spot_img
Wednesday, December 4, 2024
spot_img

ಫೆಂಗಲ್‌ ಚಂಡಮಾರುತ ಎಫೆಕ್ಟ್‌ : ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ !

ಜನಪ್ರತಿನಿಧಿ (ಮಂಗಳೂರು) : ಫೆಂಗಲ್‌ ಚಂಡಮಾರುತದ ಪರಿಣಾಮವಾಗಿ ಭಾರೀ ಮಳೆಯಾಗುತ್ತಿರುವ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಡಿ.3 ರಂದು (ಮಂಗಳವಾರ) ಪ್ರಾಥಮಿಕ, ಪ್ರೌಢ ಶಿಕ್ಷಣ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

ಕೊಡಗು, ಕಾಸರಗೋಡು ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ನಾಳೆ ರಜೆ
ಫೆಂಗಲ್‌ ಚಂಡಮಾರುತದ ಕಾರಣ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ, ಕಾಲೇಜು (ಪದವಿ, ಸ್ನಾತಕೋತ್ತರ ಹೊರತು) ಗಳಿಗೆ ಡಿ.3ರ ಮಂಗಳವಾರ ಜಿಲ್ಲಾಧಿಕಾರಿ ವೆಂಕಟರಾಜ ರಜೆ ಘೋಷಣೆ ಮಾಡಿದ್ದಾರೆ.

ಇನ್ನು, ಕೇರಳದ ಕಾಸರಗೋಡು ಜಿಲ್ಲೆಯ ಎಲ್ಲಾ ವೃತ್ತಿ ಪರ ಕಾಲೇಜುಗಳ ಸಹಿತ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಡಿ.3ರ ಮಂಗಳವಾರ ಜಿಲ್ಲಾಧಿಕಾರಿ ಇಂಪಶೇಖರ ರಜೆ ಘೋಷಿಸಿದ್ದಾರೆ. ಟ್ಯೂಷನ್ ಕೇಂದ್ರಗಳು, ಮದರಸಗಳಿಗೂ ರಜೆ ಅನ್ವಯವಾಗುತ್ತದೆ. ಮಾದರಿ ವಸತಿ ಶಾಲೆಗಳಿಗೆ ರಜೆ ಅನ್ವಯ ಆಗುವುದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!