್ತಮವಾದ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ ಎಂದು ಹೇಳಿದರು. ವೇದಿಕೆಯಲ್ಲಿ ಆಲೂರು ಒಕ್ಕೂಟದ ಉಪಾಧ್ಯಕ್ಷೆ ಚಂದ್ರಾವತಿ ಸೇವಾ ಪ್ರತಿನಿಧಿ ಚಂದ್ರಮತಿ, ಟ್ಯೂಷನ್ ಕ್ಲಾಸ್ ನ ಶಿಕ್ಷಕಿ ದೀಪ, ಆಲೂರು ಪ್ರೌಢಶಾಲೆಯ ಶಿಕ್ಷಕಿಯರಾದ ಅಮೃತ ಮತ್ತು ವೀಣಾ ಉಪಸ್ಥಿತರಿದ್ದರು.

ಗಣೇಶ್ ಸ್ವಾಗತಿಸಿದರು. ಶಿಕ್ಷಕರಾದ ಶಶಿಧರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!