spot_img
Thursday, December 12, 2024
spot_img

ಲೈಂಗಿಕ ಕಿರುಕುಳ ಆರೋಪ : ಕಾಂಗ್ರೆಸ್‌ ಪಕ್ಷದಿಂದ ಕೆಪಿಸಿಸಿ ಕಾರ್ಯದರ್ಶಿ ಗುರಪ್ಪನಾಯ್ಡು ಉಚ್ಛಾಟನೆ

ಜನಪ್ರತಿನಿಧಿ (ಬೆಂಗಳೂರು) : ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಹಿರಿಯ ಮುಖಂಡ ಬಿ ಗುರಪ್ಪ ನಾಯ್ಡು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಲೈಂಗಿಕ ಕಿರುಕುಳ ಹಾಗೂ ಮಹಿಳೆಯೊಬ್ಬರ ಗೌರವಕ್ಕೆ ಧಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಕರ್ನಾಟಕ ಕಾಂಗ್ರೆಸ್ ಮುಖಂಡ ಬಿ ಗುರಪ್ಪ ನಾಯ್ಡು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿ ಆದೇಶಿಸಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), ಶಿಸ್ತು ಕ್ರಮ ಸಮಿತಿ ಅಧ್ಯಕ್ಷ ಕೆ ರೆಹಮಾನ್ ಖಾನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ನಾಯ್ಡು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಗುರಪ್ಪನಾಯ್ಡು ಅವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿರುವುದೇ ಈ ಕ್ರಮಕ್ಕೆ ಕಾರಣ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಪ್ರಕರಣವೇನು ?

ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಗುರಪ್ಪನಾಯ್ಡು ಶಿಕ್ಷಕಿಯೋರ್ವರಿಗೆ ಲೈಂಗಿಕ ಕಿರುಕುಳ ಕೊಟ್ಟಿರುವ ಆರೋಪ ಎದುರಿಸುತ್ತಿದ್ದಾರೆ. ಗುರಪ್ಪನಾಯ್ಡು ವಿರುದ್ದ ಚೆನ್ನಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಜಿಎಸ್ ಬ್ಲೂಮ್ ಫೀಲ್ಡ್ ಚೇರ್ಮನ್ ಆಗಿರುವ ಗುರಪ್ಪ ನಾಯ್ಡ ತ್ಯಾಗರಾಜನಗರದ ತಮ್ಮ ಖಾಸಗಿ ಶಾಲೆಯ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಹೇಳಲಲಾಗುತ್ತಿದೆ.

ಗುರಪ್ಪ ನಾಯ್ಡು ಅವರ ವಿರುದ್ಧ ಐಪಿಸಿ ಸೆಕ್ಷನ್ 354ಎ (ಲೈಂಗಿಕ ಕಿರುಕುಳ), 506 (ಅಪರಾಧ ಬೆದರಿಕೆ), 509 (ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ಮಾತು, ಸನ್ನೆ ಅಥವಾ ಕೃತ್ಯ), 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ) ಮತ್ತು 354 (ಮಹಿಳೆಯ ಮೇಲೆ ಆಕ್ರಮಣ ಅಥವಾ ಕ್ರಿಮಿನಲ್ ಇಚ್ಛೆಯಿಂದ ಅವಳ ನಮ್ರತೆಯನ್ನು ಕೆರಳಿಸುವುದು) ಅಡಿಯಲ್ಲಿ ನವೆಂಬರ್ 26 ರಂದು ಎಫ್ಐಆರ್ ದಾಖಲಿಸಲಾಗಿತ್ತು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!