spot_img
Wednesday, April 1, 2026
spot_img

ಕ್ರೀಡಾ ಪ್ರಾಧಿಕಾರದಿಂದ ಯಂಗ್ ಪ್ರೊಫೆಶನಲ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಇಲ್ಲಿದೆ ಮಾಹಿತಿ

ಜನಪ್ರತಿನಿಧಿ (ಮಾಹಿತಿ ) : ಭಾರತೀಯ ಕ್ರೀಡಾ ಪ್ರಾಧಿಕಾರವು ಯಂಗ್ ಪ್ರೊಫೆಶನಲ್ಸ್ 50 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನಾಲ್ಕು ವರ್ಷಗಳ ಅವಧಿಗೆ ಭರ್ತಿ ಮಾಡಿಕೊಳ್ಳಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಕಲೆ, ವಾಣಿಜ್ಯ, ವಿಜ್ಞಾನ ಸೇರಿದಂತೆ ಯಾವುದೇ ವಿಷಯದಲ್ಲಿ ಪದವಿ ಅಥವಾ ಬಿಇ/ಬಿಟೆಕ್ ಅಥವಾ ಮ್ಯಾನೇಜ್‌ಮೆಂಟ್ ವಿಷಯದಲ್ಲಿ ಎರಡು ವರ್ಷಗಳ ಪಿಜಿ ಡಿಪ್ಲೊಮಾ ಅಥವಾ ಎಂಬಿಬಿಎಸ್/ಎಲ್ ಎಲ್‌ಬಿ ಅಥವಾ ಸಿಎ/ಐಸಿಡಬ್ಲ್ಯುಎ ಪೂರ್ಣಗೊಳಿಸಿರುವವರು ಈ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಡೈರೆಕ್ಟ‌ರ್ ಹುದ್ದೆಗಳ ನೇಮಕಾತಿ : ಭಾರತೀಯ ಕ್ರೀಡಾ ಪ್ರಾಧಿಕಾರವು ಪ್ರತ್ಯೇಕ ಅಧಿಸೂಚನೆ ಹೊರಡಿಸಿದ್ದು, ಡೈರೆಕ್ಟರ್ 13 ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಡಿ.2ಕ್ಕೆ ಅನ್ವಯವಾಗುವಂತೆ ಗರಿಷ್ಠ 56 ವರ್ಷದೊಳಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Office of the Deputy Director (Recruitment), Room No.209, Sports Authority of India, Head Office, Gate No. 10. (East Gate), Jawaharlal Nehru Stadium, Lodhi Road, New Delhi-110003 ಈ ವಿಳಾಸಕ್ಕೆ ಡಿಸೆಂಬರ್ 2ರೊಳಗೆ ತಲುಪುವಂತೆ ಅರ್ಜಿಯನ್ನು ಕಳುಹಿಸಬೇಕು.

ಆಯ್ಕೆ ಪ್ರಕ್ರಿಯೆ : ಸಂದರ್ಶನ ನಡೆಸುವ ಮೂಲಕ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಕೆ : ಕ್ರೀಡಾ ಪ್ರಾಧಿಕಾರದ ವೆಬ್‌ಸೈಟ್ sportsauthorityofindia.nic.in ಗೆ ಭೇಟಿ ನೀಡುವ ಮೂಲಕ ಅರ್ಜಿಸಲ್ಲಿಸಬೇಕು.

ನೇರ ಲಿಂಕ್‌ ಇಲ್ಲಿದೆ : https://sportsauthorityofindia.nic.in/sai/public/assets/jobs/1730801160_Advertisement%20for%20Young%20Professional%20in%20SAI%20(1).pdf

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!