spot_img
Friday, March 20, 2026
spot_img

ಒಕ್ಕಲಿಗ ಸ್ವಾಮೀಜಿ ವಿರುದ್ಧ ಕಾಂಗ್ರೆಸ್‌ ನೀಚ ರಾಜಕಾರಣ : ವಿಜಯೇಂದ್ರ ಯಡಿಯೂರಪ್ಪ | ಬಿಜೆಪಿ ಖಂಡನೆ

ಜನಪ್ರತಿನಿಧಿ (ಬೆಂಗಳೂರು) : ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಚಂದ್ರಶೇಖರನಾಥ ಸ್ವಾಮೀಜಿಗಳು ತಮ್ಮ ಹೇಳಿಕೆಯ ಕುರಿತಂತೆ ಸೌಹಾರ್ದತೆಯನ್ನು ಪುಷ್ಠೀಕರಿಸಿ ಸೂಕ್ತ ಸ್ಪಷ್ಟನೆ ನೀಡಿ ವಿವಾದಕ್ಕೆ ಇತಿಶ್ರೀ ಹಾಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ.  ಈ ಪ್ರಕರಣವನ್ನು ಇಷ್ಟಕ್ಕೇ ಕೈ ಬಿಡಬಹುದಾಗಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಸ್ವಾಮೀಜಿಗಳ ವಿರುದ್ಧ ದೂರು ದಾಖಲಾಗುವಂತೆ ನೋಡಿಕೊಂಡು ಅವರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆಯುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣ ಮಾಡಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಆಕ್ರೋಶ ಹೊರ ಹಾಕಿದ್ದಾರೆ.

ದೇಶದ್ರೋಹಿಗಳು, ಸಮಾಜ ಘಾತುಕ ಶಕ್ತಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಒಬ್ಬ ಸಜ್ಜನಿಕೆಯ ಸಂತರೆಂದು ಕರೆಸಿಕೊಂಡಿರುವ ಹಿರಿಯ ಶ್ರೀಗಳ ಬಾಯ್ತಪ್ಪಿದ ಮಾತು ಕ್ರಿಮಿನಲ್ ಅಪರಾಧದಂತೆ ಕಂಡಿರುವುದು ವಿಪರ್ಯಾಸವೆನಿಸುತ್ತದೆ. ಪೂಜ್ಯ ಶ್ರೀಗಳು ತಾವು ಆಡಿದ ಮಾತುಗಳ ಕುರಿತು ಸೂಕ್ತ ಸ್ಪಷ್ಟನೆ ನೀಡಿ ಮುಸ್ಲಿಂ ಸಮುದಾಯದೊಂದಿಗಿನ ತಮ್ಮ ಬಾಂಧವ್ಯದ ಕುರಿತು ವಿವರಣೆ ನೀಡಿರುವಾಗ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯ ಹಾಗೂ ಹಗರಣಗಳನ್ನು ಮುಚ್ಚಿಕೊಳ್ಳಲು ಸಣ್ಣ ಸಣ್ಣ ಪ್ರಕರಣಗಳನ್ನೂ ದೊಡ್ಡ ವಿವಾದವನ್ನಾಗಿಸಲು ಹೊರಟು ಜನರ ದಿಕ್ಕು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಲೇ ಇದೆ ಎಂದವರು ಕಿಡಿ ಕಾರಿದ್ದಾರೆ.

ಮಾತ್ರವಲ್ಲದೇ, ಪರಮ ಪೂಜ್ಯ ಚಂದ್ರಶೇಖರನಾಥ ಶ್ರೀಗಳಿಗೆ ನೋಟೀಸ್ ನೀಡಿ ವಿಚಾರಣೆಗೆ ಕರೆದಿರುವ ಈ ಕ್ರಮವನ್ನು ರಾಜ್ಯ ಬಿಜೆಪಿ  ಖಂಡಿಸುತ್ತದೆ ಎಂದವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!