spot_img
Tuesday, March 24, 2026
spot_img

ಹಟ್ಟಿ‌ಅಂಗಡಿ ವಸತಿಶಾಲೆಯ ಪ್ರಾಂಶುಪಾಲ ಶರಣ ಕುಮಾರರಿಗೆ ರಾಷ್ಟ್ರೀಯ ಮಟ್ಟದ ಬೆಸ್ಟ್ ಪ್ರಿನ್ಸಿಪಾಲ್ ಅವಾರ್ಡ್

ಕುಂದಾಪುರ: ಹಟ್ಟಿ‌ಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಸ್ಟಾರ್ ಎಜ್ಯುಕೇಷನ್ ಅವಾರ್ಡ್‌ನವರು ಕೊಡಮಾಡುವ 2024ನೇ ಸಾಲಿನ ರಾಷ್ಟ್ರೀಯ ಮಟ್ಟದ ಬೆಸ್ಟ್ ಪ್ರಿನ್ಸಿಪಾಲ್ ಪ್ರಶಸ್ತಿ ಲಭಿಸಿದೆ.

2024ರ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಣಕ್ಷೇತ್ರದಲ್ಲಿ ಉತ್ಕೃಷ್ಟ ಸಾಧನೆ, ಅಸಾಧಾರಣ ನಾಯಕತ್ವ, ಕರ್ತವ್ಯದಲ್ಲಿ ಅಚಲ ನಿಷ್ಠೆ, ಸೃಜನಾತ್ಮಕತೆ, ಪ್ರಕೃತಿ ಸಂರಕ್ಷಣೆಗೆ ವಿನೂತನ ಶೈಕ್ಷಣಿಕ ಕಾರ್ಯಕ್ರಮಗಳು ಇತ್ಯಾದಿ ಮಾನದಂಡಗಳ ಮೇಲೆ ಕೊಡಮಾಡುವ ಪ್ರಶಸ್ತಿ ಇದಾಗಿದ್ದು, ನ.26ರಂದು ಮುಂಬೈನ ಎಂ ಎಂ ಆರ್ ಡಿ ಎ ಮೈದಾನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಮುಂಬೈನ ಎಫ್ ಎಫ್ ಟಿ ಪ್ರೈವೆಟ್ ಲಿಮಿಟೆಡ್‌ನ ನಿರ್ದೇಶಕರಾದ ಅಲಾಖ್ ಸಿಂಗ್ ಪ್ರಶಸ್ತಿಯನ್ನು ವಿತರಿಸಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶರಣಕುಮಾರ ಈ ಗೌರವವು ನನ್ನ ವೈಯಕ್ತಿಕ ಸಾಧನೆಯಲ್ಲ, ಈ ಗೌರವವು ನಮ್ಮ ತಂಡದ ಶ್ರೇಷ್ಠ ಪ್ರಯತ್ನಗಳ, ಸಾಧನೆಯ, ಸಮರ್ಪಣೆಯ ಪ್ರತಿಫಲವಾಗಿದೆ. ಈ ಪ್ರಶಸ್ತಿಯು ದೇಶಾದಾದ್ಯಂತ ಶಿಕ್ಷಣ ಕ್ಷೇತ್ರದಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಇದು ಭವಿಷ್ಯದ ಶ್ರೇಷ್ಠ ಸಾಧನೆಗಳಿಗೆ ಪ್ರೇರಣೆ ನೀಡುತ್ತಿದೆ. ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ವೀಣಾ ರಶ್ಮೀ ಎಂ ಮಾತನಾಡಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಆಗಿರುವ ಶರಣ ಕುಮಾರ ಶಾಲೆಯ ಸರ್ವತೋಮುಖವಾದ ಅಭಿವೃದ್ಧಿಯನ್ನು ಸಾಧಿಸಲು ಹಗಲಿರುಳು ಶ್ರಮಿಸುತ್ತಿದ್ದು, ಅವರ ನಾಯಕತ್ವದಲ್ಲಿ ಶಾಲೆ ಮಾದರಿ ಶಾಲೆಯಾಗಿ ಹೊರಹೊಮ್ಮುತ್ತಿದೆ. ಬೆಸ್ಟ್ ಪ್ರಿನ್ಸಿಪಾಲ್ ಪ್ರಶಸ್ತಿಯು ಅವರ ಅರ್ಹತೆಗೆ ಸಂದ ಗೌರವಾಗಿದೆ ಎಂದರು.

ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ, ಶಿಕ್ಷಕ ಶಿಕ್ಷಕೇತರ ವೃಂದ, ಹಾಗೂ ವಿದ್ಯಾರ್ಥಿಗಳು ಶಾಲೆಯ ಪ್ರಾಂಶುಪಾಲರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!