spot_img
Wednesday, December 4, 2024
spot_img

ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ವಿಧಾನ ಮಂಡಲದ ಚಳಿಗಾಲ ಅಧಿವೇಶನ ಒಂದು ದಿನ ಮೊಟಕು : ಖಾದರ್‌ ಮಾಹಿತಿ

ಜನಪ್ರತಿನಿಧಿ (ಮಂಗಳೂರು) : ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರಣಕ್ಕಾಗಿ ಒಂದು ದಿನ ಮೊಟಕುಗೊಳಿಸಲಾಗಿದೆ. ದಿ.೦೯ ರಿಂದ ೧೯ರವರೆಗೆ ಮಾತ್ರ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆಯ ಅಧ್ಯಕ್ಷ ಯು.ಟಿ ಖಾದರ್‌ ತಿಳಿಸಿದ್ದಾರೆ.

ಮೊದಲು ೯ರಿಂದ ೨೦ವರೆಗೆ ಅಧಿವೇಶನ ನಡೆಸಲು ನಿರ್ಧರಿಸಲಾಗಿತ್ತು. ಸಾಹಿತ್ಯ ಸಮ್ಮೇಳನ ಡಿ.೨೦ರಿಂದ ಆರಂಭವಾಗಲಿದೆ. ಮುಖ್ಯಮಂತ್ರಿ ಹಾಗೂ ಸಚಿವರು ಅದರಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾಹಿತಿ ನೀಡಿದರು.

ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ರಾಜ್ಯ ಹಾಗೂ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಚರ್ಚೆಯಾಗಬೇಕು.ಈ ವಿಷಯದಲ್ಲಿ ಈ ಅಧಿವೇಶನ ಸಫಲವಾದರೇ ನಾವು ಆ ಭಾಗದ ಜನರಿಗೆ ನೀಡುವ ಗೌರವವಾಗುತ್ತದೆ. ಆ ಕಾರಣಕ್ಕಾಗಿ ರಾಜಕೀಯ ತಿಕ್ಕಾಟ ಅಧಿವೇಶನದಲ್ಲಿ ಭೇಡ ಎಂದು ಅವರು ಸುದ್ದಿಗೋಷ್ಠಿ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಡಿಸೆಂಬರ್‌ ೦೯ರವರೆಗೆ ಮಾತ್ರ ನಿಮ್ಮ ರಾಜಕೀಯ ತಿಕ್ಕಾಟಕ್ಕೆ ಅವಕಾಶವಿದೆ. ಅಧಿವೇಶನ ಮುಗಿದ ಬಳಿಕವೂ ಸಮಯ ಇದೆ. ವಿಧಾನ ಮಂಡಲ ಸುಗಮ ಕಲಾಪಗಳಿಗೆ ಅವಕಾಶ ನೀಡಬೇಕು ಎಂದು ಅವರು ಹೇಳಿದರು.

ಉಪ ಚುನಾವಣೆಯಲ್ಲಿ ಜಯಗಳಿಸಿರುವ ಮೂವರು ಶಾಸಕರಿಗೆ ಅಧಿವೇಶನದಲ್ಲಿ ಪ್ರಮಾಣವಚನ ಬೋಧಿಸಲಾಗುವುದು ಎಂದು ಅವರು ಹೇಳಿದರು.

ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುತ್ತೀರಾ ಎಂದು ಪತ್ರಕರ್ತರು ಓರ್ವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖಾದರ್‌, ನಿಯಮದಂತೆ ಸದನ ನಡೆಸುತ್ತೇನೆ. ಸದನ ಸಲಹಾ ಸಮಿತಿಯಲ್ಲಿ ಎಲ್ಲವೂ ನಿರ್ಧಾರವಾಗುತ್ತದೆ ಎಂದು ಅವರು ಹೇಳಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!