spot_img
Wednesday, April 1, 2026
spot_img

ಬೆಳ್ವೆ: ಈಜಲು ತೆರಳಿದ ಸ್ನೇಹಿತರಿಬ್ಬರು ನೀರಿನಲ್ಲಿ ಮುಳುಗಿ ಸಾವು

ಶಂಕರನಾರಾಯಣ, ಡಿ.1: ಬೆಳ್ವೆ ಸಮೀಪದ ಗುಮ್ಮೋಲದ ಕಿಂಡಿ ಅಣೆಕಟ್ಟುವಿಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ಅಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು (ಡಿ.1) ಮಧ್ಯಾಹ್ನ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿಗಳಾದ ಶ್ರೀಶ ಆಚಾರ್ (13ವ) ಹಾಗೂ ಜಯಂತ್ (19ವ) ಎಂದು ಗುರುತಿಸಲಾಗಿದೆ. ಶ್ರೀಶ ಹೆಬ್ರಿಯ ಎಸ್‌ಆರ್‌ಎಸ್ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿದ್ದನು. ಮೃತ ಜಯಂತ್ ನಾಯ್ಕ್ ಈ ಹಿಂದೆ ಯಕ್ಷಗಾನ ಕಲಾವಿದರಾಗಿದ್ದರು ಇತ್ತೀಚೆಗೆ ಮೇಳ ಬಿಟ್ಟಿದ್ದು ಬೇರೆ ವೃತ್ತಿ ಮಾಡುತ್ತಿದ್ದರು.

ಒಟ್ಟು ನಾಲ್ಕು ಮಂದಿ ಬಾಲಕರು ರಜೆಯ ಹಿನ್ನೆಲೆಯಲ್ಲಿ ಮನೆ ಸಮೀಪದ ಡ್ಯಾಂಗೆ ಈಜಲು ಹೋಗಿದ್ದರು. ಈ ವೇಳೆ ಶ್ರೀಶ ಹಾಗೂ ಜಯಂತ್ ಅಕಸ್ಮಿಕ ವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಬೆಳ್ವೆ ಸಮೀಪದ ಗೂಮ್ಮೋಲ ಚರ್ಚ್ ಹಿಂಭಾಗದಿಂದ ಕಜ್ಕೆ ಸಂತೆಕಟ್ಟೆ ಸಂಪರ್ಕ ರಸ್ತೆಯ ಬಳಿ ಇರುವ ಕಿಂಡಿ ಅಣೆಕಟ್ಟುವಿನ ಮೇಲ್ಭಾಗದಲ್ಲಿ ಶ್ರೀಶ ಆಚಾರ್, ಜಯಂತ್ ನಾಯ್ಕ್ ಜೊತೆಗೆ ಇನ್ನೊಂದಿಷ್ಟು ಮಕ್ಕಳು ಈಜಲು ತೆರಳಿದ್ದರು ಎನ್ನಲಾಗಿದೆ. ಶ್ರೀಶ ನೀರಿನಲ್ಲಿ ಆಯಾ ತಪ್ಪುತ್ತಿದ್ದಂತೆ ರಕ್ಷಣೆಗೆ ಜಯಂತ್ ನೀರಿಗೆ ಧುಮುಕಿದ್ದು ಇಬ್ಬರು ನೀರು ಪಾಲಾಗಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಇತರ ಮಕ್ಕಳು ಬೊಬ್ಬೆ ಹೊಡೆದಿದ್ದು ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ನೀರಿನಲ್ಲಿ ಮುಳುಗಿದ್ದ ಮಕ್ಕಳ ಹುಡುಕಲು ಮುಂದಾದರು. ತಕ್ಷಣ ಶಂಕರನಾರಾಯಣ ಸ್ಥಳಕ್ಕಾಗಮಿಸಿದ ಶಂಕರನಾರಾಯಣ ಪೊಲೀಸರು ನೀರಿನಲ್ಲಿ ಮುಳುಗಿದ್ದ ಮಕ್ಕಳ ಪತ್ತೆ ಮುಂದಾದರು. ಸ್ಥಳೀಯರು ಪತ್ತೆ ಕಾರ್ಯದಲ್ಲಿ ಸಹಕರಿಸಿದರು. ಕೆಲವೇ ಹೊತ್ತಿನಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ. ಶಂಕರನಾರಾಯಣ ಪೊಲೀಸ್ ಠಾಣಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!