spot_img
Wednesday, December 4, 2024
spot_img

ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಜನಪ್ರತಿನಿಧಿ (ಬೆಂಗಳೂರು) : ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ, ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದರು.

ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳಿಗೆ ಮನೆ, ಕುಡಿಯುವ ನೀರು, ರಸ್ತೆ ಸಂಪರ್ಕ, ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ರಸ್ತೆಗಳ ಅಭಿವೃದ್ಧಿಗೆ ಮತ್ತು ಕುಡಿಯುವ ನೀರು ಸೌಲಭ್ಯ ಕಲ್ಪಿಸಲು ಯಾವುದೇ ಅಡ್ಡಿ ಉಂಟು ಮಾಡಬಾರದು. ಮನೆ ನಿರ್ಮಾಣ: ನಿವೇಶನ ರಹಿತರು ಒಪ್ಪಿಗೆ ಸೂಚಿಸಿದರೆ ಅವರಿಗೆ ಬೇರೆ ಕಡೆ ನಿವೇಶನ ಒದಗಿಸಿ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಅರಣ್ಯದ ಅಂಚಿನಲ್ಲಿ ಜಮೀನುಗಳನ್ನು ಜಿಲ್ಲಾಧಿಕಾರಿಗಳು ಗುರುತಿಸಬೇಕು. ನಿವೇಶನ ಇದ್ದರೂ ಮನೆಯಿಲ್ಲದವರಿಗೆ ರಾಜೀವ್‌ ಗಾಂಧಿ ವಸತಿ ನಿಗಮದ ವತಿಯಿಂದ ಮನೆ ಮಂಜೂರಾತಿಗೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿದ್ಯುತ್‌ ಸಂಪರ್ಕ:
* ಮೈಸೂರು ಜಿಲ್ಲೆಯಲ್ಲಿ 194 ಹಾಡಿಗಳು ಅರಣ್ಯದಂಚಿನಲ್ಲಿದ್ದು, ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಅರಣ್ಯದೊಳಗಿರುವ 21 ಹಾಡಿಗಳ ಪೈಕಿ ಮೂರು ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದ್ದು, 18 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಇರುವುದಿಲ್ಲ. 18 ಹಾಡಿಗಳಿಗೆ ಇಂಧನ ಇಲಾಖೆಯಿಂದ ಸೋಲಾರ್‌ ದೀಪಗಳನ್ನು ಅಳವಡಿಸಲಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಅರಣ್ಯದಂಚಿನಲ್ಲಿರುವ ಎಲ್ಲಾ 125 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಅರಣ್ಯದೊಳಗಿರುವ 33 ಹಾಡಿಗಳ ಪೈಕಿ 15 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಇನ್ನುಳಿದಿರುವ 18 ಹಾಡಿಗಳಿಗೆ ಇಂಧನ ಇಲಾಖೆಯಿಂದ ಸೋಲಾರ್‌ ದೀಪಗಳನ್ನು ಅಳವಡಿಸಲಾಗಿದೆ.

ಕೊಡುಗು ಜಿಲ್ಲೆಯಲ್ಲಿ ಅರಣ್ಯದಂಚಿನಲ್ಲಿರುವ 211 ಹಾಡಿಗಳ ಪೈಕಿ 154 ಹಾಡಿಗಳಿಗೆ ಹಾಗೂ ಅರಣ್ಯದೊಳಗಿರುವ 74 ಹಾಡಿಗಳ ಪೈಕಿ 57 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. 17 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಇರುವುದಿಲ್ಲ. 5 ಹಾಡಿಗಳಿಗೆ ಸೋಲಾರ್‌ ದೀಪಗಳನ್ನು ಅಳವಡಿಸಲಾಗಿದೆ.

ವಿದ್ಯುತ್‌ ಸಂಪರ್ಕ ಕಲ್ಪಿಸಲು ಬಾಕಿಯಿರುವ ಪ್ರಸ್ತಾವನೆಗಳಿಗೆ ಶೀಘ್ರ ಅನುಮತಿ ನೀಡಿ ಶಾಶ್ವತ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕು.

ಮೈಸೂರು ಜಿಲ್ಲೆಯಲ್ಲಿ 215 ಹಾಡಿಗಳಿದ್ದು, 49,778 ಜನರು ವಾಸಿಸುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ 158 ಹಾಡಿಗಳಿದ್ದು, 27,763 ಜನರು ವಾಸಿಸುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ 228 ಹಾಡಿಗಳಿದ್ದು, 26,909 ಮಂದಿ ವಾಸಿಸುತ್ತಿದ್ದಾರೆ.

ಹಕ್ಕುಪತ್ರ ವಿತರಣೆ:

