spot_img
Wednesday, December 4, 2024
spot_img

ಇವಿಎಂಗೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ | ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವವರೇ ಕಾಂಗ್ರೆಸ್ಸಿಗರು ! : ಬಿಜೆಪಿ ವ್ಯಂಗ್ಯ

ಜನಪ್ರತಿನಿಧಿ (ಬೆಂಗಳೂರು) : ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವವರೇ ಕಾಂಗ್ರೆಸ್ಸಿಗರು! ಸೋತಾಗ ನೋಡೋಕೆ ಬಂದಿದ್ದೆ ಗೆದ್ದಾಗ ಆಡೋಕೆ ಬಂದಿದ್ದೇ ಎನ್ನುವ ಖಯಾಲಿ ರಾಷ್ಟ್ರೀಯ ಕಾಂಗ್ರೆಸ್‌  ನಾಯಕರಿಗಿದೆ ಎಂದು ರಾಜ್ಯ ಬಿಜೆಪಿ ಟೀಕಿಸಿದೆ.

ಇವಿಎಂ ಬದಲು ಬ್ಯಾಲೆಟ್‌ ಪೇಪರ್‌ ಮತದಾನ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್‌ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಭಾಗೀಯ ಪೀಠ ವಜಾಗೊಳಿಸಿ ಅರ್ಜಿದಾರರನನ್ನು ತರಾಟೆಗೆ ತೆಗೆದುಕೊಂಡಿದೆ. ಸೋತಾಗ ತಿರುಚಲಾಗಿದೆ ಎನ್ನುತ್ತೀರಿ, ಗೆದ್ದಾಗ ಹೇಳಿಲ್ಲ ಎಂದು ನ್ಯಾಯಾಧೀಶರು ಛಾಟಿ ಬೀಸಿದ್ದಾರೆ ಎಂದು ಬಿಜೆಪಿ ಹೇಳಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರು ಮತ್ತೆ ಹಳೇ ಕಾಲದ ಬ್ಯಾಲೆಟ್‌ ಪೇಪರ್‌ ವ್ಯವಸ್ಥೆ ಜಾರಿಯಾಗಬೇಕು ಎನ್ನುವ ಮೂಲಕ, ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಅವರ ಗೆಲುವು, ಕರ್ನಾಟಕದಲ್ಲಿ ಕಾಂಗ್ರೆಸ್‌ ನ ಗೆಲುವು, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ನ ಗೆಲುವು, ತೆಲಂಗಾಣದಲ್ಲಿ ಕಾಂಗ್ರೆಸ್ ನ ಗೆಲುವಿಗೆ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಇವಿಎಂಗೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ | ಬ್ಯಾಲೇಟ್‌ ಪೇಪರ್‌ ಜಾರಿಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್‌ ಅಘಾಡಿ ಹೀನಾಯವಾಗಿ ಸೋತ ಬೆನ್ನಲ್ಲೇ ಇವಿಎಂಗಳ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಇವಿಎಂಗಳನ್ನು ನಿಷೇಧಿಸಿ ಪೇಪರ್‌ ಬ್ಯಾಲೆಟ್‌ ಅನ್ನು ಜಾರಿಗೊಳಿಸುವಂತೆ ಆಗ್ರಹಿಸಲಾಗುತ್ತಿದೆ. ಇದರ ನಡುವೆ ಸುಪ್ರೀಂ ಕೋರ್ಟ್‌ ಮಹತ್ವದ ನಿಲುವನ್ನು ತೆಗೆದುಕೊಂಡಿದ್ದು, ಇವಿಎಂ ಬಳಕೆಗೆ ಗ್ರೀನ್‌ ಸಿಗ್ನಲ್‌ ನೀಡಿದೆ. ಈ ಮೂಲಕ ಇವಿಎಂ ಸರಿಯಿಲ್ಲ ಎನ್ನುತ್ತಿದ್ದ ವಿಪಕ್ಷಗಳಿಗೆ ಸರ್ವೋಚ್ಛ ನ್ಯಾಯಾಲಯ ಚಾಟಿ ಬೀಸಿದೆ. ಸೋತಾಗ ಮಾತ್ರ ಇವಿಎಂ ಸರಿಯಿಲ್ಲ ಎನ್ನುತ್ತೀರಿ ಎಂದು ಸುಪ್ರೀಂ ಕೋರ್ಟ್‌ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ. ಇದರ ಬೆನ್ನಲ್ಲೇ ಇವಿಎಂ ವಿರುದ್ಧ ಭಾರತ್‌ ಜೋಡೋ ರೀತಿ ರ‍್ಯಾಲಿ ಮಾಡುತ್ತೇವೆ ಎಂದು ಕಾಂಗ್ರೆಸ್‌ ಹೇಳಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಸಾಮಾಜಿಕ ಕಾರ್ಯಕರ್ತ ವಿಕೆ ಪೌಲ್ ಎಂಬುವರು ಇವಿಎಂ ಬಳಕೆ ನಿರ್ಬಂಧಿಸಬೇಕು ಹಾಗೂ ಚುನಾವಣೆ ವೇಳೆ ಹಣ, ಮದ್ಯ ಹಂಚುವ ಅಭ್ಯರ್ಥಿಯನ್ನು ಸ್ಪರ್ಧೆಯಿಂದ 5 ವರ್ಷ ನಿಷೇಧಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು. ವಾದದ ವೇಳೆ ಇವಿಎಂ ಸರಿಯಿಲ್ಲ. ಅವನ್ನು ತಿರುಚಬಹುದು ಎಂದು ವಿಶ್ವದ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಮಾಜಿ ಸಿಎಂ ಜಗನ್ ಮೋಹನ್‌ ರೆಡ್ಡಿ ಹೇಳಿದ್ದಾರೆ ಎಂದು ವಾದಿಸಿದರು. ಇದಕ್ಕೆ ಸುಪ್ರೀಂ ಕೋರ್ಟ್‌ ಖಾರವಾಗಿ ಪ್ರತಿಕ್ರಿಯಿಸಿದ್ದು, ಈ ಹಿಂದೆ ನಾಯ್ಡು ಸೋತಾಗ ಇವಿಎಂ ಸರಿಯಿಲ್ಲ ಎಂದಿದ್ದರು. ಆದರೆ, ಇಂದು ನಾಯ್ಡು ಗೆದ್ದಿದ್ದಾರೆ ಹಾಗೂ ಜಗನ್ ಸೋತಿದ್ದಾರೆ. ಇಂದು ಜಗನ್ ಈ ಆರೋಪ ಮಾಡುತ್ತಿದ್ದಾರೆ ಎಂದರು.

