spot_img
Thursday, December 26, 2024
spot_img

ಗಂಗೊಳ್ಳಿ ಗ್ರಾಮ ಪಂಚಾಯತ್ ಚುನಾವಣೆ : ಮದ್ಯ ಮಾರಾಟ ನಿಷೇಧ

ಕುಂದಾಪುರ: ಗ್ರಾಮ ಪಂಚಾಯತಿಗಳ ಸಾರ್ವತ್ರಿಕ / ಉಪ ಚುನಾವಣೆ ಡಿಸೆಂಬರ್ -2024 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಕುಂದಾಪುರ ತಾಲೂಕಿನ 45-ಗಂಗೊಳ್ಳಿ ಗ್ರಾಮ ಪಂಚಾಯತಿಯಲ್ಲಿ ಚುನಾವಣೆ ನಡೆಸುವ ಸಂಬಂಧ ಡಿಸೆಂಬರ್ 8 ರಂದು ಮತದಾನ ದಿನವನ್ನು ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗವು ಆದೇಶಿಸಿದ್ದಾರೆ.

ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ (10)ಬಿ ರ ಪ್ರಕಾರ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 308 ಎಸಿ ರಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಡಿಸೆಂಬರ್ 6 ರಂದು ಸಂಜೆ 5 ಗಂಟೆಯಿಂದ ಡಿಸೆಂಬರ್ 8 ರ ಸಂಜೆ 5 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್‍ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ, ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!