spot_img
Wednesday, December 4, 2024
spot_img

ವಯನಾಡ್‌ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ

ಜನಪ್ರತಿನಿಧಿ (ನವ ದೆಹಲಿ) : ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವುಗೊಂಡಿದ್ದ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್‌‍ ನಾಯಕಿ ಪ್ರಿಯಾಂಕಾ ಗಾಂಧಿ ಇಂದು (ಗುರುವಾರ) ಲೋಕಸಭೆಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕೈಯಲ್ಲಿ ಸಂವಿಧಾನದ ಕಿರು ಪುಸ್ತಕ ಹಿಡಿದು ಪ್ರಿಯಾಂಕಾ ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದು, ಪ್ರಿಯಾಂಕಾ ಅವರಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಮಾಣ ವಚನ ಬೋಧಿಸಿದರು.

ಇದೇ ಸಂದರ್ಭದಲ್ಲಿ ನಾಂದೇಡ್‌ ಉಪಚುನಾವಣೆಯಲ್ಲಿ ಗೆದ್ದಿರುವ ರವೀಂದ್ರ ಚವಾಣ್‌ (ಕಾಂಗ್ರೆಸ್‌) ಕೂಡ ದೇವರ ಹೆಸರಿನಲ್ಲಿ ಮರಾಠಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇತ್ತೀಚೆಗೆ ಅವರ ತಂದೆ ವಸಂತರಾವ್‌ ಚವಾಣ್‌ ಅವರ ನಿಧನದ ಹಿನ್ನೆಲೆಯಲ್ಲಿ ತೆರವುಗೊಂಡ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು.

ಪ್ರಿಯಾಂಕಾ ಗಾಂಧಿ 2019 ರಲ್ಲಿ ಸಕ್ರಿಯ ರಾಜಕೀಯಕ್ಕೆ ಧುಮುಕಿದರು ಮತ್ತು ನಂತರ ಕಾಂಗ್ರೆಸ್‌‍ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡರು. ಐದು ವರ್ಷಗಳ ನಂತರ, ಪ್ರಿಯಾಂಕಾ ಗಾಂಧಿ ಅವರು ಚುನಾಯಿತ ಜನಪ್ರತಿನಿಧಿಯಾಗಿ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದ್ದಾರೆ.

ಪ್ರಮಾಣವಚನ ಸ್ವೀಕಾರದ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಅವರು ಕೇರಳದ ಬ್ರೋಕೆಡ್ ಸೀರೆಯನ್ನು ಧರಿಸಿದ್ದರು. ತನ್ನ ತಾಯಿ ಸೋನಿಯಾ ಗಾಂಧಿ, ಸಹೋದರ ರಾಹುಲ್ ಗಾಂಧಿ ಮತ್ತು ಪತಿ ರಾಬರ್ಟ್ ವಾದ್ರಾ ಅವರೊಂದಿಗೆ ಸಂಸತ್ ಭವನಕ್ಕೆ ಆಗಮಿಸಿದ್ದರು. ಅಲ್ಲದೆ, ಪ್ರಿಯಾಂಕಾ ಅವರ ಮಕ್ಕಳಿಬ್ಬರೂ ಸಂಸತ್​ಗೆ ಆಗಮಿಸಿದ್ದರು.

ಇತ್ತೀಚೆಗೆ ಪ್ರಕಟಗೊಂಡ ವಯನಾಡ್ ಲೋಕಸಭಾ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಹೆಚ್ಚು ಮತಗಳ ದಾಖಲೆ ಅಂತರದಿಂದ ಗೆಲುವು ಸಾಧಿಸಿರುವ ಪ್ರಿಯಾಂಕಾ ಗಾಂಧಿ, ಆ ಮೂಲಕ ಪ್ರಪ್ರಥಮ ಬಾರಿಗೆ ಚುನಾಯಿತ ಪ್ರತಿನಿಧಿಯಾಗಿದ್ದಾರೆ.

ಇಲ್ಲಿಯವರೆಗೆ ಪಕ್ಷ ಸಂಘಟನೆಯಲ್ಲಿ ತಮ್ಮ ಸಹೋದರ ರಾಹುಲ್ ಗಾಂಧಿಗೆ ನೆರವು ನೀಡುತ್ತಾ ಬಂದಿದ್ದ ಪ್ರಿಯಾಂಕಾ ಗಾಂಧಿ, ಇದೀಗ ಲೋಕಸಭೆಯಲ್ಲೂ ತಮ್ಮ ಸಹೋದರನಿಗೆ ಸಾಥ್ ನೀಡಲಿದ್ದಾರೆ. ಮಾತ್ರವಲ್ಲದೇ, ಸಂಸತ್ತಿನಲ್ಲಿ ಕಾಂಗ್ರೆಸ್‌ ಹಾಗೂ ವಿಪಕ್ಷಗಳ ಧ್ವನಿಗೆ ಶಕ್ತಿ ಹೆಚ್ಚಾದಂತಾಗಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!