spot_img
Sunday, February 15, 2026
spot_img

ಕಾಪಾಡೋ ಸಿದ್ದರಾಮಯ್ಯ, ಕಾಪಾಡೋ ಶಿವಪ್ಪ ಅಂತ ಸಿಎಂ, ಡಿಸಿಎಂ ಮನೆಯಲ್ಲಿರುತ್ತಾರೆ : ಬಿಎಸ್‌ವೈ, ವಿಜಯೇಂದ್ರ ವಿರುದ್ಧ ಯತ್ನಾಳ್‌ ತೀವ್ರ ವಾಗ್ದಾಳಿ

ಜನಪ್ರತಿನಿಧಿ (ಕಲಬುರಗಿ) : ಬಿಜೆಪಿಯಲ್ಲಿನ ಭಿನ್ನಮತ ತಾರಕಕ್ಕೇರಿದ್ದು, ವಕ್ಫ್ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಪ್ರತ್ಯೇಕವಾಗಿ ಚಾಲನೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ವಕ್ಫ್ ವಿರುದ್ಧದ ಹೋರಾಟ ಮಾಡುತ್ತಿರುವ ಕುರಿತಾಗಿ ಮಾತನಾಡಿರುವ ಶಾಸಕ ಯತ್ನಾಳ್, ಇಲ್ಲಿ ಯಾರೂ ಸಿಎಂ ಆಗುವುದಕ್ಕೆ ಹೋರಾಟ ಮಾಡುತ್ತಿಲ್ಲ. ನಾವು ವಕ್ಫ್ ವಿರುದ್ಧ ಹೋರಾಟ ಮಾಡಿದರೆ ನಿಮಗೆ ಯಾಕೆ ಭಯ, ಟೆನ್ಶನ್ ಎಂದು ಯಡಿಯೂರಪ್ಪ, ವಿಜಯೇಂದ್ರ ಅವರನ್ನು ಪ್ರಶ್ನಿಸಿದ್ದಾರೆ.

ವಕ್ಪ್‌ ವಿರುದ್ಧದ ಹೋರಾಟ ಅಧಿಕಾರ, ಅಂತಸ್ತು, ಹುದ್ದೆ ಮೇಲೆ ಕಣ್ಣಿಟ್ಟು ಆರಂಭಿಸಿದ್ದಲ್ಲ ಯಾರೂ ಸ್ವಾರ್ಥಕ್ಕಾಗಿ ವಕ್ಫ್ ವಿರುದ್ಧ ಹೋರಾಟ ನಡೆಸುತ್ತಿಲ್ಲ. ಯಾವುದೇ ಕುಟುಂಬವನ್ನು ಮುಗಿಸಲು ನಾವು ಹೋರಾಟ ಮಾಡುತ್ತಿಲ್ಲ ಎಂದು ವಿಜಯೇಂದ್ರ ವಿರುದ್ಧ ಪರೋಕ್ಷ ವಾಗ್ದಾಳಿ ಮಾಡಿದ್ದಾರೆ.

ನನ್ನ ಬಗ್ಗೆ ಕಠಿಣ ಕ್ರಮ ಕೈಗೊಳ್ತೇವೆ ಎಂದು ಹೇಳುತ್ತಾರೆ ಯಾಕೆ ಕ್ರಮ ಕೈಗೊಳ್ಳುತ್ತೀರಿ? ಎಂದು ಯತ್ನಾಳ್ ವಿಜಯೇಂದ್ರ, ಬಿಎಸ್ ವೈ ಗೆ ಸವಾಲು ಹಾಕಿದ್ದಾರೆ. ನಾವು ಕಲಬುರಗಿ ಬಳಿಕ ಬೆಳಗಾವಿಯಲ್ಲಿ ಬೃಹತ್ ಹೋರಾಟ ಮುಗಿಸಿ ದೆಹಲಿಗೆ ಹೋಗುತ್ತೇವೆ. ಡಿ. 3-4 ರಂದು ದೆಹಲಿಗೆ ಹೋಗಿ ವಕ್ಪ್ ವಿರುದ್ದ ವರದಿ ನೀಡುತ್ತೇವೆ ಎಂದು ಯತ್ನಾಳ್ ಹೇಳಿದ್ದಾರೆ.

ಕಾಪಾಡೋ ಸಿದ್ದರಾಮಯ್ಯ, ಕಾಪಾಡೋ ಶಿವಪ್ಪ ಅಂತ ಸಿಎಂ, ಡಿಸಿಎಂ ಮನೆಯಲ್ಲಿರುತ್ತಾರೆ

ಬಿ.ವೈ.ವಿಜಯೇಂದ್ರ ಹೋರಾಟ ಮಾಡಲ್ಲ. ವಿಜಯೇಂದ್ರ ವಕ್ಫ್​​ ವಿರುದ್ಧ ಯಾವ ಹೋರಾಟ ಮಾಡಿದ್ದಾರೆ? ಯಾವ ರೈತರ ಮನವಿ ಸ್ವೀಕರಿಸಿದ್ದಾನೆ ತೋರಿಸಿ. ರಾತ್ರಿಯಾದರೆ ಸಾಕು ಡಿಕೆ-ಸಿದ್ದರಾಮಯ್ಯ ಮನೆಯಲ್ಲಿ ಇರುತ್ತಾರೆ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ನೂರೆಂಟು ಕೇಸ್ ಇದೆ. ಕಾಪಾಡೋ ಶಿವಪ್ಪ ಅಂತಾ ಡಿಸಿಎಂ ಮನೆಯಲ್ಲಿ ಇರುತ್ತಾರೆ. ಕಾಪಾಡೋ ಸಿದ್ದರಾಮಯ್ಯ ಅಂತಾ ಅವರ ಮನೆಯಲ್ಲಿಯೂ ಇರ್ತಾರೆ ಎಂದು ಯತ್ನಾಳ್ ವ್ಯಂಗ್ಯವಾಡಿದ್ದಾರೆ.

ಮುಂದೆ ಟಿಕೆಟ್ ಕೊಡುವ ಅಧಿಕಾರ ನಮಗೆ ಬರುತ್ತೆ‌. ಹೈಕಮಾಂಡ್ ಗೆ ನನ್ನ ವಿರುದ್ದ ಪತ್ರ ಬರೆಯುತ್ತಿರುವುದು ಹೊಸದೇನೂ ಅಲ್ಲ‌. ನನ್ನ ವಿರುದ್ದ ನೀಡಿರುವ ದೂರುಗಳೇ ಒಂದು ರೂಮ್ ತುಂಬಿವೆ‌. ಆದರೆ ನನ್ನನ್ನು ಏನು ಮಾಡುವುದಕ್ಕೆ ಆಗುವುದಿಲ್ಲ ಎಂದು ವಿಜಯೇಂದ್ರಗೆ ಯತ್ನಾಳ್ ಟಾಂಗ್ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!