spot_img
Wednesday, April 1, 2026
spot_img

ಅಂತರ ಕಾಲೇಜು ಪುರುಷರ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಕೋಟ ಪಡುಕೆರೆ ಕಾಲೇಜಿಗೆ ಮೂರನೇ ಬಾರಿ ಚಿನ್ನ

ಕೋಟ: ಭಂಡಾರ್ಕಾಸ್ ಆರ್ಟ್ಸ್ ಎಂಡ್ ಸೈನ್ಸ್ ಕಾಲೇಜು, ಕುಂದಾಪುರ ಇಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಪುರುಷರ ದೇಹದಾರ್ಡ್ಯ ಸ್ಪರ್ದೆಯಲ್ಲಿ ಕೋಟ ಪಡುಕೆರೆಯ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಲ್ಲಿನ ತೃತೀಯ ಬಿ ಎ ವಿದ್ಯಾರ್ಥಿ ನಾಗೇಂದ್ರ ಇವರು 75 ಕೆ. ಜಿ. ವಿಭಾಗದಲ್ಲಿ ಸ್ಪರ್ದಿಸಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ಪಡೆದಿದ್ದಾರೆ. ಹಾಗು ಕ್ಯಾಲಿಕಟ್ ವಿಶ್ವವಿದ್ಯಾನಿಲಯ ಕೇರಳ ಇಲ್ಲಿ ನಡೆಯಲಿರುವ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಮಟ್ಟದ ದೇಹದಾರ್ಡ್ಯ ಸ್ಪರ್ದೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ. ಇವರು ದೇಹದಾರ್ಡ್ಯ ಸ್ಪರ್ದೆಯಲ್ಲಿ ಸತತ ಮೂರನೇ ಬಾರಿಗೆ ಚಿನ್ನದ ಪದಕ ಪಡೆಯುತ್ತಿದ್ದು, 2023-24ನೇ ಸಾಲಿನಲ್ಲಿ ಪವರ್ ಲಿಪ್ಟಿಂಗ್‌ನಲ್ಲಿ ಬೆಳ್ಳಿಯ ಪದಕವನ್ನು ಗಳಿಸಿಕೊಂಡಿದ್ದಾರೆ.

ಕಾಲೇಜಿನ ಇನ್ನೋರ್ವ ವಿದ್ಯಾರ್ಥಿಸಾಗರ್ ದ್ವಿತೀಯ ಬಿ ಎ ಇವರು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರಕಾಲೇಜು ಪುರುಷರ ದೇಹದಾರ್ಡ್ಯ ಸ್ಪರ್ದೆಯ 75 ಕೆ ಜಿ ವಿಭಾಗದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕವನ್ನು ಪಡೆದಿದ್ದಾರೆ. ಈ ವಿದ್ಯಾರ್ಥಿಗಳಿಗೆ ಡಾ.ಮನೋಜ್ ಕುಮಾರ ಎಂ., ದೈಹಿಕ ಶಿಕ್ಷಣ ನಿರ್ದೇಶಕರು ಇವರು ಮಾರ್ಗದರ್ಶನ ನೀಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್. ನಾಯಕ ಮತ್ತು ಬೋಧಕ-ಬೋಧಕೇತರ ಸಿಬ್ಬಂದಿಗಳು ಮತ್ತು ಸಮಸ್ತ ವಿದ್ಯಾರ್ಥಿ ವೃಂದ ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!