spot_img
Wednesday, December 4, 2024
spot_img

ಫೆಂಗಲ್‌ ಚಂಡಮಾರುತಕ್ಕೆ ತತ್ತರಿಸಿದ ತಮಿಳುನಾಡು | ಅವಶೇಷಗಳಡಿ ಏಳು ಮಂದಿ | ಮುಂದುವರಿದ ಕಾರ್ಯಾಚರಣೆ

ಜನಪ್ರತಿನಿಧಿ (ತಿರುವಣ್ಣಾಮಲೈ) : ಫೆಂಗಲ್ ಚಂಡಮಾರುತದ ಪರಿಣಾಮವಾಗಿ ತಮಿಳನಾಡಿನ ತಿರುವಣ್ಣಾಮಲೈನಲ್ಲಿ ಭೂ ಕುಸಿತ ಸಂಭವಿಸಿದ್ದು, ಏಳು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ತಂಡವೊಂದು ಸ್ಥಳಕ್ಕೆ ಧಾವಿಸಿದ್ದು, ಸುಮಾರು 12 ಗಂಟೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ, ಕಮಾಂಡೋ, ತಮಿಳುನಾಡಿನ ಅಗ್ನಿ ಶಾಮಕ ದಳ ಒಳಗೊಂಡಂತೆ ಸುಮಾರು 170 ಜನರು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೃಹತ್ ಗಾತ್ರದ ಕಲ್ಲುಗಳು ಇರುವುದರಿಂದ ಸಂತ್ರಸ್ತರನ್ನು ಪತ್ತೆ ಹಚ್ಚಲು ಸ್ಕ್ಯಾನಿಂಗ್ ಯಂತ್ರಕ್ಕೆ ಕಷ್ಟವಾಗುತ್ತಿದೆ ಎಂದು ರಕ್ಷಣಾಧಿಕಾರಿ ಸುವಿಕ್ಕೈನ್ ರಾಜ್ ರಾಷ್ಟ್ರೀಯ ಸುದ್ದಿ ಸಂಸ್ಥೆಗಳಿಗೆ ತಿಳಿಸಿರುವುದಾಗಿ ವರದಿಯಾಗಿದೆ.

ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ಮಾನವಶಕ್ತಿಯನ್ನು ಅವಲಂಬಿಸಿದ್ದೇವೆ. ಸಂತ್ರಸ್ತರು ಕೆಸರಿನಡಿಯಲ್ಲಿ ಹೂತು ಹೋಗಿರುವುದು ದೃಢಪಟ್ಟಿದ್ದು, ಮೊದಲು ಕಲ್ಲುಗಳನ್ನು ತೆಗೆಯುವುದು ನಮ್ಮ ಆದ್ಯತೆಯಾಗಿದೆ ಎಂದು ಅವರು ಮಾಹಿತಿನೀಡಿದ್ದಾರೆ.

ತಂಡ ಪ್ರಸ್ತುತ ಅವಶೇಷಗಳನ್ನು ತೆರವುಗೊಳಿಸಲು ಅರೆ, ಪಿಕಾಸಿಯಂತಹ ಸರಳ ಸಾಧನಗಳನ್ನು ಬಳಸುತ್ತಿದೆ. ಜೆಸಿಬಿ, ಅಗೆಯುವ ಯಂತ್ರ ತರಲು ಪ್ರಯತ್ನಿಸುತ್ತಿದ್ದೇವೆ, ಆದರೆ ಭಾರವಾದ ಕಲ್ಲುಗಳು ಯಂತ್ರೋಪಕರಣಗಳನ್ನು ನಿರ್ವಹಿಸಲು ಸವಾಲಾಗುತ್ತಿವೆ ಎಂದು ಅಧಿಕೃತ ಮೂಲಗಳು ವಿವರಿಸಿವೆ.

ಸಚಿವ ಇ.ವಿ. ವೇಲು, ಕಲೆಕ್ಟರ್ ಬಾಸ್ಕರ ಪಾಂಡಿಯನ್ ಮತ್ತು ಇತರ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ಮಾಡಿದರು ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗಿದೆ ಎಂದು ಖಾತ್ರಿಪಡಿಸಿಕೊಂಡರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!