spot_img
Wednesday, April 1, 2026
spot_img

ಕಾನೂನು, ಸಂವಿಧಾನ, ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲದ ಕಾಂಗ್ರೆಸ್‌… : ಬಿಜೆಪಿ

ಜನಪ್ರತಿನಿಧಿ (ಬೆಂಗಳೂರು) : ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಅನ್ನು ಪ್ರಶ್ನೆ ಮಾಡಿದರೆ, ಉತ್ತರ ಕೊಡಲು ಕೈ ಲಾಗದ ಪುಕ್ಕಲು ಸರ್ಕಾರ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಕೇಸ್‌ ಹಾಕುತ್ತದೆ ಎಂದು ರಾಜ್ಯ ಬಿಜೆಪಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಹರಿಹಾಯ್ದಿದೆ.

ಆದರೆ, ಕಾನೂನು, ಸಂವಿಧಾನ, ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲದ ಕಾಂಗ್ರೆಸ್‌ ನ್ಯಾಯಾಲಯದ ಮುಂದೆ ತಲೆ ತಗ್ಗಿಸಿ ನಿಲ್ಲುತ್ತದೆ. ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರ ವಿರುದ್ಧ ದಾಖಲಿಸಿದ್ದ ಕೇಸ್‌ ಅನ್ನು ಹೈಕೋರ್ಟ್‌ ರದ್ದು ಮಾಡಿದೆ. ಇನ್ನಾದರೂ ಭಂಡ ಕಾಂಗ್ರೆಸ್‌ ಸರ್ಕಾರ ಕೇಸ್‌ ಹಾಕುವುದನ್ನು ಬಿಟ್ಟು ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುವತ್ತಾ ಗಮನ ಹರಿಸಲಿ ಎಂದು ಬಿಜೆಪಿ ಒತ್ತಾಯಿಸಿದೆ.

ರಾಹುಲ್‌ ಗಾಂಧಿ ಅವರ ಧ್ವೇಷದ ಅಂಗಡಿ ಕರ್ನಾಟಕವನ್ನು ಮತಾಂಧರ ಗಲಭೆಯ ತೋಟವನ್ನಾಗಿ ಮಾಡಿದೆ ಎಂದು ಎಕ್ಸ್‌ ಖಾತೆಯಲ್ಲಿ ವಿಜಯೇಂದ್ರ ಯಡಿಯೂರಪ್ಪ ನೀಡಿರುವ ಹೇಳಿಕೆಯನ್ನು ಆಧರಿಸಿ ದಾಖಲಾಗಿದ್ದ ಎಫ್‌ಐಆರ್‌ ಹಾಗೂ ಆ ಸಂಬಂಧಿಸಿದಂತೆ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್‌ ನಿನ್ನೆ (ಬುಧವಾರ) ರದ್ದುಗೊಳಿಸಿ ಆದೇಶಿಸಿರುವುದಕ್ಕೆ ಬಿಜೆಪಿ ಕಾಂಗ್ರೆಸ್‌ ವಿರುದ್ಧ ತನ್ನನ್ನು ತಾನು ಈ ರೀತಿ ಸಮರ್ಥಿಸಿಕೊಂಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!