spot_img
Sunday, February 15, 2026
spot_img

ಉಪ ಚುನಾವಣೆ ಸೋಲಿಗೆ ಆಂತರಿಕ ಭಿನ್ನಾಭಿಪ್ರಾಯವೇ ಮೂಲ ಕಾರಣ | ಬಂಡಾಯ ನಾಯಕರ ವಿರುದ್ಧ ಕ್ರಮಕ್ಕೆ ಬಿಜೆಪಿ ಮುಂದು !

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಶಾಸಕರ ಆಯ್ಕೆಗಾಗಿ ನಡೆದ ಉಪಚುನಾವಣೆಗಳಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದ್ದು, ಈ ಸೋಲಿಗೆ ಬಿಜೆಪಿ ಒಳಗಿನ ಆಂತರಿಕ ಭಿನ್ನಾಭಿಪ್ರಾಯವೇ  ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ.

ಉಪಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕ ರಾಜ್ಯ ಪದಾಧಿಕಾರಿಗಳ ಬದಲಾವಣೆ ಹಾಗೂ ಬಂಡಾಯ ನಾಯಕರನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಬಗ್ಗೆ ಹೈಕಮಾಂಡ್’ಗೆ ಮನವಿ ಸಲ್ಲಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಡಿಸೆಂಬರ್‌ನಲ್ಲಿ ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.

ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ತೀವ್ರ ಟೀಕೆ ನಡೆಸುತ್ತಿದ್ದು, ಈ ಬಗ್ಗೆ ವಿಜಯೇಂದ್ರ ಯಡಿಯೂರಪ್ಪ ಕೇಂದ್ರ ನಾಯಕರಿಗೆ ದೂರು ನೀಡಲು ಮುಂದಾಗಿದ್ದಾರೆಂದು ಕೂಡ ಬಿಜೆಪಿಯ ಮೂಲಗಳಿಂದ ತಿಳಿದುಬಂದಿದೆ.

ಉಪ ಚುನಾವಣೆಯ ಬೆನ್ನಲ್ಲೇ ವಿಜಯೇಂದ್ರ ಯಡಿಯೂರಪ್ಪ ರಾಜೀನಾಮೆಗೆ ಯತ್ನಾಳ್‌ ಮಾಡಿರುವ ಆಗ್ರಹ, ವಕ್ಫ್ ಬಗ್ಗೆ ಯತ್ನಾಳ್‌ ಬಣ ನಡೆಸುತ್ತಿರುವ ಅಭಿಯಾನ ವಿಜಯೇಂದ್ರ ಯಡಿಯೂರಪ್ಪ ಬಣವನ್ನು ತೀವ್ರವಾಗಿ ಕೆರಳಿಸಿದೆ. ಮಾತ್ರವಲ್ಲದೇ ಪಕ್ಷ ವಿರೋಧಿ ಚಟುವಟಿಕೆಯನ್ನು ಹೆಚ್ಚಿಸುತ್ತಿರುವುದರಿಂದ ಅವರನ್ನು ಹಣಿಯುವುದಕ್ಕಾಗಿ ವಿಜಯೇಂದ್ರ ವರಿಷ್ಠರ ಭೇಟಿಗೆ ನಿರ್ಧರಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಡಿಸೆಂಬರ್‌ನಲ್ಲಿ ಬಿಜೆಪಿಯ ಸಂಘಟನ ಪರ್ವ ಮುಕ್ತಾಯಗೊಳ್ಳುತ್ತದೆ. ಸಂಸತ್‌ ಹಾಗೂ ವಿಧಾನ ಮಂಡಲದ ಅಧಿವೇಶನವೂ ಸಮಾಪನಗೊಳ್ಳುತ್ತದೆ. ಹೀಗಾಗಿ ಡಿಸೆಂಬರ್‌ ಕೊನೆಯ ವಾರ ದೆಹಲಿ ತೆರಳಲು ನಿರ್ಧರಿಸಿದ್ದು, ಯತ್ನಾಳ್‌ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಆಗ್ರಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದರಂತೆ ಮುಂದಿನ ತಿಂಗಳು ಪಕ್ಷದ ಪದಾಧಿಕಾರಿಗಳ ಬದಲಾವಣೆ ಸೇರಿದಂತೆ ಕೆಲವರ ವಿರುದ್ದ ಶಿಸ್ತು ಕ್ರಮವಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ವಿವರಿಸಿವೆ.

ಇತ್ತೀಚೆಗಷ್ಟೇ ನಡೆದ ಉಪಚುನಾವಣೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮೈತ್ರಿಕೂಟದ ಪಾಲುದಾರ ಜೆಡಿಎಸ್ ಸೋಲನುಭವಿಸಿದ್ದರೆ, ಶಿಗ್ಗಾಂವಿ ಮತ್ತು ಸಂಡೂರಿನಲ್ಲಿ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದೆ.

2023ರಲ್ಲಿ ಶಿಗ್ಗಾಂವಿಯಿಂದ ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಚುನಾಯಿತರಾಗಿದ್ದರು. ಸೀಟು ಉಳಿಸಿಕೊಳ್ಳುವ ಸಂಪೂರ್ಣ ವಿಶ್ವಾಸದಲ್ಲಿದ್ದ ಬಿಜೆಪಿಗೆ ಉಪಚುನಾವಮೆ ಸೋಲು ದೊಡ್ಡ ಆಘಾತ ನೀಡಿದೆ.

ಈ ನಡುವೆ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಅವರು, ಉಪಚುನಾವಣೆ ಸೋಲಿಗೆ ಕಾರಣ ಹುಡುಕಲು ರಾಜ್ಯ ಮಟ್ಟದ ಪಕ್ಷದ ಸಭೆ ಮಂಗಳವಾರ ನಡೆಯಲಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಜಯಭೇರಿ ಬಾರಿಸಿದೆ ಎಂದರೆ ರಾಜ್ಯದ ಜನತೆ ಅದರ ಭ್ರಷ್ಟ ಕೃತ್ಯಗಳನ್ನು ಒಪ್ಪಿಕೊಂಡಿದ್ದಾರೆ ಎಂದರ್ಥವಲ್ಲ. ಉಪಚುನಾವಣೆ ಫಲಿತಾಂಶಗಳು ಪಕ್ಷಕ್ಕೆ ಹಿನ್ನಡೆಯಾಗಿದೆ ಎಂಬುದನ್ನು ನಾನು ಅಲ್ಲಗಳೆಯುವುದಿಲ್ಲ. ಆದರೆ. ನಾವು ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ. ಮೂರು ಕ್ಷೇತ್ರಗಳ ಫಲಿತಾಂಶವನ್ನು ಪರಿಶೀಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ವಿಜಯೇಂದ್ರ ನಾಯಕತ್ವದ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಿನ್ನಾಭಿಪ್ರಾಯ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿದ ಅವರು, ಸಭೆಯಲ್ಲಿ ಈ ಬಗ್ಗೆಯೂ ಚರ್ಚಿಸಲಾಗುವುದು. ಡಿಸೆಂಬರ್ ಮೊದಲ ವಾರದಲ್ಲಿ ಬಿಜೆಪಿ ಕೇಂದ್ರ ನಾಯಕರು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ ಎಂದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!