  • ಬುಡಕಟ್ಟು ಜನರಿಗೆ ಹಕ್ಕುಪತ್ರ ವಿತರಣೆಗೆ ಇರುವ ತಾಂತ್ರಿಕ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು.
  • ಹಕ್ಕುಪತ್ರ ಹೊಂದಿದವರು ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಹೊಂದಲು ಅರ್ಹತೆ ಪಡೆಯುವ ಕುರಿತು ಕ್ರಮ ಕೈಗೊಳ್ಳಬೇಕು.
  • ಅರಣ್ಯ ಹಕ್ಕು ಕಾಯ್ದೆಯಡಿ ಬುಡಕಟ್ಟು ಸಮುದಾಯದ ಅರಣ್ಯವಾಸಿಗಳಿಗೆ ವೈಯಕ್ತಿಕ ಹಕ್ಕುಪತ್ರಕ್ಕಾಗಿ 12,222 ಅರ್ಜಿ ಸ್ವೀಕರಿಸಲಾಗಿದ್ದು, 4,856 ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, 6,363 ಎಕ್ರೆ ವಿಸ್ತೀರ್ಣದ ಜಮೀನು ಮಂಜೂರು ಮಾಡಲಾಗಿದೆ. 6,808 ಅರ್ಜಿಗಳು ತಿರಸ್ಕೃತಗೊಂಡಿದ್ದು, ವಿಲೇವಾರಿ ಮಾಡಲು ಬಾಕಿಯಿರುವ 558 ಅರ್ಜಿಗಳನ್ನು ಪರಿಶೀಲಿಸಿ ಆದಷ್ಟು ಬೇಗನೆ ವಿಲೇವಾರಿ ಮಾಡಬೇಕು.
  • ಅರಣ್ಯ ಹಕ್ಕು ಕಾಯ್ದೆಯಡಿ ಇತರ ಪಾರಂಪರಿಕ ಅರಣ್ಯವಾಸಿಗಳಿಗೆ ಹಕ್ಕುಪತ್ರಕ್ಕಾಗಿ 1,626 ಅರ್ಜಿ ಸ್ವೀಕರಿಸಲಾಗಿದ್ದು, 531 ಹಕ್ಕುಪತ್ರ ವಿತರಿಸಿ 104 ವಿಸ್ತೀರ್ಣದ ಜಮೀನು ಮಂಜೂರು ಮಾಡಲಾಗಿದೆ. 1,095 ಅರ್ಜಿಗಳು ತಿರಸ್ಕೃತಗೊಂಡಿವೆ.
  • ಅರಣ್ಯ ಹಕ್ಕು ಕಾಯ್ದೆಯಡಿ ಸಮುದಾಯದ ಹಕ್ಕುಪತ್ರಕ್ಕಾಗಿ 260 ಅರ್ಜಿ ಸ್ವೀಕರಿಸಲಾಗಿದ್ದು, 160 ಹಕ್ಕುಪತ್ರ ವಿತರಿಸಿ 38,117 ಎಕ್ರೆ ವಿಸ್ತೀರ್ಣ ಪ್ರದೇಶ ಸಮುದಾಯ ಅರಣ್ಯ ಹಕ್ಕು ಒದಗಿಸಲಾಗಿದೆ.

ರಸ್ತೆ ಸಂಪರ್ಕ ಮತ್ತು ಕುಡಿಯುವ ನೀರು:

  • ಸಂಪರ್ಕ ರಸ್ತೆಗಳ ದುರಸ್ತಿ, ಉನ್ನತೀಕರಣಕ್ಕೆ ರಾಜ್ಯ ಸರ್ಕಾರದ ಹಂತದಲ್ಲಿ ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು.

* ಆದಿವಾಸಿ ಸಮುದಾಯದ ಪದವೀಧರರಿಗೆ ಅರಣ್ಯ ಇಲಾಖೆಯಲ್ಲಿರುವಂತೆ ಆರೋಗ್ಯ ಇಲಾಖೆಯಲ್ಲೂ ಉದ್ಯೋಗದಲ್ಲಿ ಮೀಸಲಾತಿ ನೀಡಿ ಆದಿವಾಸಿ ಹಾಡಿಗಳಲ್ಲಿ ಸೂಕ್ತ ಉದ್ಯೋಗ ಒದಗಿಸುವಂತೆ ಸಮುದಾಯದ ಮುಖಂಡರ ಬೇಡಿಕೆ ಇದೆ. ಈ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳಬೇಕು.

* ಪಡಿತರ ಚೀಟಿ ಹೊಂದಿಲ್ಲದ ಬುಡಕಟ್ಟು ಕುಟುoಬಗಳಿಗೆ 15 ದಿನಗಳ ಒಳಗಾಗಿ ಬಿಪಿಎಲ್  ಪಡಿತರ ಚೀಟಿ ಒದಗಿಸಿ ವರದಿ ಸಲ್ಲಿಸಬೇಕು.

* ಅರಣ್ಯ ಹಕ್ಕು ಸಮಿತಿಗಳ ಮುಂದೆ ಬಾಕಿಯಿರುವ ಅರ್ಜಿಗಳನ್ನು ನಿಗದಿತ ಅವಧಿಯ ಒಳಗಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು.

* ಆರೋಗ್ಯ ಇಲಾಖೆಯಲ್ಲಿ ಬುಡಕಟ್ಟು ಜನರನ್ನು ಸ್ಥಳೀಯವಾಗಿ ನೇಮಕ ಮಾಡುವ ಬಗ್ಗೆ ಪರಿಶೀಲನೆ ಮಾಡಬೇಕು.

* ಬುಡಕಟ್ಟು ಸಮುದಾಯದವರಿಗೆ ಹಾಡಿಗಳಲ್ಲಿ ಸ್ಮಶಾನ ಭೂಮಿ ಒದಗಿಸಬೇಕು.

* ಬುಡಕಟ್ಟು ಸಮುದಾಯಕ್ಕೆ ಸೌಲಭ್ಯ ಕಲ್ಪಿಸುವ ವಿಷಯದಲ್ಲಿ ಕಂದಾಯ, ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.

* ಎರಡು ತಿoಗಳ ಒಳಗಾಗಿ ಮತ್ತೆ ಸಭೆ ಕರೆದು ಈ ಎಲ್ಲಾ ವಿಷಯಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಅದರ ಒಳಗಾಗಿ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!