spot_img
Tuesday, March 31, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಕುಂದಾಪುರ, ನ.29: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ನ.29ರಂದು ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪುಂದ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ್ ಶೆಟ್ಟಿ ಕ್ರೀಡಾ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಕ್ರೀಡೆ ವಿದ್ಯಾರ್ಥಿಗಳ ಆರೋಗ್ಯ ವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವುದು ಪದಕ ಗಳಿಸುವುದಕ್ಕೆ ಸೀಮಿತವಾಗಬಾರದು ಎಂದರು.

ಅಧ್ಯಕ್ಷ ಸ್ಥಾನವನ್ನು ವಹಿಸಿದ ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ ನ ಕಾರ್ಯದರ್ಶಿ ಕೆ..ರಾಧಾಕೃಷ್ಣ ಶೆಣೈಯವರು ವಿದ್ಯಾರ್ಥಿಗಳಿಗೆ ಆರೋಗ್ಯವೇ ಭಾಗ್ಯವಾಗಿರುವುದರಿಂದ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿಸುವುದರ ಮೂಲಕ ಸದೃಢ ಆರೋಗ್ಯವನ್ನು ಹೊಂದಿ ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು.

ಆಕರ್ಷಕ ಪಥ ಸಂಚಲನ :
ಕ್ರೀಡಾ ಕಾರ್ಯದರ್ಶಿ ಶಬರೀಶ್ ಪ್ರತಿಜ್ಞಾ ವಿಧಿ ಬೋಧಿಸಿದರು.ವಿದ್ಯಾರ್ಥಿಗಳನ್ನು ಶ್ರದ್ಧಾ, ವಿದ್ಯಾ, ಉನ್ನತಿ ಹಾಗೂ ಪ್ರಜ್ಞಾ ತಂಡಗಳಾಗಿ ವಿಂಗಡಿಸಿ, ಆ ತಂಡಗಳಿಂದ ಪಥ ಸಂಚಲನ ನಡೆಸಲಾಯಿತು. ವಿದ್ಯಾರ್ಥಿನಿಯರಾದ ಚೈತನ್ಯ ಅತಿಥಿಯನ್ನು ಪರಿಚಯಿಸಿ, ಅಲ್ವಿಟಾ ಸ್ವಾಗತಿಸಿ, ವಂಶಿಕ ವಂದಿಸಿ, ಶ್ರೀನಿಧಿಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!