spot_img
Wednesday, December 4, 2024
spot_img

ತಿರುಪತಿಯಲ್ಲಿ ರಾಜಕೀಯ, ದ್ವೇಷ ಭಾಷಣಕ್ಕೆ ಟಿಟಿಡಿ ನಿಷೇಧ !

ಜನಪ್ರತಿನಿಧಿ (ತಿರುಪತಿ) : ತಿರುಮಲದ ವೆಂಕಟೇಶ್ವರ ಸ್ವಾಮಿಯ ಕ್ಷೇತ್ರದ ಪವಿತ್ರತೆ ಹಾಗೂ ಆಧ್ಯಾತ್ಮಿಕ ಶಾಂತಿಯನ್ನು ಕಾಪಾಡುವ ಉದ್ದೇಶದಿಂದ ರಾಜಕೀಯ ಹಾಗೂ ದ್ವೇಷ ಭಾಷಣಗಳನ್ನು ನಿಷೇಧಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಇಂದು(ಶನಿವಾರ) ಘೋಷಣೆ ಮಾಡಿದೆ.

ಸದಾ ಗೋವಿಂದ ನಾಮಸ್ಮರಣೆ ಮೊಳಗುವ ಪವಿತ್ರ ತಿರುಮಲ ದೈವಸ್ಥಾನದಲ್ಲಿ ಇತ್ತೀಚಿನ ದಿನಗಳಲ್ಲಿ ರಾಜಕೀಯ ನಾಯಕರು ಸೇರಿದಂತೆ ಕೆಲವರು ದೇವರ ದರ್ಶನ ಪಡೆದ ನಂತರ ದೇವಸ್ಥಾನ ಎದುರು ಮಾಧ್ಯಮಗಳ ಮುಂದೆ ರಾಜಕೀಯ ದ್ವೇಷದ ಹೇಳಿಕೆಗಳನ್ನು ನೀಡುವ ಮೂಲಕ ಆಧ್ಯಾತ್ಮಿಕತೆಗೆ ಧಕ್ಕೆ ಉಂಟು ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಟಿಟಿಡಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಈ ನಿರ್ಧಾರಕ್ಕೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡುತ್ತೇವೆ. ಹಾಗೆಯೇ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಟಿಟಿಡಿ ಎಚ್ಚರಿಕೆ ನೀಡಿದ್ದಾರೆ.

ತಿರುಮಲದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದೂಗಳೇ ಆಗಿರಬೇಕು ಎಂದು ಪ್ರತಿಪಾದಿಸಿರುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯ ನೂತನ ಅಧ್ಯಕ್ಷ ಬಿ. ಆರ್.‌ ನಾಯ್ಡು ಅವರು ಇದಕ್ಕಾಗಿ ನಾನು ಕಾರ್ಯ ನಿರ್ವಹಿಸುತ್ತೇನೆ ಎಂದು ಈಚೆಗೆ ಮಾಹಿತಿ ನೀಡಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!