spot_img
Thursday, April 2, 2026
spot_img

ಬಿಜೆಪಿ ಶಾಸಕರು, ಸಂಸದರದ್ದು ಉತ್ತರ ಕುಮಾರನ ಪೌರುಷ : ವಿಕಾಸ್‌ ಹೆಗ್ಡೆ ಆಕ್ರೋಶ

ಜನಪ್ರತಿನಿಧಿ (ಉಡುಪಿ) : ಜಿಲ್ಲಾ ಕೆ ಡಿ ಪಿ ಸಭೆಯನ್ನು ಟೀಕಿಸುವ ಮೊದಲು ಜಿಲ್ಲೆಯ ಬಿಜೆಪಿ ಶಾಸಕರುಗಳು ಜಿಲ್ಲೆಯಲ್ಲಿ ಸುದೀರ್ಘ ಅವಧಿಯಿಂದ ಅಧಿಕಾರದಲ್ಲಿ ಇರುವ ಬಿಜೆಪಿ ಸಂಸದರ ಹಾಗೂ ಶಾಸಕರುಗಳ ಸಾಧನೆ ಏನು ಎನ್ನುವುದನ್ನು ಜನರ ಮುಂದೆ ಇಡಲಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಕಿಡಿ ಕಾರಿದ್ದಾರೆ.

ಉಡುಪಿ ಜಿಲ್ಲೆಯ ಜ್ವಲಂತ ಸಮಸ್ಯೆಗಳಾದ ಅಕ್ರಮ-ಸಕ್ರಮ, ಅರ್ಜಿ ನಮೂನೆ 94 ಸಿ ಹಾಗೂ 94 ಸಿಸಿ  ಅಡಿ ಭೂ ಮಂಜೂರಾತಿ, ಸರ್ಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ, ಪಶ್ಚಿಮ ವಾಹಿನಿ ಯೋಜನೆಯಡಿ ನಡೆದ ಕಿಂಡಿ ಅಣೆಕಟ್ಟುಗಳ ಅಸಮರ್ಪಕ ನಿರ್ವಹಣೆ ಹಾಗೂ ಕೋಟ್ಯಂತರ ರೂಪಾಯಿ ಅವ್ಯವಹಾರ, ಮರಳು, ಜಲ್ಲಿ, ಕಲ್ಲು ಇತ್ಯಾದಿ ಪೂರೈಕೆಯಲ್ಲಿ ಸಮಸ್ಯೆ, ಸ್ಥಳೀಯ ಸಂಸ್ಥೆಗಳಲ್ಲಿ ದೈನಂದಿನ ಜನಸಾಮಾನ್ಯರ ವ್ಯವಹಾರಗಳಲ್ಲಿ ಅನಗತ್ಯ ಕಿರುಕುಳ, ಪ್ರವಾಸೋದ್ಯಮದಲ್ಲಿ ಹಿನ್ನಡೆ, ಸಿ ಆರ್ ಝೆಡ್ ಸಮಸ್ಯೆ, ಡೀಮ್ಡ್ ಅರಣ್ಯ ಸಮಸ್ಯೆ, ಕಸ್ತೂರಿ ರಂಗನ್ ವರದಿ, ಪರಿಸರ ಸೂಕ್ಷ್ಮ ವಲಯ ಈ ಎಲ್ಲಾ ಸಮಸ್ಯೆಗಳಿಗೆ ಬಿಜೆಪಿ ಸರ್ಕಾರ ಹಾಗೂ ಬಿಜೆಪಿಯ ಚುನಾಯಿತ ಪ್ರತಿನಿಧಿಗಳು ಕಾರಣ ಎಂದವರು ಆಕ್ರೋಶ ಹೊರ ಹಾಕಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ರವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಹಾಗೂ ಜಿಲ್ಲೆಯಲ್ಲಿನ ಜ್ವಲಂತ ಸಮಸ್ಯೆಗಳ ಪರಿಹಾರದ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಉಡುಪಿ ಬಿಜೆಪಿಯ ಚುನಾಯಿತ ಪ್ರತಿನಿಧಿಗಳು ಜಿಲ್ಲೆಯ ಅಭಿವೃದ್ಧಿಯನ್ನು ಕಡೆಗಣಿಸಿ ಈಗ ಪತ್ರಿಕಾಗೋಷ್ಠಿ ನಡೆಸಿ ಕಾಂಗ್ರೆಸ್ ಸರ್ಕಾರ ಹಾಗೂ ಉಸ್ತುವಾರಿ ಸಚಿವರನ್ನು ಟೀಕಿಸುವುದು ಅವರ ರಾಜಕೀಯ ದಿವಾಳಿತನವಾಗಿದೆ. ಈಗ ಜಿಲ್ಲೆಯ ಜನರಿಗೂ ಉಡುಪಿ ಜಿಲ್ಲೆಯ ಬಿಜೆಪಿಯ ಚುನಾಯಿತ ಪ್ರತಿನಿದಿನಗಳದ್ದು ಉತ್ತರ ಕುಮಾರನ ಪೌರುಷ ಎಂದು ಅರ್ಥವಾಗಿದೆ. ಇನ್ನಾದರೂ ಜಿಲ್ಲೆಯ ಬಿಜೆಪಿಯ ಶಾಸಕರು ಹಾಗೂ ಸಂಸದರು ಅನಗತ್ಯ ಟೀಕೆಗಳನ್ನು ಮಾಡುವುದನ್ನು ಬಿಟ್ಟು ಜಿಲ್ಲೆಯ ಅಭಿವೃದ್ಧಿ ಬಗ್ಗೆ ಪ್ರಾಮಾಣಿಕ ಪ್ರಯತ್ನ ನಡೆಸಲಿ ಎಂದವರು ಒತ್ತಾಯಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!