spot_img
Thursday, December 5, 2024
spot_img

ಕುಂದಾಪುರ ಕುಂದೇಶ್ವರ ಲಕ್ಷದೀಪೋತ್ಸವ

ಕುಂದಾಪುರ, ನ.30: ಕುಂದಾಪುರದ ಶ್ರೀ ಕುಂದೇಶ್ವರ ದೇವಸ್ಥಾನದ ಲಕ್ಷ ದೀಪೋತ್ಸವ ಕಾರ್ಯಕ್ರಮ ನವೆಂಬರ್ 30 ಶನಿವಾರ ಬೆಳಿಗ್ಗೆಯಿಂದ ಆರಂಭಗೊಂಡಿತು. ಪೂರ್ವಾಹ್ನ 9ಗಂಟೆಗೆ ಬ್ರಹ್ಮಕಲಶ ಸ್ಥಾಪನೆ, ಕಲಾಭಿವೃದ್ಧಿ ಹೋಮ, ಶತರುದ್ರಾಭಿಷೇಕ, ಕಲಶಾಭಿಷೇಕ,ಮಹಾಪೂಜೆ, ಅನ್ನಸಂತರ್ಪಣೆ, ಪ್ರಸಾದ ವಿತರಣೆ ನಡೆಯಿತು.

ಸೂರ್ಯೋದಯದಿಂದ ಸೂರ್ಯಾಸ್ತಮಾನದವರೆಗೆ ಕುಂದಾಪುರ ತಾಲೂಕಿನ ಭಜನಾ ಮಂಡಳಿಗಳ ಒಕ್ಕೂಟ ಇವರಿಂದ ಶ್ರೀದೇವರ ನಾಮ ಸಂಕೀರ್ತನೆ ಮತ್ತು ಕುಣಿತ ಭಜನೆ ನಡೆಯಿತು. ಸಂಜೆ 5.30ರಿಂದ ರಂಗಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ಲಕ್ಷ ದೀಪೋತ್ಸವ, ಪುಷ್ಪಕ ರಥದಲ್ಲಿ ಶ್ರೀ ದೇವರ ಪುರ ಮೆರವಣಿಗೆ, ಕಟ್ಟೆ ಪೂಜೆ, ಕೆರೆದೀಪ ನಡೆಯಲಿದೆ. ಸಂಜೆ 7 ಗಂಟೆಗೆ ನೃತ್ಯ ವಿದುಷಿ ಪ್ರವಿತಾ ಅಶೋಕ ಅವರ ನಿರ್ದೇಶನದಲ್ಲಿ ನೃತ್ಯ ವಸಂತ ನಾಟ್ಯಾಲಯದ ಕಲಾವಿದೆಯರಿಂದ ನೃತ್ಯ ಸಿಂಚನ, ಶ್ರೀದೇವರ ಪುಷ್ಪಕ ರಥೋತ್ಸವದುದ್ದಕ್ಕೂ ಜಾನಪದ ಮತ್ತು ಸಾಂಸ್ಕೃತಿಕ ವೈಭವ ಪ್ರದರ್ಶನ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!