spot_img
Wednesday, April 1, 2026
spot_img

ಆರ್.ಎಸ್.ಎಸ್ ಮನುಸ್ಮೃತಿ ಪರವಾಗಿರುವುದರಿಂದಲೇ ನಮ್ಮ ಸಂವಿಧಾನವನ್ನು ವಿರೋಧಿಸುತ್ತದೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಆರ್.ಎಸ್.ಎಸ್ ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸಿದ್ದು ದೇವರು ಅಲ್ಲ. ಎಲ್ಲ ಮಾಡಿದ್ದು ಮನುಸ್ಮೃತಿ. ಆರ್.ಎಸ್.ಎಸ್ ನವರು ಮನುಸ್ಮೃತಿ ಪರವಾಗಿರುವುದರಿಂದಲೇ ನಮ್ಮ ಸಂವಿಧಾನವನ್ನು ವಿರೋಧಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ಜಾರಿಯ 75ನೇ ವರ್ಷಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಬಸವಣ್ಣನವರು 850 ವರ್ಷಗಳ ಹಿಂದೆ ಜಾತಿ ವ್ಯವಸ್ಥೆಯನ್ನು, ಜಾತಿ ಅಸಮಾನತೆಯನ್ನು ವಿರೋಧಿಸಿದ್ದರು. ಆದರೆ ಇವತ್ತಿಗೂ ಜಾತಿ ವ್ಯವಸ್ಥೆ ಹೋಗಿಲ್ಲ. ಬಾಯಲ್ಲಿ ಬಸವಾದಿ ಶರಣರ ವಚನ ಹೇಳೋದು. ಆಮೇಲೆ, ನೀನು ಯಾವ ಜಾತಿ ಅಂತ ಕೇಳ್ತಾರೆ. ಈಗಲೂ ಇವನಾರವ, ಇವನಾರವ ಅಂತಲೇ ಕೇಳುತ್ತಿದ್ದಾರೆ ಹೊರತು, ಇವ ನಮ್ಮವ ಅಂತ ಹೇಳುತ್ತಲೇ ಇಲ್ಲ ಎಂದಿದ್ದಾರೆ.

ಸಂವಿಧಾನದ ಧ್ಯೇಯೋದ್ದೇಶಗಳು ಎಷ್ಟರ ಮಟ್ಟಿಗೆ ಜಾರಿಯಾಗಿವೆ, ಏಕಿನ್ನೂ ಸಮಾನತೆಯ ಸಮಾಜ ನಿರ್ಮಾಣ ಆಗಿಲ್ಲ ಎನ್ನುವುದನ್ನು ಅವಲೋಕನ ಮಾಡಿಕೊಳ್ಳಬೇಕಿದೆ. ಸಂವಿಧಾನ ಜಾರಿ ಸಭೆಯಲ್ಲಿ ಅಂಬೇಡ್ಕರ್ ಅವರು ಆಡಿದ ಎಚ್ಚರಿಕೆಯ ಮಾತುಗಳನ್ನು ನಾವು ಮರೆಯಬಾರದು. ಪ್ರತಿಯೊಬ್ಬರಿಗೂ ಒಂದು ಓಟು, ಒಂದು ಮೌಲ್ಯ ಸಿಕ್ಕಿದೆ. ಆದರೆ ಎಲ್ಲರಿಗೂ ಆರ್ಥಿಕ ಸ್ವಾತಂತ್ರ್ಯ ಸಿಕ್ಕಿಲ್ಲ. ನಾವು ವೈರುಧ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಾಮಾಜಿಕ, ಆರ್ಥಿಕ ಅಸಮಾನತೆ ಹೋಗಲಾಡಿಸದಿದ್ದರೆ ರಾಜಕೀಯ ಪ್ರಜಾಪ್ರಭುತ್ವ ಯಶಸ್ವಿ ಆಗಲ್ಲ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬರು ನೀಡಿದ್ದರು ಎಂದಿದ್ದಾರೆ.

ಅಂಬೇಡ್ಕರ್ ಅವರಿಗೆ ದೂರದೃಷ್ಟಿ ಇತ್ತು. ಆದ್ದರಿಂದಲೇ, ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ ಒಳ್ಳೆಯವರ ಕೈಯಲ್ಲಿ ಇರಬೇಕು. ಕೆಟ್ಟವರ ಕೈಗೆ ಹೋದರೆ ಮೌಲ್ಯಗಳು ಸಾಯುತ್ತವೆ ಎಂದು ಎಚ್ಚರಿಸಿದ್ದರು. ಆರ್.ಎಸ್.ಎಸ್ ಬಿಜೆಪಿಯ ಮಾತೃಸಂಸ್ಥೆ. ಇದರ ಅಧ್ಯಕ್ಷನಾಗಿದ್ದ ಗೋಳ್ವಾಳ್ಕರ್ ಅಂಬೇಡ್ಕರ್ ಅವರ ಸಂವಿಧಾನ ಜಾರಿಯನ್ನು ವಿರೋಧಿಸಿದ್ದರು. ಬ್ರಿಟೀಷರ ಅವಧಿಯಲ್ಲೇ ಹುಟ್ಟಿದ ಆರ್.ಎಸ್.ಎಸ್ ಭಾರತದ ಸ್ವಾತಂತ್ರ್ಯ ಹೋರಾಟದಲ್ಲೇ ಭಾಗವಹಿಸಲಿಲ್ಲ. ಈಗ ಈ ಆರ್.ಎಸ್.ಎಸ್ ದೇಶಭಕ್ತಿಯ ಪಾಠ ಮಾಡುತ್ತಿದೆ. ಆರ್.ಎಸ್.ಎಸ್ ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ. ಬಿಜೆಪಿ ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿದೆ. ಕಾಂಗ್ರೆಸ್ ಸಂವಿಧಾನದಲ್ಲಿ ನಂಬಿಕೆ ಇಟ್ಟುಕೊಂಡಿದೆ. ಇದೇ ಎರಡೂ ಪಕ್ಷಕ್ಕೂ ಇರುವ ವ್ಯತ್ಯಾಸ ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!