spot_img
Sunday, February 15, 2026
spot_img

ಅದಾನಿ ಲಂಚ ಪ್ರಕರಣ ಸೇರಿ ವಿವಿಧ ವಿಷಯಗಳ ಚರ್ಚೆ, ಕೋಲಾಹಲ : ಸಂಸತ್ತಿನ ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ !

ಜನಪ್ರತಿನಿಧಿ (ನವ ದೆಹಲಿ) : ಉದ್ಯಮಿ ಗೌತಮ್ ಅದಾನಿ ಲಂಚ ಪ್ರಕರಣ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಹಾಗೂ ವಿವಿಧ ವಿಷಯಗಳ ಬಗ್ಗೆ ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯ ನಡುವೆ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆ(ಗುರುವಾರ)ಗೆ ಮುಂದೂಡಲಾಗಿದೆ.

ಇಂದು(ಬುಧವಾರ) ಅಧಿವೇಶನದ ಆರಂಭದಲ್ಲಿ ಕಾಂಗ್ರೆಸ್ ಒಳಗೊಂಡಂತೆ ಉಳಿದ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ಹಾಗೂ ವಿವಿಧ ವಿಷಯಗಳನ್ನು ಪ್ರಸ್ತಾಪಿಸಲು ಪ್ರಯತ್ನಿಸಿದ್ದರಿಂದ ಲೋಕಸಭೆಯ ಕಲಾಪವನ್ನು ಆರಂಭದಲ್ಲಿ ಮಧ್ಯಾಹ್ನ 12 ರವರೆಗೆ ಮತ್ತು ನಂತರ ನಾಳೆವರೆಗೆ ಮುಂದೂಡಲಾಯಿತು.

ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಕೆಲವು ಸದಸ್ಯರು ಬಾವಿಗಿಳಿದು ಪ್ರತಿಭಟಿಸಿದರು. ಇತರ ವಿರೋಧ ಪಕ್ಷದ ಸದಸ್ಯರು ಹಜಾರದಲ್ಲಿ ನಿಂತು ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು. ಸದನವನ್ನು ನಿಯಂತ್ರಿಸುವುದಕ್ಕೆ ಆಗದೇ ಸಭಾಪತಿಗಳು ಕಲಾಪವನ್ನು ಮುಂದೂಡಿದರು.

ಪ್ರತಿಪಕ್ಷದ ಸದಸ್ಯರು ಅದಾನಿ ವಿವಾದ ಮತ್ತು ಸಂಭಾಲ್‌ನಲ್ಲಿ ಇತ್ತೀಚಿನ ಹಿಂಸಾಚಾರದ ಬಗ್ಗೆ ಚರ್ಚಿಸಲು ಬಯಸಿದರು, ಸ್ಪೀಕರ್ ಓಂ ಬಿರ್ಲಾ ಅವರು ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡುವಂತೆ ವಿರೋಧ ಪಕ್ಷದ ಸದಸ್ಯರನ್ನು ಕೇಳಿದರು. ಗದ್ದಲದ ನಡುವೆ, ಒಂದು ಪ್ರಶ್ನೆಯನ್ನು ಚರ್ಚೆಗೆ ಕೈಗೆತ್ತಿಕೊಳ್ಳಲಾಯಿತು.

ಆದರೆ, ಪ್ರತಿಭಟನೆ ಮುಂದುವರಿದಿದ್ದು, ಸುಮಾರು ಆರು ನಿಮಿಷಗಳ ಕಾಲ ನಡೆದ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಲಂಚ ಆರೋಪ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆಗೆ ಪ್ರತಿಪಕ್ಷಗಳ ಸದಸ್ಯರು ಪಟ್ಟು ಹಿಡಿದಿದ್ದರಿಂದ ರಾಜ್ಯಸಭೆಯ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ಪ್ರತಿಪಕ್ಷಗಳ ಪ್ರತಿಭಟನೆಯಿಂದಾಗಿ ಬೆಳಗಿನ ಅಧಿವೇಶನದಲ್ಲಿ ಕಲಾಪವನ್ನು ಸಂಕ್ಷಿಪ್ತವಾಗಿ ಮುಂದೂಡಲಾಯಿತು,11.30 ಕ್ಕೆ ಸದನವು ಪುನಃ ಸೇರಿದಾಗ, ಅದೇ ಪರಿಸ್ಥಿತಿ ಪುನಾರಂಭವಾಯಿತು. ಇದರಿಂದ ಸಭಾಪತಿ ಜಗದೀಪ್ ಧನ್ ಕರ್ ಅವರು ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!