ಇನ್ನು, ಮುಂದುವರೆದು, ಇಲ್ಲಿ ಏನಾಗುತ್ತಿದೆ ಎಂದರೆ, ನೀವು ಚುನಾವಣೆಯಲ್ಲಿ ಗೆದ್ದಾಗ, ಇವಿಎಂ ಟ್ಯಾಂಪರಿಂಗ್ ಆಗಿರುವುದಿಲ್ಲ. ನೀವು ಚುನಾವಣೆಯಲ್ಲಿ ಸೋತಾಗ ಮಾತ್ರ ಇವಿಎಂ ಟ್ಯಾಂಪರಿಂಗ್ ಆಗಿರುತ್ತವೆ. ಸೋತಾಗ ಮಾತ್ರ ಇವಿಎಂಗಳ ವಿರುದ್ದ ಆರೋಪ ಕೇಳಿಬರುತ್ತವೆ ಎಂದು ಸುಪ್ರೀಂ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಬಹಳಷ್ಟು ದೇಶಗಳಲ್ಲಿ ಬ್ಯಾಲಟ್‌ ಪೇಪರ್‌ ಇದೆ ಎಂಬ ವಾದಕ್ಕೆ, ಎಲ್ಲ ದೇಶಗಳಲ್ಲಿ ಇದ್ದಿದ್ದೇ ಭಾರತದಲ್ಲೂ ಇರಬೇಕು ಎಂದು ಏಕೆ ಬಯಸುತ್ತೀರಿ? ಎಂದ ಪೀಠ ಬ್ಯಾಲೆಟ್‌ ಪೇಪರ್‌ ಮರುಜಾರಿ ಮಾಡಿದರೆ ಭ್ರಷ್ಟಾಚಾರ ನಿಲ್ಲುತ್ತದೆಯೇ ಎಂದು ಕೂಡ ಅರ್ಜಿದಾರರನ್ನು ಪ್ರಶ್ನಿಸಿತು. ಇದಕ್ಕೆ ಉತ್ತರ ಬರದೇ ಇದ್ದಿದ್ದಕ್ಕೆ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿತ್ತು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!