spot_img
Thursday, December 5, 2024
spot_img

ತೆಂಕನಿಡಿಯೂರು ಕಾಲೇಜು : ಮಂಗಳೂರು ವಿ.ವಿ. ಅಂತರ್ ಕಾಲೇಜು ಅತ್ಲೇಟಿಕ್ಸ್ ಉದ್ಘಾಟನೆ

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಲಯನ್ಸ್ ಕ್ಲಬ್ ಅಮೃತ್ ಮತ್ತು ಲಿಯೋ ಡಿಸ್ಟ್ರಿಕ್ಟ್ ೩೧೭ಸಿ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಮಂಗಳೂರು ವಿ.ವಿ. ಮಟ್ಟದ ಪುರುಷರ ಮತ್ತು ಮಹಿಳೆಯರ ಅಂತರ್ ಕಾಲೇಜು ಅತ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟಿಸಿದ ಉಡುಪಿ ಶಾಸಕರಾದ ಯಶಪಾಲ್ ಎ. ಸುವರ್ಣ ಕ್ರೀಡೆ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ತೆಂಕನಿಡಿಯೂರು ಕಾಲೇಜನ್ನು ಶ್ಲಾಘಿಸುತ್ತಾ ಕ್ರೀಡೆ ನಮ್ಮ ದೈಹಿಕ ಕ್ಷಮತೆಯನ್ನೇ ಅಲ್ಲ ಮನೋಬಲವನ್ನು ಹೆಚ್ಚಿಸುತ್ತದೆ. ಯುವಜನತೆ ಕ್ರೀಡೆಯಲ್ಲಿ ತೊಡಗಿಸಿಕೊಂಡು ಸಕಾರಾತ್ಮಕವಾಗಿ ಬೆಳೆದಾಗ ಸಂಸ್ಥೆಗೂ ಸಮಾಜಕ್ಕೂ ಶ್ರೇಯಸ್ಸು ಎಂದರು.

ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಅತ್ಲೆಟಿಕ್ ಫೆಡರೇಶನ್ ಅಧ್ಯಕ್ಷರಾದ ಹರಿಪ್ರಸಾದ್‌ರೈ, ಕ್ರೀಡಾಕೂಟಕ್ಕೆ ಶುಭ ಹಾರೈಸುತ್ತಾ ಕ್ರೀಡಾ ಮನೋಭಾವನೆಯಿಂದ ಸ್ಪರ್ಧಿಸುವಂತೆ ಕ್ರೀಡಾಪಟುಗಳಿಗೆ ಸೂಚಿಸಿದರು. ಮಂಗಳೂರು ವಿ.ವಿ. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಜೆರಾಲ್ಡ್ ಸಂತೋಷ್ ಡಿಸೋಜ, ಕೈಗಾರಿಕೋದ್ಯಮಿ ಆನಂದ ಸುವರ್ಣ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ. ಗಾವಂಕರ, ಡಾ. ಕೆ. ರಾಮಚಂದ್ರ, ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಡಾ. ಶ್ರೀಧರ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಕ್ರೀಡಾಕೂಟ ಆಯೋಜಕ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಯುವ ಸಬಲೀಕರಣ ಕ್ರೀಡಾ ಇಲಾಖೆಯ ಡಾ. ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ಪದವಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರಶಾಂತ ಎನ್. ವಂದಿಸಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!