spot_img
Tuesday, March 17, 2026
spot_img

ಕಂಡ್ಲೂರು: ಪ್ರಧಾನ ಮಂತ್ರಿ ಭಾರತೀಯ ಜನೌಷಧ ಕೇಂದ್ರ ಉದ್ಘಾಟನೆ 

ಕುಂದಾಪುರ: ಬಡ ಹಾಗೂ ಮಧ್ಯಮ ವರ್ಗದವರಿಗೆ ಕಡಿಮೆ ಬೆಲೆಯಲ್ಲಿ ಔಷಧ ಲಭ್ಯವಾಗಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಜನೌಷಧ ಕೇಂದ್ರಗಳನ್ನು ಪ್ರಾರಂಭಿಸಿದೆ. ಇದರ ಲಾಭವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು’ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟೆಹೊಳೆ ಹೇಳಿದರು.

ಅವರು ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಕಂಡ್ಲೂರು ನಿರ್ಮಾಣವಾಗಿರುವ ಉಡುಪಿ ಜಿಲ್ಲಾ ತೋಟಗಾರಿಕಾ ಬೆಳೆಗಾರರ ಸಹಕಾರ ಸಂಘ ಇವರ ಪ್ರಧಾನಮಂತ್ರಿ ಭಾರತೀಯ ಜನೌಷಧ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ,
ಬಡವರು ದುಬಾರಿ ಬೆಲೆಯ ಔಷದ ಖರೀದಿಸಲು ಆಗುವುದಿಲ್ಲ ಎಂಬ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಈ ಜನೌಷದ ಕೇಂದ್ರವನ್ನ ಪ್ರಾರಂಭಿಸಿದ್ದು ಜನೌಷಧ ಕೇಂದ್ರದಲ್ಲಿ ಹಾಗೂ ಇತರ ಔಷಧ ಅಂಗಡಿಗಳಲ್ಲಿ ದೊರೆಯುವ ಔಷಧಿಗಳು ಒಂದೇ ಆಗಿರುತ್ತವೆ. ಬೇರೆ ಬೇರೆ ಹೆಸರು ಹೊಂದಿರುತ್ತವೆ. ಆದ್ದರಿಂದ ಔಷಧ ಅಗತ್ಯ ಇರುವವರು ಈ ಕೇಂದ್ರದ ಲಾಭವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿ.ಪಂ. ಸಿ.ಇ.ಒ ಪ್ರತಿಕ್ ಬಾಯಲ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಐ.ಪಿ.ಗಡದ್, ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಬ್ರಾಯ ಕಾಮತ್, ಕರ್ನಾಟಕ ಬ್ಯಾಂಕ್ ಉಡುಪಿ ಇದರ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ವಾದಿರಾಜ್ ಕೆ, ಗ್ರಾಮ ಪಂಚಾಯತ್ ಅಧ್ಯಕ್ಷೆ ನೌಶಿನ್ ಹಜ್ ರತ್, ಉಪಾಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಸದಸ್ಯರಾದ ಲಿಯಾಕತ್, ವಿಜಯ್ ಪುತ್ರನ್, ಕಾವ್ರಾಡಿ ವ್ಯವಸಾಯನಿಕ ಸಹಕಾರಿ ಸಂಘ ಕಂಡ್ಲೂರು ಇದರ ಅಧ್ಯಕ್ಷರಾದ ಸದಾನಂದ ಬಳ್ಕೂರು, ಉಡುಪಿ ಜಿಲ್ಲಾ ತೋಟಗಾರಿಕಾ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷರಾದ ಎ.ಅಶೋಕ್ ಕುಮಾರ್ ಕೊಡ್ಗಿ, ಉಪಾಧ್ಯಕ್ಷರಾದ ಎಚ್ ವಿಟ್ಟಲ್ ಶೆಟ್ಟಿ, ನಿರ್ದೇಶಕ ಮಂಡಳಿಯ ಸದಸ್ಯರಾದ ಕಟಪಾಡಿ ಶಂಕರ್ ಪೂಜಾರಿ, ಟಿ ಚಂದ್ರಶೇಖರ್ ಶೆಟ್ಟಿ ತೊಂಬಟ್ಟು, ಡಿ. ಬಾಲಕೃಷ್ಣ ಶೆಟ್ಟಿ ಗುಲ್ವಾಡಿ, ಎಸ್ ಅಮರನಾಥ ಚಾತ್ರ ಹಳ್ಳಿಹೊಳೆ, ಎಸ್ ಶಶಿಧರ ಅಲ್ಸೇ ಬೆಳ್ವೆ, ಕೆ ಪ್ರದೀಪ್ ಹೆಬ್ಬಾರ್ ನಂಚಾರು, ಕೆ ಗಣೇಶ್ ಕಾಮತ್ ಕುಂದಾಪುರ, ಬಿ ಭಾಸ್ಕರ್ ಕಾಮತ್, ನಾಗರಾಜ್ ಉಳಿತ್ತಾಯ ಚಗ್ರಿಬೆಟ್ಟು, ವರೋನಿಕಾ ಸಲ್ದಾನಾ ಉಡುಪಿ, ವೈದೇಹಿ ಎಸ್ ಉಡುಪಿ, ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಶಾಖಾ ವ್ಯವಸ್ಥಾಪಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!