spot_img
Wednesday, December 4, 2024
spot_img

ಕರ್ನಾಟಕ ಸೇರಿ 15 ರಾಜ್ಯಗಳಿಗೆ ರೂ. 1,115 ಕೋಟಿ ವಿಪತ್ತು ಪರಿಹಾರ ನಿಧಿ ನೀಡಿದ ನಮೋ ಸರ್ಕಾರ.

ಜನಪ್ರತಿನಿಧಿ (ಬೆಂಗಳೂರು) : ದೇಶದಲ್ಲಿನ ವಿಪತ್ತುಗಳ ಪರಿಣಾಮಕಾರಿ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಹಲವಾರು ಉಪಕ್ರಮಗಳನ್ನು ಕೈಗೊಂಡಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 15 ರಾಜ್ಯಗಳಲ್ಲಿ ವಿವಿಧ ವಿಪತ್ತು ಪರಿಹಾರ ಮತ್ತು ಸಾಮರ್ಥ್ಯ ವೃದ್ಧಿ ಯೋಜನೆಗಳಿಗೆ ರೂ. 1,000 ಕೋಟಿ ಮೊತ್ತವನ್ನು ಬಿಡುಗಡೆ ಮಾಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಾಗರಿಕ ರಕ್ಷಣಾ ಸ್ವಯಂಸೇವಕರ ತರಬೇತಿ ಮತ್ತು ಸಾಮರ್ಥ್ಯ ವೃದ್ಧಿಗಾಗಿ ಒಟ್ಟು ರೂ. 115.67 ಕೋಟಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಅನುಮೋದಿಸಿದೆ.

ಕರ್ನಾಟಕ ಮತ್ತು ಕೇರಳಕ್ಕೆ ತಲಾ ರೂ. 72 ಕೋಟಿ ಅನುದಾನ ಬಿಡುಗಡೆ ಮಾಡಿದೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳಕ್ಕೆ ತಲಾ 50 ಕೋಟಿ, ಈಶಾನ್ಯದ ಏಳು ರಾಜ್ಯಗಳಿಗೆ ರೂ. 378 ಕೋಟಿ ರೂಪಾಯಿ ಬಿಡುಗಡೆಯಾಗಿದೆ.

ಕಳೆದ ತಿಂಗಳು ರಾಜ್ಯಗಳಿಗೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ಕರ್ನಾಟಕಕ್ಕೆ ರೂ. 6,498 ಕೋಟಿ ಹಂಚಿಕೆ ಮಾಡಿತ್ತು. 2024-25 ನೇ ಆರ್ಥಿಕ ವರ್ಷದಲ್ಲಿ ಕರ್ನಾಟಕದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ರೂ. ₹448.29 ಕೋಟಿ ಅನುದಾನ ನೀಡಿತ್ತು. ಇದೀಗ ವಿಪತ್ತು ಪರಿಹಾರ ನಿಧಿಯಡಿ ರೂ. 72 ಕೋಟಿ ಅನುದಾನ ಬಿಡುಗಡೆ ಮಾಡಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!