spot_img
Wednesday, April 1, 2026
spot_img

2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿ.ಯು.ಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಜನಪ್ರತಿನಿಧಿ (ಬೆಂಗಳೂರು) : 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಯನ್ನು ಇದೀಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಗೊಳಿಸಿದೆ.

ರಾಜ್ಯದ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಶಾಲಾ/ಕಾಲೇಜುಗಳ ಪ್ರಕಟಣಾ ಫಲಕ ದಲ್ಲಿ ಈ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಮಂಡಳಿ ಸೂಚಿಸಿದೆ.

2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ
ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ ಮಾರ್ಚ್‌ 20ರಿಂದ ಏಪ್ರಿಲ್ 02 ರವರೆಗೆ ಪರೀಕ್ಷೆ ನಡೆಸಲಾಗುತ್ತದೆ.

20-03-2025 ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ (ಪ್ರಥಮ ಭಾಷೆ).
22-03-2025 ಸಮಾಜ ವಿಜ್ಞಾನ
24-03-2025 ಇಂಗ್ಲಿಷ್, ಕನ್ನಡ (ದ್ವಿತೀಯ ಭಾಷೆ)
27-03-2025 ಗಣಿತ
29-03-2025 ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ (ತೃತೀಯ ಭಾಷೆ).
02-04-2025 ವಿಜ್ಞಾನ

ಎನ್‌ಎಸ್‌ಕ್ಯೂಎಫ್‌ ವಿಷಯಗಳು, ಜೆಟಿಎಸ್‌ ವಿಷಯಗಳು, ಇತರೆ ಕೋರ್‌ ಸಬ್ಜೆಕ್ಟ್‌ಗಳ ಪರೀಕ್ಷೆ ಬರೆಯುವವರು, ವಿಷಯವಾರು ತಾತ್ಕಾಲಿಕ ವೇಳಾಪಟ್ಟಿಗೆ ವೆಬ್‌ಸೈಟ್‌ https://kseab.karnataka.gov.in ಗೆ ಭೇಟಿ ನೀಡಬಹುದು.

2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ

ದ್ವಿತೀಯ ಪಿಯುಸಿ ಪರೀಕ್ಷೆ-1 ಅನ್ನು ದಿನಾಂಕ 01-03-2025 ರಿಂದ 19-03-2025 ರವರೆಗೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಗೊಳಿಸಲಾಗಿದೆ.

ಕನ್ನಡ 01-03-2025
ಗಣಿತಶಾಸ್ತ್ರ, ಶಿಕ್ಷಣಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ 03-03-2025
ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ 05-03-2025
ಇತಿಹಾಸ, ಭೌತಶಾಸ್ತ್ರ 07-03-2025
ಹಿಂದಿ 08-03-2025
ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ , ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ 10-03-2025
ಮೂಲ ಗಣಿತ, ಮನಃಶಾಸ್ತ್ರ, ರಸಾಯನಶಾಸ್ತ್ರ 12-03-2025
ಅರ್ಥಶಾಸ್ತ್ರ 13-03-2025
ಇಂಗ್ಲಿಷ್ 15-03-2025
ಭೂಗೋಳಶಾಸ್ತ್ರ, ಜೀವಶಾಸ್ತ್ರ 17-03-2025
ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ 18-03-2025
ಮಾಹಿತಿ ತಂತ್ರಜ್ಞಾನ, ರೀಟೈಲ್ ಆಟೋಮೊಬೈಲ್ , ಹೆಲ್ತ್‌ಕೇರ್ , ಬ್ಯೂಟಿ ಅಂಡ್ ವೆಲ್‌ನೆಸ್‌ , ಹಿಂದುಸ್ತಾನಿ ಸಂಗೀತ 19-03-2025

ತಾತ್ಕಾಲಿಕ ವೇಳಾಪಟ್ಟಿಗೆ ಆಕ್ಷೇಪಣೆ ಆಹ್ವಾನ 

ಮಂಡಲಿಯಿಂದ ಬಿಡುಗಡೆ ಮಾಡಲಾದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಆಕ್ಷೇಪಣೆಗೆ ದಿನಾಂಕ: 02-12-2024 ರಿಂದ 16-12-2024 ರವರೆಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ.

ಆಕ್ಷೇಪಣೆಯನ್ನು ಮಂಡಲಿಯ ಇಮೇಲ್ ವಿಳಾಸ: chairpersonksea@gmail.com ಕ್ಕೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560 00) ಇಲ್ಲಿಗೆ ನಿಗದಿತ ಸಮಯದೊಳಗಾಗಿ ಕಳುಹಿಸುವುದು.

ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ. ನಿಗದಿತ ಸಮಯದೊಳಗಾಗಿ ಕಳುಹಿಸುವುದು.

ಈ ಮೇಲಿನ ತಾತ್ಕಾಲಿಕ ವೇಳಾಪಟ್ಟಿಗೆ ಯಾವುದೇ ರೀತಿಯ ಗಂಭೀರ ಆಕ್ಷೇಪಣೆಗಳು ಕಾರಣ ಸಹಿತ ಸ್ವೀಕೃತವಾದಲ್ಲಿ ಮಾತ್ರ ದಿನಾಂಕ ಬದಲಾವಣೆ ಸಾಧ್ಯತೆ ಇರುತ್ತದೆ. ಒಂದು ವೇಳೆ ಇತರೆ ಪರೀಕ್ಷೆಗಳ ದಿನಗಳು, ಇತರೆ ಕಾರಣಗಳು ಗಂಭೀರವಾಗಿ ಪರಿಣಾಮ ಬೀರುವುದಿಲ್ಲ ಎಂದಲ್ಲಿ ಇದೇ ದಿನಾಂಕಗಳಂದು ಪರೀಕ್ಷೆ ನಡೆಸುವ ಸಾಧ್ಯತೆ ಇರುತ್ತದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!