spot_img
Wednesday, December 4, 2024
spot_img

ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿದ್ದಾಗಿದೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ತುಮಕೂರು) : ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆಯು ವೇಗ ಪಡೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ತುಮಕೂರು ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ಕಾರದ ಸವಲತ್ತುಗಳ ವಿತರಣೆ, ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಇಡೀ ದೇಶದಲ್ಲಿ ರಾಜ್ಯದ ಜಿಎಸ್‌ಡಿಪಿ ನಂಬರ್ ಒನ್ ಆಗಿದೆ. ದೇಶದ ಜಿಡಿಪಿ ಬೆಳವಣಿಗೆ ದರ ಇನ್ನೂ 8 ಇದೆ. ಆದರೆ ರಾಜ್ಯದ ಜಿಎಸ್‌ಡಿಪಿ ಬೆಳವಣಿಗೆ ದರ 10ಕ್ಕೆ ತಲುಪಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇದು ಸಾಧ್ಯವಾಗಿದ್ದು ರಾಜ್ಯದ ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದವರ ಒಟ್ಟಾರೆ ಕೊಡುಗೆಯಿಂದ ಎಂದರು.

ತುಮಕೂರು ಜಿಲ್ಲೆಯಲ್ಲಿ ಒಂದೂವರೆ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ಇಂದು ನೇರವಾಗಿ ತಲುಪಿವೆ. ಪ್ರತೀ ಜಿಲ್ಲೆಯಲ್ಲೂ ಲಕ್ಷ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ತಲುಪುತ್ತಲೇ ಇವೆ.  ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ನಾವು ಕೊಡುತ್ತಲೇ ಹೋಗುತ್ತೇವೆ. ಜೊತೆಗೆ ಹಿಂದುಳಿದವರ, ದುರ್ಬಲರ ಏಳಿಗೆಗೆ ವಿಶೇಷ ಯೋಜನೆಗಳನ್ನೂ ರೂಪಿಸುತ್ತೇವೆ. ಎಸ್‌ಸಿಎಸ್‌ಪಿ / ಟಿಎಸ್‌ಪಿ ಕಾಯ್ದೆಯನ್ನು ಜಾರಿ ಮಾಡಿದ್ದು ನಮ್ಮ ಸರ್ಕಾರ ಮಾತ್ರವೆಂದರು.

ನಮ್ಮ ಸರ್ಕಾರ ಮಹಿಳೆಯರ ಪರವಾದ ಸರ್ಕಾರ. ನಮ್ಮ ಸರ್ಕಾರ ಎಲ್ಲಾ ಜಾತಿಯ ಬಡವರ, ಹಿಂದುಳಿದವರ, ದಲಿತರ ಪರವಾಗಿರುವ ಸರ್ಕಾರ. ಹಳ್ಳಿಗಳ, ತಾಲ್ಲೂಕುಗಳ, ಜಿಲ್ಲೆಗಳ ಅಭಿವೃದ್ಧಿಯಿಂದ ಮಾತ್ರ ರಾಜ್ಯದ, ದೇಶದ ಅಭಿವೃದ್ಧಿ ಸಾಧ್ಯ ಎನ್ನುವುದು ನಮ್ಮ ನಂಬಿಕೆ. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಜಿಎಸ್‌ಡಿಪಿ ಪ್ರಗತಿ ಕಾಣಲು ಸಾಧ್ಯ. ಎಲ್ಲಾ ಧರ್ಮದ, ಎಲ್ಲಾ ಜಾತಿಯ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ಜಿಡಿಪಿ ಬೆಳವಣಿಗೆಯಾಗುತ್ತದೆ. ಹೀಗಾಗಿ ನಾವು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವಾಗ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರನ್ನೂ ಒಳಗೊಳ್ಳುವಂತೆ ರೂಪಿಸುತ್ತೇವೆ. ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿದ್ದಾಗಿದೆ. ಈ ರೀತಿ ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!